ಫೆ.16ಕ್ಕೆ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು : ರಾಜ್ಯ ವಿಧಾನಮಂಡಲ ಅಧಿವೇಶನ ಫೆಬ್ರವರಿ 12ರಿಂದ ಆರಂಭವಾಗಲಿದ್ದು, ಫೆಬ್ರವರಿ 23ರವರೆಗೆ ನಡೆಯಲಿದೆ. ಫೆಬ್ರವರಿ 16ರಂದು ರಾಜ್ಯ ಬಜೆಟ್​ ಮಂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಧಾನಮಂಡಲ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಈ ಕುರಿತು ಗುರುವಾರ ನಡೆದ ಸಚಿವ ಸಂಪುಟಲ್ಲಿ ಚರ್ಚೆ ಮಾಡಿ ತೀರ್ಮಾನಿಸಲಾಗಿದೆ. ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 2024 -25ನೇ ಸಾಲಿನ ಬಜೆಟ್‌ ಮಂಡನೆಗೆ ಈಗಾಗಲೇ ಇಲಾಖಾವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆಗೆ ಮಾರ್ಚ್‌ನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16ರಂದು ಬಜೆಟ್ ಮಂಡಿಸಲು ತೀರ್ಮಾನಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement