ವೀಡಿಯೊ…| ‘ಪ್ರಾಣ ಪ್ರತಿಷ್ಠೆ’ಯ ನಂತರ ಅಯೋಧ್ಯೆಯ ರಾಮ ಮಂದಿರದಲ್ಲಿ ಭಾರೀ ಸಂಖ್ಯೆಯ ಭಕ್ತರ ನೂಕುನುಗ್ಗಲು

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿಯವರ ಯಜಮಾನತ್ವದಲ್ಲಿ ಮತ್ತು ಸಾಧು-ಸಂತರು, ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳ ಸಮ್ಮುಖದಲ್ಲಿ ವಿಧಿವತ್ತಾಗಿ ನಡೆದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಒಂದು ದಿನದ ನಂತರ ಅಯೋಧ್ಯೆಯ ರಾಮಮಂದಿರವನ್ನು ಇಂದು, ಮಂಗಳವಾರ ಬೆಳಿಗ್ಗೆ ಸಾರ್ವಜನಿಕರಿಗೆ ತೆರೆಯಲಾಗುತ್ತಿದೆ.
ತೆರೆಯುವ ಮುನ್ನವೇ ದೇವಸ್ಥಾನದ ಮುಂಭಾಗದಲ್ಲಿ ಜನಸಾಗರವೇ ಕಂಡುಬಂತು. ಬೆಳಗಿನ ಜಾವ 3 ಗಂಟೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನದ ಮುಂದೆ ಜಮಾಯಿಸಿದ್ದಾರೆ. ಗೇಟ್‌ಗಳು ಬೆಳಿಗ್ಗೆ 7 ರಿಂದ 11:30ರ ವರೆಗೆ ಮತ್ತು ನಂತರ ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತವೆ.
ಮುಂಜಾನೆ 3 ಗಂಟೆಯಿಂದಲೇ ಭಕ್ತರು ಗುಂಪು ಗುಂಪಾಗಿ ಆಗಮಿಸುತ್ತಿದ್ದು, ದೇವಾಲಯದ ಆವರಣದಲ್ಲಿ ನೂಕು ನುಗ್ಗಲು ಉಂಟಾಗಿದೆ. ಕೇಸರಿ ಧ್ವಜ ಹಾಗೂ ಉಡುಪಿನೊಂದಿಗೆ ಭಕ್ತರು ದಂಡು ದಂಡಾಗಿ ಆಗಮಿಸುತ್ತಿದ್ದು, ಜೈಶ್ರೀರಾಮ್ ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದಾರೆ.

ಸೋಮವಾರ ಪ್ರಧಾನಿ ಮೋದಿ ರಾಮಲಲ್ಲಾ ವಿಗ್ರಹಕ್ಕೆ ‘ಪ್ರಾಣ ಪ್ರತಿಷ್ಠಾ’ ವಿಧಿವಿಧಾನಗಳನ್ನು ನೆರವೇರಿಸಿದರು. ಸಮಾರಂಭದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಧಾರ್ಮಿಕ ವಿಧಿಗಳನ್ನು ಅನುಸರಿಸಿ, ಪ್ರಧಾನಿ ಮೋದಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಂತರ ಅವರು ಕುಬೇರ್ ತಿಲಾಗೆ ಭೇಟಿ ನೀಡಿದರು ಮತ್ತು ದೇವಾಲಯದ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.
2019 ರ ನವೆಂಬರ್‌ನಲ್ಲಿ ಮಂದಿರದ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪಿನೊಂದಿಗೆ ಮುಕ್ತಾಯಗೊಂಡ ಸುದೀರ್ಘ ಕಾನೂನು ಹೋರಾಟದ ನಂತರ ರಾಮ ಮಂದಿರದ ನಿರ್ಮಾಣವಾಯಿತು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement