ಇದು ಕಾಂಗ್ರೆಸ್ ಸರ್ಕಾರವೋ? ಆರ್ ಎಸ್ ಎಸ್ ಸರ್ಕಾರವೋ ? :ಸಿಸಿಬಿ ವಿಚಾರಣೆ ಬೆನ್ನಲ್ಲೇ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧವೇ ಹರಿಹಾಯ್ದ ಬಿ.ಕೆ. ಹರಿಪ್ರಸಾದ

ಬೆಂಗಳೂರು: ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿಧಾನ ಪರಿಷತ್‌ ಬಿಕೆ ಹರಿಪ್ರಸಾದ (BK Hari Prasad) ಅವರನ್ನು ಶುಕ್ರವಾರ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಈ ನಡೆಯಿಂದ ಅವರು ತಮ್ಮದ ಪಕ್ಷದ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಇದೇನು ಕಾಂಗ್ರೆಸ್ ಸರ್ಕಾರವೋ?, ಬೇರೆ ಸರ್ಕಾರವೋ ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಗೋಧ್ರಾ ರೀತಿಯ ಘಟನೆ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದ ಬಿ.ಕೆ. ಹರಿಪ್ರಸಾದ​ ಅವರನ್ನು ಶುಕ್ರವಾರ ಕೆಕೆ ಗೆಸ್ಟ್​​ಹೌಸ್​ನಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದರು. ಇದಕ್ಕೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವೇ?.. ಆರ್ ಎಸ್ ಎಸ್ ಸರ್ಕಾರವೇ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ನನಗೆ ವಿವಿಐಪಿ ಟ್ರೀಟ್​ಮೆಂಟ್​​ ಬೇಡ, ಬೇಕಿದ್ದರೆ ನನ್ನನ್ನು ಅರೆಸ್ಟ್ ಮಾಡಿ ಎಂದು ಕಿಡಿಕಾರಿದ್ದಾರೆ.ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ನನಗೆ ಅರ್ಥವಾಗುತ್ತಿಲ್ಲ. ಬೇಕಿದ್ದರೆ ಮಂಪರು ಪರೀಕ್ಷೆ ಮಾಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ಸ್ಟೇಷನ್​​ಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಿ. ನನ್ನ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಕೂಡ ಮಂಪರು ಪರೀಕ್ಷೆಗೆ ಒಳಪಡಿಸಲಿ. ನನ್ನ ಪರಿಸ್ಥಿತಿಯೇ ಹೀಗಾದರೆ ಕಾಂಗ್ರೆಸ್ ಕಾರ್ಯಕರ್ತರ ಕತೆ ಏನು? ಎಂದು ಪ್ರಶ್ನಿಸಿದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆಗೆ ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಹೇಳಿಕೆಗೆ ಅವರ ವಿರುದ್ಧ ಕ್ರಮ ಆಗಿಲ್ಲ. ಆದರೆ ನನ್ನ ವಿಚಾರಣೆಗೆ ಪೊಲೀಸರು ಬಂದಿದ್ದಾರೆ. ನಾನು ಇವರ ಬೆದರಿಕೆಗಳಿಗೆಲ್ಲ ಜಗ್ಗುವುದಿಲ್ಲ. ಅಂದು ಕೊಟ್ಟ ಹೇಳಿಕೆಗೆ ನಾನು ಬದ್ಧನಿದ್ದೇನೆ. ರಾಮ ಮಂದಿರಕ್ಕೆ ಹೋಗುವವರಿಗೆ ಸೂಕ್ತ ರಕ್ಷಣೆ ನೀಡಬೇಕು’ ಎಂದು ಹರಿಪ್ರಸಾದ​ ಒತ್ತಾಯಿಸಿದರು.
ಸರ್ಕಾರದ ಜವಾಬ್ದಾರಿ ಬಗ್ಗೆ ಮಾತನಾಡಿದ್ದೆ. ನಾನು, ನನ್ನ ತಿಳಿವಳಿಕೆ, ಸಲಹೆಯನ್ನ ಬೇರೆ ರೀತಿಯಲ್ಲಿ ಅರ್ಥೈಸಿಕೊಂಡರೆ ನಾನು ಜವಾಬ್ದಾರನಲ್ಲ. ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಬೇಕಾದರೆ ಸ್ಚೇಷನ್ ಗೆ ಕರೆದುಕೊಂಡು ಹೋಗಿ ವಿಚಾರಣೆ ಮಾಡಿ ಎಂದು ಹೇಳಿದ್ದೇನೆ. ನಮ್ಮದು ಅದ್ಭುತವಾದ ಸರ್ಕಾರ ಎಂದು ಟೀಕಿಸಿದರು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement