ಯಾವ ಕ್ಷಣದಲ್ಲೂ ನಿಗಮ‌ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆಯಾಗಬಹುದು : 39 ಕಾರ್ಯಕರ್ತರಿಗೆ, 36 ಶಾಸಕರಿಗೆ ಅವಕಾಶ ; ಡಿಸಿಎಂ ಶಿವಕುಮಾರ

ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ಪಟ್ಟಿ ಈಗಾಗಲೇ ಅಂತಿಮಗೊಂಡಿದ್ದು, ಯಾವುದೇ ಕ್ಷಣದಲ್ಲಿ ಪ್ರಕಟವಾಗಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ.
ವಿಧಾನಸೌಧದ ಬಳಿ ಗುರುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, 39 ಮಂದಿ ಕಾರ್ಯಕರ್ತರಿಗೆ ಹಾಗೂ 36 ಶಾಸಕರನ್ನು ಮೊದಲ ಪಟ್ಟಿಯಲ್ಲಿ ನೇಮಕಾತಿ ಮಾಡಲಾಗುತ್ತದೆ. ಪಟ್ಟಿ ಯಾವುದೇ ಕ್ಷಣದಲ್ಲಾದರೂ ಪಟ್ಟಿ ಬಿಡುಗಡೆ ಆಗಬಹುದು ಎಂದರು.
ಕಾರ್ಯಕರ್ತರು ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಹೀಗಾಗಿ ನಿಗಮ ಮಂಡಳಿಗೆ ಅವರನ್ನು ನೇಮಕ ಮಾಡುವುದು ಅವರ ಹಕ್ಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟಂತೆ ಶುಕ್ರವಾರ (ಜನವರಿ 19) ಸಂಜೆ 4:30 ಕ್ಕೆ ರಾಜ್ಯ ಚುನಾವಣಾ ಸಮಿತಿಯ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಭೇಟಿಗಾಗಿ ಶುಕ್ರವಾರ ಆಗಮಿಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಅವರನ್ನು ಆಹ್ವಾನಿಸಲು ಹಾಗೂ ಕಾರ್ಯಕ್ರಮಕ್ಕೆ ಹೋಗಬೇಕಿದೆ. ಜನವರಿ 19 ರಂದು ಬೆಳಿಗ್ಗೆ ನಿಗದಿಯಾಗಿದ್ದ ಸಭೆ ಸಂಜೆ 4:30ಕ್ಕೆ ನಡೆಯಲಿದೆ. ಲೋಕಸಭಾ ಚುನಾವಣೆ ಬಗ್ಗೆ ಮೊದಲ ಮೀಟಿಂಗ್ ಆಗಿದೆ. ವೀಕ್ಷಕರು ಲಿಸ್ಟ್ ‌ಕೊಟ್ಟಂತೆ ಅದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಸಚಿವರು ಸ್ಪರ್ಧಿಸಲು ಹಿಂಜರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಕ್ಷದ ಹೈಕಮಾಂಡ್​ ಹೇಳುವುದನ್ನು ನಾನು ಹಾಗೂ ಸಚಿವರು ಕೇಳಬೇಕಾಗುತ್ತದೆ. ಪಕ್ಷ ಹೇಳಿದಂತೆ ಎಲ್ಲರೂ ಕೇಳಬೇಕು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

 

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement