ಬೆಂಗಳೂರು : ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಂಚ್ರ ವರಾಳೆ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸ್ಸು ಮಾಡಿದ ಬೆನ್ನಲ್ಲೇ, ಅವರ ಪದೋನ್ನತಿಯಿಂದ ತೆರವಾಗುವ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾ. ಪಿ.ಎಸ್. ದಿನೇಶ ಕುಮಾರ ಅವರ ಹೆಸರನ್ನು ಕೊಲಿಜಿಯಂ ಶುಕ್ರವಾರ ಶಿಫಾರಸ್ಸು ಮಾಡಿದೆ.
ನ್ಯಾಯಮೂರ್ತಿ ದಿನೇಶಕುಮಾರ ಅವರು 2015ರಿಂದ ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶರಾಗಿದ್ದು, 2024ರ ಫೆಬ್ರವರಿ 24ರಂದು ನಿವೃತ್ತರಾಗಲಿದ್ದಾರೆ.
ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶರ ಹಿರಿತನದಲ್ಲಿ, ನ್ಯಾಯಮೂರ್ತಿ ದಿನೇಶಕುಮಾರ ಅವರು ಪ್ರಸ್ತುತ ಆಂಧ್ರಪ್ರದೇಶ ಹೈಕೋರ್ಟ್ನಲ್ಲಿ ಕರ್ತವ್ಯನಿರ್ವಹಿಸುತ್ತಿರುವ ನ್ಯಾಯಮೂರ್ತಿ ನರೇಂದರ ಜಿ ನಂತರ ಎರಡನೇ ಹಿರಿಯರಾಗಿದ್ದಾರೆ ಎಂಬ ಅಂಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ, ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರನ್ನೊಳಗೊಂಡ ಕೊಲಿಜಿಯಂ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.
2015 ರಲ್ಲಿ ನ್ಯಾಯಪೀಠಕ್ಕೆ ಬಡ್ತಿ ಪಡೆಯುವ ಮೊದಲು, ನ್ಯಾಯಮೂರ್ತಿ ದಿನೇಶಕುಮಾರ ಅವರು ವಕೀಲರಾಗಿ ಪ್ರಾಕ್ಟೀಸ್ ಮಾಡುತ್ತಿದ್ದರು ಮತ್ತು ವಿವಿಧ ಹೈಕೋರ್ಟ್ಗಳು ಮತ್ತು ಸುಪ್ರೀಂ ಕೋರ್ಟ್ನಲ್ಲಿ ಹಲವಾರು ಪ್ರಮುಖ ಪ್ರಕರಣಗಳಲ್ಲಿ ಹಾಜರಾಗಿದ್ದರು
ನಿಮ್ಮ ಕಾಮೆಂಟ್ ಬರೆಯಿರಿ