ದೇವಾಲಯದ ಆದಾಯ ಕಡಿಮೆ ; ಹಿರೇಮಗಳೂರು ಕಣ್ಣನ್‌ 10 ವರ್ಷದ ಸಂಬಳ ವಾಪಸ್‌ ಕೇಳಿ ನೋಟಿಸ್‌ ನೀಡಿದ ಸರ್ಕಾರ

ಚಿಕ್ಕಮಗಳೂರು : ವಾರ್ಷಿಕ ಆದಾಯಕ್ಕಿಂತ ವಾರ್ಷಿಕ ವೆಚ್ಚವೇ ಹೆಚ್ಚುವರಿಯಾಗಿದೆ ಎಂದು ಹಿರಿಯ ಸಾಹಿತಿ, ವಾಗ್ಮಿ ಮತ್ತು ಕನ್ನಡಲ್ಲಿಯೇ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಚಿಕ್ಕಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ (Hiremagaluru Kannan) ಅವರ ವೇತನ ವಾಪಸ್ ಕೇಳಿ ಸರ್ಕಾರ ನೋಟಿಸ್‌ ನೀಡಿದೆ ಎಂದು ವರದಿಯಾಗಿದೆ.
4500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು ವಾಪಸ್ ನೀಡುವಂತೆ ಕನ್ನಡದ ಪಂಡಿತ, ಅರ್ಚಕ ಹಿರೇಮಗಳೂರು ಕಣ್ಣನ್​​ ಅವರಿಗೆ ಜಿಲ್ಲಾಡಳಿತ ನೋಟಿಸ್​​ ನೀಡಿದೆ. ಅಲ್ಲದೆ, ಅವರಿಗೆ ನೀಡಲಾಗುತ್ತಿರುವ ವೇತನವನ್ನೂ ತಡೆಹಿಡಿಯಲಾಗಿದೆ.

ಹಿರೇಮಗಳೂರು ಕಣ್ಣನ್ ಅವರು ಕಳೆದ 50 ವರ್ಷಗಳಿಂದ ಚಿಕ್ಕಮಗಳೂರು ಹೊರವಲಯದಲ್ಲಿರುವ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದೇವಾಲಯದ ಆದಾಯ ಕಡಿಮೆ ಇದ್ದು, ಸಂಬಳ ಹೆಚ್ಚುವರಿಯಾಗಿ ಪಾವತಿ ಆಗಿದೆ. ಹೀಗಾಗಿ 4,500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು ವಾಪಸ್ ನೀಡಲು ಸೂಚನೆ ನೀಡಲಾಗಿದೆ.

ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು 7,500 ರೂ. ಸಂಬಳ ಜಮೆಯಾಗುತ್ತಿತ್ತು.
ಇವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 7,500 ರೂಪಾಯಿ ವೇತನ ನೀಡುತ್ತಿತ್ತು. ಸರ್ಕಾರದ ಸೂಚನೆ ಮೇರೆಗೆ ಚಿಕ್ಕಮಗಳೂರು ತಹಶೀಲ್ದಾರ್ ಸುಮಂತ ನೋಟಿಸ್ ಜಾರಿ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಎಸ್‌ಐಟಿ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement