ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ : ವ್ಯಕ್ತಿ ಬಂಧನ

ಅರರಿಯಾ : ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಾಯಕನಂತೆ ಪೋಸು ನೀಡಿ, ಜನವರಿ 22 ರಂದು (ಸೋಮವಾರ) ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ 21 ವರ್ಷದ ವ್ಯಕ್ತಿಯನ್ನು ಬಿಹಾರದ ಅರರಿಯಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ. .
ಆರೋಪಿ ಇಂತೇಖಾಬ್ ಆಲಂ ಎಂಬಾತನನ್ನು ಶನಿವಾರ ತಡರಾತ್ರಿ ಬಲುವಾ ಕಲಿಯಗಂಜ್‌ನಲ್ಲಿರುವ ಆತನ ಮನೆಯಿಂದ ಬಂಧಿಸಲಾಗಿದ್ದು, ಆತ ಮಾನಸಿಕವಾಗಿ ಅಸ್ವಸ್ಥನಂತೆ ಕಾಣುತ್ತಾನೆ ಎಂದು ಅರಾರಿಯಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಶೋಕಕುಮಾರ ಸಿಂಗ್ ತಿಳಿಸಿದ್ದಾರೆ.
ಜನವರಿ 19 ರಂದು, ನಾಗರಿಕರ ತುರ್ತು ಸಹಾಯವಾಣಿ ಸಂಖ್ಯೆ 112 ಅನ್ನು ಡಯಲ್ ಮಾಡಿದ್ದ ಆಲಂ ಪೊಲೀಸರಿಗೆ ಕರೆ ಮಾಡಿ, ತನ್ನ ಹೆಸರನ್ನು ದಾವೂದ್ ಇಬ್ರಾಹಿಂನ ಸಹಾಯಕ ಛೋಟಾ ಶಕೀಲ್ ಎಂದು ಹೇಳಿಕೊಂಡಿದ್ದಾನೆ ಎಂದು ಎಸ್ಪಿ ಹೇಳಿದರು.
“ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಆಲಂ ಫೋನ್ ಮೂಲಕ ಬೆದರಿಕೆ ಹಾಕಿದ್ದ. ಆತ ಕ್ರಿಮಿನಲ್ ದಾಖಲೆ ಹೊಂದಿಲ್ಲ, ಆದರೆ ಮಾನಸಿಕವಾಗಿ ಅಸ್ಥಿರನಾಗಿದ್ದಾನೆ ” ಎಂದು ಅವರು ಹೇಳಿದರು.
ವಿಷಯದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಪೊಲೀಸರು ವ್ಯಕ್ತಿಯ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
“ಕರೆ ಸ್ವೀಕರಿಸಿದ ತಕ್ಷಣ, ಸೈಬರ್ ಸೆಲ್‌ನೊಂದಿಗೆ ವಿವರಗಳನ್ನು ಹಂಚಿಕೊಳ್ಳಲಾಗಿದೆ. ವ್ಯಕ್ತಿ ಕರೆ ಮಾಡಿದ ಮೊಬೈಲ್ ಸಂಖ್ಯೆಯು ಆತನ ತಂದೆಯ ಹೆಸರಿನಲ್ಲಿ ನೋಂದಾಯಿಸಲಾಗಿದೆ” ಎಂದು ಸಿಂಗ್ ಹೇಳಿದರು.
ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದ ಬೃಹತ್ ‘ಪ್ರಾಣ ಪ್ರತಿಷ್ಠಾ’ (ಪ್ರತಿಷ್ಠಾಪನೆ) ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮಕ್ಕೆ ಉಪಸ್ಥಿತರಿರುವರು ಮತ್ತು ರಾಮಮಂದಿರದಲ್ಲಿ ಧಾರ್ಮಿಕ ವಿಧಿಗಳನ್ನು ನೆರವೇರಿಸಲಿದ್ದು, ಮರುದಿನ ಸಾರ್ವಜನಿಕರಿಗೆ ತೆರೆಯಲಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ವೇಳೆಯೇ ಕಾಂಗ್ರೆಸ್ಸಿಗೆ ಶಾಕ್‌ : ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement