ರಾಮ ಮಂದಿರ ಉದ್ಘಾಟನೆ : ಜನವರಿ 22 ರಂದು ಸಾರ್ವಜನಿಕ ರಜೆ ಘೋಷಿಸಿದ ಕಾಂಗ್ರೆಸ್ ಆಡಳಿತದ ಮೊದಲ ರಾಜ್ಯವಾದ ಹಿಮಾಚಲ..!

ಶಿಮ್ಲಾ: ಅಯೋಧ್ಯೆಯಲ್ಲಿ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಸರ್ಕಾರ ಜನವರಿ 22 ರಂದು ಸಾರ್ವಜನಿಕ ರಜೆ ಘೋಷಿಸಿದೆ. ಹಿಮಾಚಲ ಪ್ರದೇಶ ರಾಮಮಂದಿರ ಕಾರ್ಯಕ್ರಮಕ್ಕೆ ರಜೆ ಘೋಷಿಸಿದ ಏಕೈಕ ಕಾಂಗ್ರೆಸ್ ಆಡಳಿತದ ರಾಜ್ಯವಾಗಿದೆ.
ಭಗವಾನ್‌ ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾ’ದ ಸಂದರ್ಭದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಜನವರಿ 22 ರಂದು ಪೂರ್ಣ ದಿನ ಮುಚ್ಚಲ್ಪಡುತ್ತವೆ. “ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಂದರ್ಭದಲ್ಲಿ ನೌಕರರಿಗೆ ಅನುಕೂಲವಾಗಲು ಹಿಮಾಚಲ ಪ್ರದೇಶ ಸರ್ಕಾರವು 22ನೇ ಜನವರಿ 2024 ರ ಪೂರ್ಣ ದಿನವನ್ನು (ಸೋಮವಾರ) ಎಲ್ಲ ವಿಭಾಗಗಳು/ಮಂಡಳಿಗಳು/ಕಾರ್ಪೊರೇಷನ್‌ಗಳು/ ಶಾಲೆಗಳು/ಕಾಲೇಜುಗಳು/ವಿಶ್ವವಿದ್ಯಾಲಯಗಳು/ಇತ್ಯಾದಿಗಳಲ್ಲಿ ಸಾರ್ವಜನಿಕ ರಜಾದಿನವಾಗಿ ಘೋಷಿಸುತ್ತದೆ ಎಂದು ತಿಳಿಸಿದೆ.

ಶಿಮ್ಲಾದ ರಾಮ ಮಂದಿರಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸುಖು ಅವರು ರಾಮಮಂದಿರ ಉದ್ಘಾಟನಾ ಸಮಯದಲ್ಲಿ ಮನೆಯಲ್ಲಿ ಮಣ್ಣಿನ ದೀಪಗಳನ್ನು ಬೆಳಗಿಸುವಂತೆ ರಾಜ್ಯದ ಜನತೆಗೆ ಮನವಿ ಮಾಡಿದರು. ಅಂತೆಯೇ ರಾಮಮಂದಿರ ಉದ್ಘಾಟನೆಯಾದ ಕೇಂದ್ರ ಸರ್ಕಾರ ಜನವರಿ 22 ರಂದು ಅರ್ಧ ದಿನ ರಜೆ ಘೋಷಿಸಿದೆ. ಆದರೆ ನಾವು ಪೂರ್ಣ ದಿನದ ರಜೆ ಘೋಷಿಸುತ್ತಿದ್ದೇವೆ. ನಾನು ನನ್ನ ಮನೆಯಲ್ಲಿ ದೀಪವನ್ನು ಬೆಳಗಿಸುತ್ತೇನೆ ಮತ್ತು ಅದೇ ರೀತಿ ಮಾಡಲು ಇತರರನ್ನು ಪ್ರೋತ್ಸಾಹಿಸುತ್ತೇನೆ. ನಾನು ಶೀಘ್ರದಲ್ಲೇ ಅಯೋಧ್ಯೆಯ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ. ಅಲ್ಲದೆ ಜಖುವಿನಲ್ಲಿ ರಾಮನ ಪ್ರತಿಮೆಯನ್ನು ನಿರ್ಮಿಸಲಾಗುವುದು ಎಂದು ಅವರು ದೇವಸ್ಥಾನದ ಹೊರಗೆ ಸುದ್ದಿಗಾರರಿಗೆ ತಿಳಿಸಿದರು. ಭಗವಾನ್ ರಾಮನು ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ, ಅವರು ಪ್ರತಿಯೊಬ್ಬರ ಆದರ್ಶ ಮತ್ತು ದೇಶದ ಸಂಸ್ಕೃತಿ” ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಉತ್ತರ ಪತ್ರಿಕೆಗಳಲ್ಲಿ ಜೈ ಶ್ರೀ ರಾಮ, ಕ್ರಿಕೆಟ್‌ ಆಟಗಾರರ ಹೆಸರು ಬರೆದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣ ; ಇಬ್ಬರು ಪ್ರಾಧ್ಯಾಪಕರು ಅಮಾನತು

ಸೋಮವಾರ (ಜನವರಿ 22 ರಂದು) ರಾಮ ಮಂದಿರದ ಪ್ರತಿಷ್ಠಾಪನೆ ಸಮಾರಂಭದ ಸಂದರ್ಭದಲ್ಲಿ ಜಾರ್ಖಂಡ್‌ ಸರ್ಕಾರ ಸಹ ಅರ್ಧ ದಿನ ರಜೆ ಘೋಷಿಸಿದೆ.
ಎಲ್ಲಾ ಸರ್ಕಾರಿ ಕಚೇರಿಗಳನ್ನು ಜನವರಿ 22 ರಂದು ಮಧ್ಯಾಹ್ನ 2:30 ರವರೆಗೆ ಮುಚ್ಚುವಂತೆ ಮತ್ತು ಇಡೀ ದಿನ ಸರ್ಕಾರಿ ಶಾಲೆಗಳನ್ನು ಮುಚ್ಚುವಂತೆ ಹೇಮಂತ್ ಸೊರೆನ್ ಮುಖ್ಯ ಕಾರ್ಯದರ್ಶಿಗೆ ಸೂಚನೆಗಳನ್ನು ನೀಡಿದ್ದಾರೆ” ಎಂದು ಮುಖ್ಯಮಂತ್ರಿ ಕಚೇರಿ ಟ್ವೀಟ್‌ನಲ್ಲಿ ತಿಳಿಸಿದೆ.
ಬಹುತೇಕ ಎಲ್ಲಾ ಬಿಜೆಪಿ ಆಡಳಿತದ ರಾಜ್ಯಗಳು ಜನವರಿ 22 ರಂದು ಅರ್ಧ ದಿನ ಅಥವಾ ಪೂರ್ಣ ದಿನದ ಸಾರ್ವಜನಿಕ ರಜೆಯನ್ನು ಘೋಷಿಸಿವೆ.

ಇದಕ್ಕೂ ಮುನ್ನ ಶನಿವಾರ, ಉತ್ತರ ಪ್ರದೇಶ ಸರ್ಕಾರವು ಜನವರಿ 22 ರ ಸೋಮವಾರದಂದು ರಾಜ್ಯ ರಜೆ ಘೋಷಿಸಿತು. ಯೋಗಿ ಆದಿತ್ಯನಾಥ ಸರ್ಕಾರವು ಜನವರಿ 22 ರಂದು ರಾಜ್ಯಾದ್ಯಂತ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸಿದೆ. ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಮಧ್ಯಪ್ರದೇಶ, ರಾಜಸ್ಥಾನ ಮತ್ತು ದೆಹಲಿಯ ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಇತರ ಕೆಲವು ರಾಜ್ಯಗಳು ರಾಮ ಮಂದಿರ ಆಚರಣೆಯ ದೃಷ್ಟಿಯಿಂದ ಅರ್ಧ ದಿನ ರಜೆ ಘೋಷಿಸಿವೆ. ಬಿಜೆಪಿ ಆಡಳಿತವಿರುವ ತ್ರಿಪುರಾದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳು ಮಧ್ಯಾಹ್ನ 2:30 ರವರೆಗೆ ಮುಚ್ಚಲ್ಪಡುತ್ತವೆ. ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ ಸಾಯಿ ಅವರು ಸರ್ಕಾರಿ ನೌಕರರಿಗೆ ಕಾರ್ಯಕ್ರಮವನ್ನು ವೀಕ್ಷಿಸಲು ಅವಕಾಶ ನೀಡುವ ಸಲುವಾಗಿ ಇದೇ ರೀತಿಯ ಘೋಷಣೆಯನ್ನು ಮಾಡಿದ್ದಾರೆ. ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಆಡಳಿತದಲ್ಲಿರುವ ದೆಹಲಿಯ ಕೇಂದ್ರಾಡಳಿತ ಪ್ರದೇಶವು ರಾಮಮಂದಿರ ಕಾರ್ಯಕ್ರಮಕ್ಕಾಗಿ ಸರ್ಕಾರಿ ಕಚೇರಿಗಳಲ್ಲಿ ಅರ್ಧ ದಿನ ರಜೆ ಘೋಷಿಸಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement