ಶೀಘ್ರವೇ 900ಕ್ಕೂ ಹೆಚ್ಚು ಪಿಎಸ್‌ ಐ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಶುರು: ಗೃಹ ಸಚಿವ ಡಾ. ಪರಮೇಶ್ವರ

ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸರ್ಕಾರ ಶುಭ ಸುದ್ದಿ ನೀಡಿದೆ. ಶೀಘ್ರವೇ 900ಕ್ಕೂ ಹೆಚ್ಚು ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಪಿಎಸ್ ಐ ಪರೀಕ್ಷೆ ಬಹಳ ಸುಸೂತ್ರವಾಗಿ ನಡೆದಿದೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆದಿಲ್ಲ. ಪರೀಕ್ಷೆಗೆ 54 ಸಾವಿರ ಅಭ್ಯರ್ಥಿಗಳು ನೋಂದಣಿ ಮಾಡಿದ್ದು, ಇದರಲ್ಲಿ 65% ರಿಂದ 70%ರಷ್ಟು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಮೌಲ್ಯಮಾಪನದ ಫಲಿತಾಂಶ ಪ್ರಕಟಿಸಿ ನೇಮಕಾತಿ ಪ್ರಕ್ರಿಯೆ ಶುರು ಮಾಡುತ್ತೇವೆ ಎಂದರು.
ಈಗಾಗಲೇ 403 ಪಿಎಸ್‌ಐ (PSI) ಹುದ್ದೆಗೆ ನೋಟಿಫಿಕೇಶನ್ ಮುಗಿದು, ದೈಹಿಕ ಪರೀಕ್ಷೆ ಕೂಡಾ ಮುಗಿದಿದೆ. ಮುಂದಿನ ಹಂತದಲ್ಲಿ ನೇಮಕಾತಿಗೂ ಪರೀಕ್ಷೆ ಮಾಡುತ್ತೇವೆ. ಅದನ್ನು ಕೂಡ ಕೆಇಎ (KEA) ಮೂಲಕವೇ ನಡೆಸುತ್ತೇವೆ. ಇದು ಮುಗಿದ ಬಳಿಕ 660 ಪಿಎಸ್‌ಐ (PSI) ಹುದ್ದೆಗಳ ನೇಮಕಕ್ಕೆ ಆರ್ಥಿಕ ಇಲಾಖೆಯ ಅನುಮತಿ ಪಡೆದಿದ್ದೇವೆ. ಅದಕ್ಕೂ ಕೂಡಾ ನೋಟಿಫಿಕೇಶನ್ ಮಾಡಲಾಗುವುದು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement