ವೀಡಿಯೊ..| ರಾಜ್ಯ ರಾಜಕಾರಣದಲ್ಲಿ ಸಂಚಲನ ; ಕಾಂಗ್ರೆಸ್ಸಿಗೆ ಜಗದೀಶ ಶೆಟ್ಟರ ಗುಡ್‌ ಬೈ; ಪುನಃ ಬಿಜೆಪಿ ಸೇರ್ಪಡೆ

ನವದೆಹಲಿ : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಜಗದೀಶ ಶೆಟ್ಟರ (Jagadish Shettar) ಬಿಜೆಪಿಗೆ ಪುನಃ ಸೇರ್ಪಡೆಯಾಗಿದ್ದಾರೆ. ಇಂದು ಗುರುವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರನಾಯಕರನ್ನು ಭೇಟಿ ಮಾಡಿದ ನಂತರ ಬಿಜೆಪಿಗೆ ಮತ್ತೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಭುಪೇಂದ್ರ ಯಾದವ್ ಮತ್ತು ರಾಜೀವ ಚಂದ್ರಶೇಖರ​ ಸಮ್ಮುಖದಲ್ಲಿ ಶೆಟ್ಟರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ಸೇರ್ಪಡೆಗೂ ಮುನ್ನ ಶೆಟ್ಟರ ಅವರು ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ​ ಶೆಟ್ಟರ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.

ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಶೆಟ್ಟರ್
ಪಕ್ಷ ಸೇರ್ಪಡೆಗೂ ಮುನ್ನ ಜಗದೀಶ ಶೆಟ್ಟರ ಅವರು ಕಾಂಗ್ರೆಸ್ ಪಕ್ಷ ಹಾಗೂ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೀತಿಯೇ ಸಿದ್ದು, ಪರಮೇಶ್ವರ ವೀಡಿಯೊ ಹೊರಬರಬಹುದು : ರಮೇಶ ಜಾರಕಿಹೊಳಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement