ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಈಗ ಒಡೆದ ಮನೆ..? ಎಎಪಿ, ಟಿಎಂಸಿ ನಂತ್ರ ಈಗ ಪ್ಲಗ್‌ ಎಳೆಯಲು ನಿತೀಶಕುಮಾರ ತಯಾರಿ..?!

ನವದೆಹಲಿ /ಪಾಟ್ನಾ: ಪಂಜಾಬಿನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿಮಾಡಿಕೊಳ್ಳಲು ಒಪ್ಪದೆ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬಣದಲ್ಲಿ ಚುನಾವಣೆ ಮೊದಲೇ ಅಲುಗಾಟ ಶುರುವಾಗಿದೆ.
ಇಂದು, ಗುರುವಾರ, ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಮಾರ್ಚ್ 30 ರಂದು ಭಾರತ ಜೋಡಿ ನ್ಯಾಯ ಯಾತ್ರೆ ಬಿಹಾರ ಪ್ರವೇಶಿಸಿದಾಗ ಯಾತ್ರೆಯ ನೇತೃತ್ವ ವಹಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಹೋಗದಿರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಅನೇಕ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ರಾಹುಲ್‌ ಗಾಂಧಿಗೆ ಜೊತೆ ಹೋಗಬಾರದು ಎಂಬ ನಿರ್ಧಾರದೊಂದಿಗೆ, ಆಡಳಿತಾರೂಢ ಬಿಹಾರ ಸರ್ಕಾರದಲ್ಲಿ ಲಾಲು ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಯ ಮಿತ್ರ ಪಕ್ಷವಾಗಿರುವ ಜೆಡಿಯು ಮುಖ್ಯಸ್ಥ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶಕುಮಾರ ಅವರು ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬ ಸೂಕ್ಷ್ಮ ಸಂದೇಶವನ್ನು ರವಾನಿಸಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ನಿತಿಶಕುಮಾರ ಅವರು ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ರಚನೆಯ ಪ್ರಮುಖ ರೂವಾರಿಗಳಲ್ಲಿ ಒಬ್ಬರು.

ಇಂಡಿಯಾ ಮೈತ್ರಿಕೂಟವು ಆಂತರಿಕ ಪ್ರಕ್ಷುಬ್ಧತೆಯಿಂದ ಹೆಣಗಾಡುತ್ತಿರುವ ಸಾಧ್ಯತೆಯಿದೆ ಎಂದು ನಿತೀಶಕುಮಾರ ಅವರು ಆರ್‌ಜೆಡಿ ಮುಖ್ಯಸ್ಥರ “ಕುಟುಂಬ ರಾಜಕೀಯ” ದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಎಂಬ ಆರೋಪವಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ. ಆದರೆ ಇದನ್ನು ಜೆಡಿಯು ನಾಯಕ ಕೆ.ಸಿ. ತ್ಯಾಗಿ ನಿರಾಕರಿಸಿದ್ದಾರೆ.
“ನಿತೀಶಕುಮಾರ ಅವರು ತಾವು ಆರಾಧಿಸಿದ ಕರ್ಪೂರಿ ಠಾಕೂರ್ ಅವರ ಜನ್ಮದಿನದಂದು ಆಯೋಜಿಸಲಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಎಲ್ಲಾ ಮಹಾನ್ ಸಮಾಜವಾದಿಗಳಂತೆ, ಕರ್ಪೂರಿ ಠಾಕೂರ್ ಅವರು ರಾಜಕೀಯದಲ್ಲಿ ಕುಟುಂಬ ರಾಜಕೀಯ ಅಥವಾ ವಂಶ ರಾಜಕೀಯದ ಉತ್ತರಾಧಿಕಾರದ ಬಗ್ಗೆ ಅಸಹ್ಯಪಡುತ್ತಿದ್ದರು. ಇದನ್ನು ನಿತೀಶಕುಮಾರ ಒತ್ತಿಹೇಳಲು ಬಯಸಿದ್ದಾರೆ ಎಂಬುದು ಸರಳ ಸಂಗತಿಯಾಗಿದೆ. ಇದಕ್ಕಿಂತ ಹೆಚ್ಚಿನದನ್ನು ಅದರಲ್ಲಿ ನೋಡಬೇಕಾಗಿಲ್ಲ ಎಂದು ತ್ಯಾಗಿ ಹೇಳಿದರು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

ಯಾವುದೇ ಪ್ರಾದೇಶಿಕ ಪಕ್ಷ ಅಥವಾ ನಾಯಕರನ್ನು ಖಂಡಿಸುವ ಇಚ್ಛೆ ನಿತೀಶಕುಮಾರ ಅವರಿಗೆ ಇಲ್ಲ ಎಂದು ತ್ಯಾಗಿ ಹೇಳಿದ್ದಾರೆ. “ರಾಷ್ಟ್ರಕ್ಕೆ ವಂಶ ರಾಜಕಾರಣ ಅತ್ಯಗತ್ಯ ಎಂದು ಭಾವಿಸುವವರು ತಮ್ಮದೇ ಆದ ತೀರ್ಮಾನವನ್ನು ತೆಗೆದುಕೊಳ್ಳಲು ಸ್ವತಂತ್ರರು” ಎಂದು ಅವರು ಹೇಳಿದರು.
ಲಾಲು ಯಾದವ್ ಗುರುವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾಗುವಂತೆ ಕೇಳಿಕೊಂಡರು, ಇದು ಮೈತ್ರಿ ಪಾಲುದಾರರನ್ನು ಸಮಾಧಾನಪಡಿಸುವ ಪ್ರಯತ್ನವಾಗಿ ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.
ನಿತೀಶಕುಮಾರ ಅವರು ಆಗಸ್ಟ್ 2022 ರಲ್ಲಿ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿಕೊಂಡಾಗ ಲಾಲು ಯಾದವ್ ಅವರ ಕಿರಿಯ ಮಗ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು ಮತ್ತು ಕಾಂಗ್ರೆಸ್ ಮತ್ತು ಮೂರು ಎಡ ಪಕ್ಷಗಳನ್ನು ಒಳಗೊಂಡಿರುವ ಮಹಾಮೈತ್ರಿಕೂಟಕ್ಕೆ (ಮಹಾಘಟಬಂಧನ್) ಮತ್ತೆ ಸೇರ್ಪಡೆಗೊಂಡು ಸರ್ಕಾರ ರಚಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಕಾಂಗ್ರೆಸ್‌ ಜೊತೆ ಯಾವುದೇ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಮತಾ ಬ್ಯಾನರ್ಜಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಉಭಯ ಪಕ್ಷಗಳ ನಡುವಿನ ಮೈತ್ರಿ ಮಾತುಕತೆ ಮುರಿದು ಬೀಳಲು ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಕಾರಣ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯಾನ್ ಆರೋಪಿಸಿದ್ದಾರೆ. ಚೌಧರಿ ಅವರು ಬಿಜೆಪಿಗೆ ಅನುಕೂಲವಾಗಲು ಇಂಡಿಯಾ ಮೈತ್ರಿಕೂಟವನ್ನು ಹಾಳುಮಾಡಲು ಕೆಲಸ ಮಾಡುತ್ತಿದ್ದಾರೆ ಎಂದು ತೃಣಮೂಲ ಆರೋಪಿಸಿದೆ.
ಪಂಜಾಬ್‌ನ ಆಮ್ ಆದ್ಮಿ ಪಕ್ಷ (ಎಎಪಿ) ಪಂಜಾಬ್‌ ರಾಜ್ಯದಲ್ಲಿ ಕಾಂಗ್ರೆಸ್‌ನೊಂದಿಗೆ ಸೀಟುಗಳನ್ನು ಹಂಚಿಕೊಳ್ಳಲು ನಿರಾಕರಿಸಿದೆ. ಮೂರು ತಿಂಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಎಎಪಿ ರಾಜ್ಯದ ಎಲ್ಲಾ 13 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ದಕ್ಷಿಣ ಭಾರತದಲ್ಲಿ ತೀವ್ರ ನೀರಿನ ಬಿಕ್ಕಟ್ಟು : 42 ಜಲಾಶಯದಲ್ಲಿ ಕೇವಲ 17%ರಷ್ಟು ನೀರಿನ ಸಂಗ್ರಹ ಮಾತ್ರ ಬಾಕಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement