ರಾಮ ಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಹೊರಟ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ

ಬೆಂಗಳೂರು: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Deve Gowda) ಹಾಗೂ ಕುಟುಂಬದ ಸದಸ್ಯರು ಅಯೋಧ್ಯೆಗೆ ತೆರಳಿದ್ದಾರೆ.
ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್‌ ರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಪೂಜಾ ಕೈಂಕರ್ಯಗಳು ಈಗಾಗಲೇ ಆರಂಭಗೊಂಡಿದೆ.
ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಮಾಜಿ ಪ್ರಧಾನಿ ದೇವೇಗೌಡರು ಭಾನುವಾರ (ಜನವರಿ ೨೧) ಪತ್ನಿ ಚೆನ್ನಮ್ಮ, ಪುತ್ರ ಹೆಚ್.ಡಿ ಕುಮಾರಸ್ವಾಮಿ, ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಯವರೊಂದಿಗೆ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ವಿಶೇಷ ವಿಮಾನದಲ್ಲಿ ಕುಟುಂಬ ಸಮೇತರಾಗಿ ಅವರು ಪ್ರಯಾಣ ಮಾಡಲಿದ್ದು, ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಅಯೋಧ್ಯೆಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ದೇವೇಗೌಡರು, ನಾನು ನನ್ನ ಪತ್ನಿ, ಕುಮಾರಸ್ವಾಮಿ, ನಿಖಿಲ್ ಅಯೋಧ್ಯೆಗೆ ಹೋಗುತ್ತಿದ್ದೇವೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮ ಮಾಡುತ್ತಿರುವುದು ಅವರ ಪೂರ್ವ ಜನ್ಮದ ಪುಣ್ಯವಾಗಿದೆ ಎಂದು ಹೇಳಿದ್ದಾರೆ.
ಮೋದಿಯವರು11 ದಿನ ವ್ರತ ಮಾಡಿದ್ದಾರೆ. ಪುಣ್ಯ ಕ್ಷೇತ್ರಗಳ ಸ್ನಾನ ಮಾಡುತ್ತಿದ್ದಾರೆ. ಇದು ತುಂಬಾ ವಿಶೇಷವಾಗಿದೆ. ನಾನು ದೈವಭಕ್ತ. ಪವಿತ್ರ ಕಾರ್ಯಕ್ರಮದಲ್ಲಿ ನಾವೆಲ್ಲ ಭಾಗವಹಿಸಬೇಕು. ಆಧ್ಯಾತ್ಮಿಕ ಜಗತ್ತಿನಲ್ಲಿ ದೇವರನ್ನು ನಂಬಿದ್ದೇವೆ. ಆಧ್ಯಾತ್ಮಿಕವಾಗಿ ಜನರು ಭಗವಾನ್‌ ರಾಮನನ್ನು ನಂಬಿದ್ದಾರೆ. ನಾನು ನಂಬಿದ್ದೇನೆ. ಹೀಗಾಗಿ ನಾನು ಹೋಗುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಟೆರೇಸ್‌ ಮೇಲೆ ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದ ಉಡುಪಿಯ ರೈತ...ಇದರ ಬೆಲೆ ಕೆ.ಜಿ.ಗೆ ₹3 ಲಕ್ಷ...!

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement