ರಾಮಲಲ್ಲಾ ಮೂರ್ತಿ ಕೆತ್ತನೆಗೆ ಕಪ್ಪುಶಿಲೆ ಸಿಕ್ಕ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ; ಜನವರಿ 22ಕ್ಕೆ ಭೂಮಿಪೂಜೆ

ಮೈಸೂರು : ಅಯೋಧ್ಯೆಯ ಬಾಲ ರಾಮ(ರಾಮ ಲಲ್ಲಾ)ನ ಮೂರ್ತಿ ಕೆತ್ತನೆಗೆ ಕಪ್ಪು ಶಿಲೆ ಸಿಕ್ಕ ಜಾಗದಲ್ಲೇ ಶ್ರೀರಾಮನ ಮಂದಿರ ನಿರ್ಮಾಣ ಮಾಡಲಾಗುತ್ತದೆ ಎಂದು ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನವರಿ 22 ರಂದು ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಾಗುತ್ತದೆ. ಎಲ್ಲರ ಬಳಿ ದೇಣಿಗೆ ಸಂಗ್ರಹ ಮಾಡಿ ಮೈಸೂರು ತಾಲೂಕಿನ ಹಾರೋಹಳ್ಳಿಯಲ್ಲಿ ರಾಮಮಂದಿರ ನಿರ್ಮಿಸುತ್ತೇವೆ. ಜಮೀನು ಮಾಲೀಕ ದಲಿತ ಸಮುದಾಯದವರು. ರಾಮಮಂದಿರಕ್ಕಾಗಿ ಜಮೀನನ್ನೇ ಬಿಟ್ಟುಕೊಡಲು ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ಇದೆಲ್ಲವನ್ನೂ ನೋಡಿದರೆ, ಇದು ತಾಯಿ ಚಾಮುಂಡೇಶ್ವರಿ ಆಶೀರ್ವಾದ ಮತ್ತು ನಮ್ಮೆಲ್ಲರ ಸೌಭಾಗ್ಯ ಎಂದು ಅವರು ತಿಳಿಸಿದರು.

ತಾಯಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ನಮ್ಮ ಕ್ಷೇತ್ರದ ಗ್ರಾಮದಲ್ಲೇ ಕಪ್ಪು ಕಲ್ಲು ದೊರೆತಿದೆ. ಆ ಕಲ್ಲಿನಲ್ಲಿ ಮೂಡಿದ ರಾಮಲಲ್ಲಾನ ಮೂರ್ತಿ ದರ್ಶನ ಪ್ರಪಂಚದಾದ್ಯಂತ ಶಾಶ್ವತವಾಗಿದೆ. ಇಲ್ಲಿ ನಿರ್ಮಾಣವಾಗುವ ರಾಮ ಮಂದಿರದಲ್ಲಿನ ಮೂರ್ತಿ ಕೆತ್ತನೆಗೆ ಅರುಣ ಯೋಗಿರಾಜ ಅವರನ್ನು ಸಂಪರ್ಕಿಸುತ್ತೇವೆ. ಅವರ ನಿರ್ದೇಶನದಂತೆ ಎಲ್ಲವೂ ನಡೆಯುತ್ತದೆ ಎಂದು ಹೇಳಿದರು.
ರಾಮಲಲ್ಲಾ ವಿಗ್ರಹ ಕೆತ್ತನೆಗೆ ಬಳಸಿರುವ ಶಿಲೆ ಸಿಕ್ಕ ಜಮೀನಿನ ಮಾಲೀಕರು, ಕಷ್ಟ ಪಟ್ಟು ಶಿಲೆಯನ್ನು ತೆಗೆದ ಶ್ರೀನಿವಾಸ ಮತ್ತು ಅವರ ಜೊತೆ ಕೆಲಸ ಮಾಡಿದವರನ್ನು ಅಯೋಧ್ಯೆಗೆ ಕಳುಹಿಸುತ್ತೇವೆ. ಅಲ್ಲಿ ಪ್ರತ್ಯೇಕವಾಗಿ ಪೂಜಾ ಕಾರ್ಯಕ್ರಮ ನೆರವೇರಿಸಿ ಬರುತ್ತೇವೆ ಎಂದು ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

ಜಮೀನು ಮಾಲೀಕ ರಾಮದಾಸ ಅವರು ಮಾತನಾಡಿ, ನಮ್ಮ ಜಮೀನಿನಲ್ಲಿ ಸಿಕ್ಕ ಕಲ್ಲು ಇಂದು ಅಯೋಧ್ಯೆಯ ರಾಮ ಮಂದಿರದ ಮೂರ್ತಿಯಾಗಿರುವುದು ನಮ್ಮ ಪೂರ್ವ ಜನ್ಮದ ಪುಣ್ಯ ಎಂದರು. ಪ್ರಭು ಶ್ರೀರಾಮನ ದರ್ಶನಕ್ಕೆ ಅಯೋಧ್ಯೆಗೆ ನಾವು ಸಹ ಹೋಗುತ್ತೇವೆ. ನಮ್ಮ ಜಮೀನಿನಲ್ಲಿ ಶಿಲೆ ಸಿಕ್ಕಿ ಅಯೋಧ್ಯೆ ಮಂದಿರದಲ್ಲಿ ರಾಮನಮೂರ್ತಿಯಾಗಿರುವುದಕ್ಕೆ ಹಲವರು ದೂರವಾಣಿ ಮೂಲಕ ಶುಭ ಕೋರುತ್ತಿದ್ದಾರೆ ಎಂದು ತಿಳಿಸಿದ್ದಾರೆ.

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement