ಸಿ.ಎಂ.ಇಬ್ರಾಹಿಂ ಜೆಡಿಎಸ್‌ ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಸುವಂತಿಲ್ಲ : ಕೋರ್ಟ್‌ ಆದೇಶ

ಬೆಂಗಳೂರು: ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಮುಖಂಡ ಸಿ.ಎಂ.ಇಬ್ರಾಹಿಂ ಅವರಿಗೆ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ನ್ಯಾಯಾಲಯ ಸೂಚನೆ ನೀಡಿದೆ.
ಪಕ್ಷದ ಚಿಹ್ನೆ ಬಳಸದಂತೆ ಸಿ.ಎಂ. ಇಬ್ರಾಹಿಂ ಅವರಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಘೋಷಿಸಿದ ಹಿನ್ನೆಲೆಯಲ್ಲಿ ಜೆಡಿಎಸ್‌ ನಾಯಕರ ಬಗ್ಗೆ ಬಹಿರಂಗ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಿ.ಎಂ.ಇಬ್ರಾಹಿಂ ಅವರನ್ನು ಜೆಡಿಎಸ್‌ನಿಂದ ಉಚ್ಚಾಟಿಸಲಾಗಿತ್ತು.
ಪಕ್ಷದಿಂದ ಉಚ್ಚಾಟನೆ ಮಾಡಿದ್ದರೂ ನಮ್ಮದೇ ಮೂಲ ಜೆಡಿಎಸ್‌ ಪಕ್ಷ ಎಂದು ಸಿಎಂ ಇಬ್ರಾಹಿಂ ಹೇಳುತ್ತಿದ್ದರು. ಅಲ್ಲದೆ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಿದ್ದರು. ಹೀಗಾಗಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಪಿ. ರಂಗನಾಥ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇತ್ತೀಚೆಗೆ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ನಡೆದಿದ್ದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಬಳಿಕ, ಸಿ.ಎಂ. ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಆದರೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದ್ದರೂ, ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿಹ್ನೆ ಬಳಸುತ್ತಿದ್ದರು.
ಪಕ್ಷದಿಂದ ಉಚ್ಚಾಟಿತರಾಗಿರುವ ಸಿ.ಎಂ. ಇಬ್ರಾಹಿಂ ಯಾವುದೇ ಅಧಿಕಾರವಿಲ್ಲದಿದ್ದರೂ ಕಾನೂನು ಬಾಹಿರವಾಗಿ ಪಕ್ಷದ ಚಿಹ್ನೆ ಬಳಸಿಕೊಂಡು, ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಪಕ್ಷದ ಹೆಸರು, ಚಿಹ್ನೆ ಬಳಸದಂತೆ ನಿರ್ಬಂಧ ಹೇರಬೇಕು ಎಂದು ಅರ್ಜಿದಾರ ಎ.ಪಿ. ರಂಗನಾಥ ಮನವಿ ಮಾಡಿದ್ದರು. ಆದ್ದರಿಂದ ಸಿ.ಎಂ.ಇಬ್ರಾಹಿಂ ಅವರಿಗೆ ಜೆಡಿಎಸ್‌ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಎಂದು ನಿರ್ಬಂಧ ವಿಧಿಸಿ ಕೋರ್ಟ್‌ ಆದೇಶ ನೀಡಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement