ಈ ತಿಂಗಳ ಕೊನೆಯಲ್ಲಿ ಸರ್ಕಾರಕ್ಕೆ ಜಾತಿ ಜನಗಣತಿ ವರದಿ ಸಲ್ಲಿಕೆ : ಜಯಪ್ರಕಾಶ ಹೆಗ್ಡೆ

ಬೆಂಗಳೂರು: ಈ ತಿಂಗಳಾಂತ್ಯದಲ್ಲಿ ಜಾತಿ ಜನಗಣತಿ (caste Census) ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಅವಧಿ ಮುಗಿಯುವುದರ ಒಳಗಾಗಿ ವರದಿ ನೀಡುತ್ತೇವೆ. ಸರ್ಕಾರ ಯಾವಾಗ ತೆಗೆದುಕೊಳ್ಳುತ್ತದೋ ಆಗ ಕೊಡುತ್ತೇವೆ. ವರದಿ ಅಂತಿಮಗೊಂಡಿದೆ. ಸಲ್ಲಿಕೆ ಮಾಡಲು ಸಮಯ ಕೇಳಿದ್ದೇವೆ. ಸದ್ಯ ಅವರು ಬಜೆಟ್‌ ಸಿದ್ಧಪಡಿಸುವುದರಲ್ಲಿ ನಿರತರಾಗಿದ್ದಾರೆ. ನಮ್ಮ ಅವಧಿ ಮುಗಿಯುವುದರೊಳಗೆ ಸಲ್ಲಿಕೆ ಮಾಡುತ್ತೇವೆ ಎಂದರು.

ಅಂಕಿ-ಅಂಶಗಳನ್ನು ವಿಶ್ಲೇಷಣೆ ಮಾಡಿ ವರದಿ ಸಿದ್ಧಪಡಿಸಬೇಕಿತ್ತು. ಅದಕ್ಕಾಗಿ ಸಮಯಾವಕಾಶ ಪಡೆದುಕೊಂಡೆವು. ಈಗ ವರದಿ ಅಂತಿಮವಾಗಿದೆ ಎಂದು ಹೇಳಿದರು.
ಇದು ಕಾಂತರಾಜು ವರದಿಯೂ ಅಲ್ಲ, ಜಯಪ್ರಕಾಶ ಹೆಗ್ಡೆ ವರದಿಯೂ ಅಲ್ಲ. ಇದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಸಮೀಕ್ಷೆ ವರದಿ ಆಗಿರುತ್ತದೆ.ಇಲ್ಲಿ ವ್ಯಕ್ತಿ ಮುಖ್ಯ ಅಲ್ಲ, ದತ್ತಾಂಶಗಳ ವರದಿ ಇದು.ವರದಿ ಕೊಡುವುದು ಮಾತ್ರ ನಮ್ಮ ಕೆಲಸ. ಮುಂದಿನದ್ದು ಸರ್ಕಾರಕ್ಕೆ ಬಿಟ್ಟಿದ್ದು ಎಂದರು.
ಸಾರ್ವಜನಿಕ ಡೊಮೇನ್‌ನಲ್ಲಿ ವರದಿ ಬಹಿರಂಗವಾದ ಬಳಿಕ ಪರ ವಿರೋಧದ ಚರ್ಚೆ ನಡೆದರೆ ಒಳ್ಳೆಯದು. ಸರ್ಕಾರಕ್ಕೆ ನಾವು ವರದಿ ಕೊಡುತ್ತೇವೆ ಎಂದರು.

ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement