ಕಲ್ಲಡ್ಕ ಪ್ರಭಾಕರ ಭಟ್‌ಗೆ ಜಾಮೀನು ಕೊಡಿಸಿದ ವಕೀಲ ಕಾಂಗ್ರೆಸ್‌ನಿಂದ ಉಚ್ಚಾಟನೆ

ಮಂಡ್ಯ: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕ‌ರ ಭಟ್‌ ಅವರಿಗೆ ನಿರೀಕ್ಷಣಾ ಜಾಮೀನು ಕೊಡಿಸಲು ವಾದಿಸಿದ್ದ ವಕೀಲರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಶ್ರೀರಂಗಪಟ್ಟಣ ತಾಲೂಕು‌ ಕಾಂಗ್ರೆಸ್‌ ಕಾನೂನು ಘಟಕದ ಅಧ್ಯಕ್ಷ ಡಿ.ಚಂದ್ರೇಗೌಡ ಅವರನ್ನು ಪಕ್ಷದ ಕಾನೂನು ಘಟಕದ ಜಿಲ್ಲಾಧ್ಯಕ್ಷ ಗೌರಿಶಂಕರ ಅವರು ಪಕ್ಷದಿಂದ ವಜಾಗೊಳಿಸಿ ಆದೇಶಿಸಿದ್ದಾರೆ. ಇತ್ತೀಚೆಗಷ್ಟೇ ಅವರನ್ನು ಪಕ್ಷದ ತಾಲೂಕು ಘಟಕದ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.
ಮುಸ್ಲಿಂ ಮಹಿಳೆಯರ ಕುರಿತು ಆಕ್ಷೇಪಾರ್ಹ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ಟರ ವಿರುದ್ಧ ಪ್ರಕರಣ ದಾಖಲಾಗಿತ್ತು. ಡಿಸೆಂಬರ್ 23ರಂದು ಶ್ರೀರಂಗಪಟ್ಟಣದ ಸಂಕೀರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ್ದರು.

ಕಲ್ಲಡ್ಕ ಪ್ರಭಾಕರ ವಿರುದ್ಧ ಶ್ರೀರಂಗಪಟ್ಟಣದ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣದ ಸಂಬಂಧ ಅವರ ಪರವಾಗಿ ವಾದ ಮಂಡನೆ ‌ಮಾಡಿದ್ದ ವಕೀಲ ಚಂದ್ರೇಗೌಡ ಅವರು ಜಾಮೀನು ಕೊಡಿಸಿದ್ದರು.
ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ ಭಟ್‌ ಪರವಾಗಿ ವಾದ ಮಂಡನೆ ಮಾಡಿ ಜಾಮೀನು ಕೊಡಿಸಿರುವುದು ಪಕ್ಷದ ಕಾನೂನು ಘಟಕದ ನಿಯಮಗಳಿಗೆ ವಿರುದ್ಧವಾಗಿರುವುದರಿಂದ ಚಂದ್ರೇಗೌಡ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿರುವುದಾಗಿ ಜಿಲ್ಲಾ ಕಾಂಗ್ರೆಸ್‌ನ ಕಾನೂನು ಘಟಕದ ಅಧ್ಯಕ್ಷರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement