ತುಮಕೂರು: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ಸೋಮವಾರ(ಜನವರಿ 22) ನಡೆಯಲಿದ್ದು ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸರ್ಕಾರಿ ರಜೆ ಘೋಷಿಸಬೇಕು ಎಂದು ಬಿಜೆಪಿ, ಹಿಂದೂ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಆಗ್ರಹಿಸಿದ್ದವು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಸೋಮವಾರ(ಜನವರಿ 22) ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯಲಿದೆ. ಆದರೆ ಸರ್ಕಾರಿ ರಜೆ ಇಲ್ಲ. ಮಹದೇವಪುರದಲ್ಲಿ ರಾಮನ ದೇವಸ್ಥಾನ ಉದ್ಘಾಟನೆ ಮಾಡುತ್ತಿದ್ದೇನೆ ಎಂದು ಹೇಳಿದರು.
ಈಗಾಗಲೇ ಹಲವು ರಾಜ್ಯಗಳು ಸೋಮವಾರ(ಜನವರಿ 22) ಅರ್ಧ ದಿನ, ಪೂರ್ತಿ ದಿನ ಸರ್ಕಾರಿ ರಜೆ ಘೋಷಣೆ ಮಾಡಿವೆ. ಕೇಂದ್ರ ಸರ್ಕಾರ ಸಹ ದೇಶವ್ಯಾಪಿ ತನ್ನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ