ಜನವರಿ 27ಕ್ಕೆ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ

ಬೆಂಗಳೂರು : ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸಭೆ ಜನವರಿ 27ರಂದು ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ ತಿಳಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಜನವರಿ 27ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ರ ವರೆಗೆ ಸಭೆ ಇರಲಿದೆ ಎಂದರು.
ಈ ಹಿಂದೆ, ಬಿಜೆಪಿ ಜನವರಿ 19 ರಂದು ಬೆಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಿತ್ತು. ಆದರೆ, ಪ್ರಧಾನಿ ಮೋದಿಯವರ ಬೆಂಗಳೂರು ಭೇಟಿಯ ಹಿನ್ನೆಲೆಯಲ್ಲಿ ಸಭೆಯನ್ನು ರದ್ದುಗೊಳಿಸಲಾಗಿತ್ತು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಧರ್ಮೇಂದ್ರ ಪ್ರಧಾನ ರಾಜೀನಾಮೆ ಅಂಗೀಕಾರ; ಪ್ರಲ್ಹಾದ ಜೋಶಿಗೆ ಕೇಂದ್ರ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement