ಚಿತ್ರದುರ್ಗ : ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ ನಾಲ್ವರು ಸಾವು

ಚಿತ್ರದುರ್ಗ : ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ ನಾಲ್ಕು ಮಂದಿ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಸಾಣಿಕೆರೆ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ ಎಂದು ವರದಿಯಾಗಿದೆ.
ಇಂದು, ಶುಕ್ರವಾರ ನಸುಕಿನ ಜಾವ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ ಆರು ಮಂದಿ ಕಾರಿನಲ್ಲಿ ಬೆಂಗಳೂರಿನ ಕಡೆ ಬರುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ ಎಂದು ಹೇಳಲಾಗಿದೆ.
ಮೃತರನ್ನು ರಾಯಚೂರಿನ ದೇವದುರ್ಗ ತಾಲೂಕಿನ ದಂಡಮ್ಮಹಳ್ಳಿಯ ಲಿಂಗಪ್ಪ (26), ಸಿಂಧುಶ್ರೀ(2) ಅಯ್ಯಳಪ್ಪ (5 ತಿಂಗಳು), ರಕ್ಷಾ (3 ತಿಂಗಳು) ಎಂದು ಗುರುತಿಸಲಾಗಿದೆ. ಒಂದೇ ಕುಟುಂಬದ ಇವರು ದೇವದುರ್ಗದಿಂದ ಬೆಂಗಳೂರಿಗೆ ಬುಧವಾರ ರಾತ್ರಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ.
ಸಾಣಿಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಅಪ್ಪಳಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿವೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement