ಅಂಕೋಲಾ : ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇಬ್ಬರು ಪದ್ಮಶ್ರೀ ಪುರಸ್ಕೃತರಿಗೆ ಆಹ್ವಾನ

ಕಾರವಾರ: ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22 ರಂದು ನಡೆಯಲಿರುವ ‘ಪ್ರಾಣ ಪ್ರತಿಷ್ಠೆ’ ಸಮಾರಂಭಕ್ಕೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಇಬ್ಬರು ಪದ್ಮಶ್ರೀ ಪುರಸ್ಕೃತರನ್ನು ವಿಶೇಷವಾಗಿ ಆಹ್ವಾನಿಸಲಾಗಿದೆ.
ಅಂಕೋಲಾದ ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ (Sukri Bommagowda) ಹಾಗೂ ತುಳಸಿ ಗೌಡ (Tulasi Gowda) ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಪ್ರಾಂತ್ಯ ಪ್ರಚಾರಕರು ಆಹ್ವಾನ ಪತ್ರಿಕೆ ನೀಡಿ ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ವಿಶೇಷವಾಗಿ ಆಹ್ವಾನಿಸಲಾಗಿದೆ.

ಹಾಲಕ್ಕಿ ಹಾಡುಗಳ ಖಜಾನೆಯಾದ ಸುಕ್ರಿ ಬೊಮ್ಮಗೌಡ ಜಾನಪದ ಹಾಗೂ ಸಾಮಾಜಿಕ ಸೇವಾ ಕ್ಷೇತ್ರವನ್ನು ಗುರುತಿಸಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ಅದರಂತೆ ಸಾವಿರಾರು ಮರಗಳನ್ನು ಬೆಳೆಸುವ ಮೂಲಕ ಪರಿಸರ ರಕ್ಷಣೆ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ತುಳಸಿ ಗೌಡ ಅವರಿಗೂ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಈಗ ಅವರಿಬ್ಬರಿಗೂ ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.
ಜನವರಿ 22 ರಂದು ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ದೇಶಾದ್ಯಂತ 8000ಕೂ ಹೆಚ್ಚು ಜನರಿಗೆ ಆಮಂತ್ರಣ ನೀಡಲಾಗುತ್ತಿದೆ.

ಪ್ರಮುಖ ಸುದ್ದಿ :-   ಅಪಘಾತದಲ್ಲಿ ಮಗ ಸಾವು ; ಸುದ್ದಿ ಕೇಳಿ ಆಘಾತದಿಂದ ತಾಯಿಯೂ ಕುಸಿದುಬಿದ್ದು ಸಾವು

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement