ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ವಂಚನೆ ಆರೋಪ : ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ತಮ್ಮ ವಿರುದ್ಧದ ಬ್ಯಾಂಕ್‌ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ದೂರು ಮತ್ತು ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.
ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ಗೆ ₹439 ಕೋಟಿ ಸಾಲ ಪಾವತಿಸದೆ ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಸೌಭಾಗ್ಯಲಕ್ಷ್ಮಿ ಶುಗರ್ಸ್‌ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ ಜಾರಕಿಹೊಳಿ ಹಾಗೂ ಮತ್ತಿಬ್ಬರು ನಿರ್ದೇಶಕರಾಗಿದ್ದ ವಸಂತ್‌ ಪಾಟೀಲ ಮತ್ತು ಶಂಕರ ಪವಾಡೆ ಸಲ್ಲಿಸಿದ್ದಾರೆ.

ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಾದ ಆಲಿಸಿದ ನಂತರ ಪೀಠವು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.
ಬೆಳಗಾವಿಯ ಗೋಕಾಕದಲ್ಲಿರುವ ಸೌಭಾಗ್ಯಲಕ್ಷ್ಮಿ ಶುಗರ್‌ ಲಿಮಿಟೆಡ್‌ನಲ್ಲಿ ಯಂತ್ರೋಪಕರಣ ಅಳವಡಿಕೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ಅರ್ಜಿದಾರರು ₹232.88 ಕೋಟಿ ಸಾಲ ಪಡೆದಿದ್ದರು. ಇದು ₹439.7 ಕೋಟಿಗೆ ಏರಿಕೆಯಾಗಿದ್ದರೂ ಅದನ್ನು ಪಾವತಿಸಿರಲಿಲ್ಲ ಎಂದು ಆರೋಪಿಸಿ ಅರ್ಜಿದಾರರ ವಿರುದ್ಧ
ದೂರು ದಾಖಲಿಸಲಾಗಿದೆ. ಇದನ್ನು ರದ್ದುಪಡಿಸುವಂತೆ ಕೋರಿ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
A

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement