ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಲಾಲ ಕೃಷ್ಣ ಅಡ್ವಾಣಿ ಪಾಲ್ಗೊಳ್ಳುತ್ತಿಲ್ಲ…

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ತೀವ್ರ ಚಳಿಯ ಕಾರಣ ಇಂದು, ಸೋಮವಾರ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ.
96ರ ಹರೆಯದ ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರು ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಎಚ್‌ಪಿಯ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕಕುಮಾರ ಪಾಲ್ಗೊಳ್ಳಲಿದ್ದಾರೆ. ಅವರಿಗೆ ಅಗತ್ಯವಿರುವ ಎಲ್ಲ ವ್ಯವಸ್ಥೆ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ್ದರು.
ಡಿಸೆಂಬರ್‌ನಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಹಾಜರಾಗುವಂತೆ ವಿಎಚ್‌ಪಿ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ಆಹ್ವಾನ ನೀಡಿತ್ತು.
ಅಯೋಧ್ಯೆಯಲ್ಲಿ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮಕ್ಕೆ ಬಾಂಬ್ ನಿಗ್ರಹ ದಳ ಮತ್ತು ಸ್ನೈಪರ್‌ಗಳು ಸೇರಿದಂತೆ 13,000 ಪಡೆಗಳೊಂದಿಗೆ ಭದ್ರತೆಯನ್ನು ನಿಯೋಜಿಸಲಾಗಿದೆ. ಎನ್‌ಡಿಆರ್‌ಎಫ್‌ನ ತಂಡವೊಂದು ಅಯೋಧ್ಯೆಯ ರಾಮಮಂದಿರದ ಬಳಿ ಶಿಬಿರವನ್ನು ಸ್ಥಾಪಿಸಿದೆ. 20,000 ಕ್ಕೂ ಹೆಚ್ಚು ವಾಹನಗಳಿಗೆ ಪಾರ್ಕಿಂಗ್ ಸ್ಥಳ ನಿಗದಿ ಮಾಡಲಾಗಿದೆ.
. ಪ್ರಾಣ ಪ್ರತಿಷ್ಠಾ ಸಮಾರಂಭವು ಮಧ್ಯಾಹ್ನ 12.20 ಕ್ಕೆ ಪ್ರಾರಂಭವಾಗಲಿದ್ದು, ದೇವಾಲಯ ನಿರ್ಮಾಣ ಟ್ರಸ್ಟ್ ಪ್ರಕಾರ, ಮಧ್ಯಾಹ್ನ 1 ಗಂಟೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಇದಾದ ಬಳಿಕ ಪ್ರಧಾನಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಮುಖ ಸುದ್ದಿ :-   ದಕ್ಷಿಣ ಭಾರತದಲ್ಲಿ ತೀವ್ರ ನೀರಿನ ಬಿಕ್ಕಟ್ಟು : 42 ಜಲಾಶಯದಲ್ಲಿ ಕೇವಲ 17%ರಷ್ಟು ನೀರಿನ ಸಂಗ್ರಹ ಮಾತ್ರ ಬಾಕಿ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement