ಪ್ರಧಾನಿ ಮೋದಿ ಅಯೋಧ್ಯೆ ಕಾರ್ಯಕ್ರಮದ ವೇಳಾಪಟ್ಟಿ ಹೀಗಿದೆ….ರಾಮ ಮಂದಿರ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರ ಇಲ್ಲಿ ನೋಡಿ

ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಲೈವ್‌  [ 

ಅಯೋಧ್ಯಾ : ಅಯೋಧ್ಯೆಯಲ್ಲಿ ಪೂಜಾ ಕೈಂಕರ್ಯಗಳು ಪ್ರಾರಂಭವಾಗಿದ್ದು ಪೂಜಾರಿಗಳು ವಿವಿಧ ಪೂಜಾ ವಿಧಿ ವಿಧಾನಗಳನ್ನು ಶಾಸ್ತ್ರೊಕ್ತವಾಗಿ ನೆರವೇರಿಸುತ್ತಿದ್ದಾರೆ. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಾಧು ಸಂತರು, ಪ್ರಮುಖ ಕೈಗಾರಿಕೋದ್ಯಮಿಗಳು, ಬಾಲಿವುಡ್‌ ತಾರೆಯರು ಸೇರಿದಂತೆ ಸುಮಾರು ಎಂಟು ಸಾವಿರ ಗಣ್ಯರು ಭಾಗಿಯಾಗುತ್ತಿದ್ದಾರೆ. ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ 14 ದಂಪತಿ ‘ಯಜಮಾನ’ರಾಗಿ ಪಾಲ್ಗೊಳ್ಳಲಿದ್ದಾರೆ.

ಹತ್ತು ಬಗೆಯ ದಾನ
ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ‘ಮುಖ್ಯ ಯಜಮಾನ’ ಆಗಿರುವ ಪ್ರಧಾನಿ ನರೇಂದ್ರ ಮೋದಿ ದೇವಸ್ಥಾನ ಸಂಕೀರ್ಣವನ್ನು ಪೂರ್ವ ದಿಕ್ಕಿನ ಬಾಗಿಲಿನಿಂದ ಪ್ರವೇಶಿಸಲಿದ್ದಾರೆ ಎಂದು ಸಮಾರಂಭದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿಯೊಬ್ಬರು ತಿಳಿಸಿದರು. ಮಂದಿರ ನಿರ್ಮಾಣದ ಉಸ್ತುವಾರಿ ಹೊತ್ತಿರುವ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯರನ್ನು ಮೋದಿ ಭೇಟಿ ಮಾಡಲಿದ್ದಾರೆ. ಪ್ರಧಾನಿಯವರು ಹತ್ತು ಬಗೆಯ ದಾನ ಕಾರ್ಯ ನಡೆಸಲಿದ್ದಾರೆ. ಅದಾದ ಬಳಿಕ ಅವರು ಗರ್ಭ ಗೃಹ ಪ್ರವೇಶಿಸಲಿದ್ದಾರೆ ಎಂದು ಸ್ವಾಮೀಜಿ ತಿಳಿಸಿದರು.

ಇಂದಿನ ಕಾರ್ಯಕ್ರಮಗಳು
ಪ್ರಾಣ ಪ್ರತಿಷ್ಠಾಪನೆಯ ಶುಭ ಮುಹೂರ್ತ ಇರುವುದು 84 ಸೆಕೆಂಡುಗಳಷ್ಟು ಮಾತ್ರ. ಅದು 12 ಗಂಟೆ 29 ನಿಮಿಷ 8 ಸೆಕೆಂಡುಗಳಿಂದ 12 ಗಂಟೆ 30 ನಿಮಿಷ 32 ಸೆಕೆಂಡುಗಳವರೆಗೆ ಇರಲಿದೆ. ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದ ಕಾರ್ಯಕ್ರಮವು 12.20ರಿಂದ 12.45ರವರೆಗೆ ನಡೆಯಲಿದೆ.
ಮಹಾವಿಷ್ಣುವಿನ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಶುರುವಾಗಲಿದೆ. ಪುರೋಹಿತರು ಮಂತ್ರಗಳ ಮೂಲಕ ಶ್ರೀರಾಮನನ್ನು ಆವಾಹನೆ ಮಾಡುತ್ತಾರೆ
ಗರ್ಭಗೃಹದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದ ಧಾರ್ಮಿಕ ವಿಧಿವಿಧಾನಗಳನ್ನು 121 ಮಂದಿ ವೈದಿಕ ವಿದ್ವಾಂಸರು, ಆಚಾರ್ಯ ಗಣೇಶ್ವರ ದ್ರಾವಿಡ್ ಮತ್ತು ಆಚಾರ್ಯ ಲಕ್ಷ್ಮೀಕಾಂತ ದೀಕ್ಷಿತ ಮಾರ್ಗದರ್ಶನದಲ್ಲಿ ನಡೆಸಲಿದ್ದಾರೆ ಪ್ರಾಣ ಪ್ರತಿಷ್ಠಾಪನೆಯ ನಂತರದಲ್ಲಿ, ಅಯೋಧ್ಯೆಯಲ್ಲಿ ಸೋಮವಾರ ಸಂಜೆ ದೀಪೋತ್ಸವ ನಡೆಯಲಿದೆ. ಒಟ್ಟು ಹತ್ತು ಲಕ್ಷ ಹಣತೆಗಳನ್ನು ಬೆಳಗಿಸಲಾಗುತ್ತದೆ

ಪ್ರಮುಖ ಸುದ್ದಿ :-   ಮಹದೇವ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣದಲ್ಲಿ ನಟ ಸಾಹಿಲ್ ಖಾನ್ ಬಂಧನ

ಪ್ರಧಾನಿ ಮೋದಿಯವರ ಅಯೋಧ್ಯೆ ಭೇಟಿಯ ವೇಳಾಪಟ್ಟಿ
10:25 AM: ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
10:30 AM: ರಾಮ ಜನ್ಮಭೂಮಿಯಲ್ಲಿ ಅತಿಥಿ ಪ್ರವೇಶ ಬಂದ್‌
10:55 AM: ರಾಮ ಜನ್ಮಭೂಮಿಗೆ ಆಗಮನ
11:00 AM – 12:15 PM: ದರ್ಶನ ಮತ್ತು ಪೂರ್ವಾಭಿಷೇಕ ಸಮಾರಂಭಗಳಲ್ಲಿ ಭಾಗವಹಿಸುವಿಕೆ
12:15 PM – 12:20 PM: ಪ್ರಾಣ ಪ್ರತಿಷ್ಠೆಗೆ ಅಂತಿಮ ಸಿದ್ಧತೆ
12:20 PM: ಪ್ರಾಣ ಪ್ರತಿಷ್ಠಾ ಆಚರಣೆಯ ಪ್ರಾರಂಭ
12:29:08 AM – 12:30:32 AM: ಮೂರ್ತಿ ಪ್ರತಿಷ್ಠಾಪನೆಗೆ ಶುಭ ಮುಹೂರ್ತ (84 ಸೆಕೆಂಡುಗಳು)
12:30 PM – 12:45 PM: ಪ್ರಾಣ ಪ್ರತಿಷ್ಠೆಯ ಮುಕ್ತಾಯ
12:45 PM – 1:00 PM: ಪ್ರಧಾನಿ ಮೋದಿಯವರ ಸಂದೇಶ, ನಂತರ ಯೋಗಿ ಆದಿತ್ಯನಾಥ ಮತ್ತು ಮೋಹನ ಭಾಗವತ್ ಅವರ ಸಂದೇಶಗಳು
1:00 PM: ರಾಮ ಜನ್ಮಭೂಮಿಯಿಂದ ನಿರ್ಗಮನ
1:10 PM – 2:00 PM: ಸಭೆಯನ್ನು ಉದ್ದೇಶಿಸಿ ಮಾತು
2:00 PM – 2:10 PM: ಕುಬೇರ್ ತಿಲಾಗೆ ಭೇಟಿ
2:10 PM: ಅಯೋಧ್ಯೆಯಿಂದ ನಿರ್ಗಮನ
ಸಂಜೆ: ದೀಪಗಳನ್ನು ಬೆಳಗಿಸುವುದು ಮತ್ತು ಅಯೋಧ್ಯೆಯಾದ್ಯಂತ “ರಾಮ ಜ್ಯೋತಿ”ಯ ಆಚರಣೆ

ಪ್ರಮುಖ ಸುದ್ದಿ :-   ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಮುಂಬೈ 26/11 ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ವಾದಿಸಿದ್ದ ಉಜ್ವಲ್ ನಿಕಮ್ ಕಣಕ್ಕಿಳಿಸಿದ ಬಿಜೆಪಿ

 ಬಹು ಹಂತದ ಬಿಗಿ ಭದ್ರತೆ
ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಯೋಧ್ಯೆಯಾದ್ಯಂತ ಬಹು ಹಂತದ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಉತ್ತರ ಪ್ರದೇಶದ ಭಯೋತ್ಪಾದಕ ನಿಗ್ರಹ ದಳದ (ಎಟಿಎಸ್‌) ಸಿಬ್ಬಂದಿ ಭಾನುವಾರ ಅಯೋಧ್ಯೆಯಲ್ಲಿ ಪಥಸಂಚಲನ ನಡೆಸಿದರು.
ಕಾರ್ಯಕ್ರಮದ ಸ್ಥಳದಲ್ಲಿ ಬಿಗಿ ಭದ್ರತೆ ಖಚಿತಪಡಿಸಿಕೊಳ್ಳಲು, ತಂತ್ರಜ್ಞಾನವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗಿದೆ. ಅಯೋಧ್ಯೆ ಜಿಲ್ಲೆಯಾದ್ಯಂತ 10 ಸಾವಿರ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಇಡೀ ಪಟ್ಟಣದ ಮೇಲೆ ಕಣ್ಗಾವಲು ಇಡಲು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧಾರಿತ ಡ್ರೋನ್‌ಗಳನ್ನೂ ಬಳಸಲಾಗುತ್ತಿದೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ.
ಬಹುಭಾಷೆ ಬಲ್ಲ ಪೊಲೀಸರ ಪ್ರತ್ಯೇಕ ಮಫ್ತಿ ತಂಡಗಳು ಕಾರ್ಯಕ್ರಮದ ತಾಣದಲ್ಲಿ ನಿಯೋಜನೆಗೊಂಡಿವೆ. ಸರಯೂ ನದಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement