ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ‘ಹಳೇ ಪಿಂಚಣಿ ಯೋಜನೆ(OPS)ಗೆ ಒಳಪಡಲು ಅವಕಾಶ ನೀಡಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೊಸ ಪಿಂಚಣಿ ಯೋಜನೆ (ಎನ್ ಪಿಎಸ್)ಯಿಂದ ಹಳೆ ಪಿಂಚಣಿ ಯೋಜನೆಗೆ ಒಳಪಡಲು ಅವಕಾಶ ನೀಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಈ ಬಗ್ಗೆ ಆಡಳಿತ ಮತ್ತು ಸಮನ್ವಯ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಗೆ ಒಳಪಡಲು 6 ಷರತ್ತುಗಳನ್ನು ವಿಧಿಸಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಆದೇಶದ ಪ್ರತಿಯನ್ನು ಪೋಸ್ಟ್ ಮಾಡಿದ್ದಾರೆ. 2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದು ಎಲ್ಲಾ ಸರ್ಕಾರಿ ನೌಕರರಿಗೂ ಸಂಬಂಧಪಟ್ಟಿರುವುದಿಲ್ಲ. ಕೇವಲ ಏಪ್ರಿಲ್ 2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆ ಹೊಂದಿದವರಿಗೆ ಅನ್ವಯಿಸುತ್ತದೆ.
ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿ ನೀಡಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

ಪ್ರಮುಖ ಸುದ್ದಿ :-   ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

ಹಳೆಯ ಪಿಂಚಣಿ ಯೋಜನೆ(ಒಪಿಎಸ್‌)ಗೆ ಒಳಪಡಲು 6 ಷರತ್ತುಗಳನ್ನು ರಾಜ್ಯ ಸರ್ಕಾರ ವಿಧಿಸಿದೆ. ಹಳೆಯ ಪಿಂಚಣಿ ಯೋಜನೆಗೆ ಒಳಪಡಲು ಸರ್ಕಾರಿ ನೌಕರರು ತಾವೇ ಒಪ್ಪಿಗೆ ಸೂಚಿಸಬೇಕು. 2006ರ ಏಪ್ರಿಲ್‌ಗಿಂತ ಮೊದಲು ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆ ಹೊಂದಿದವರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಹಳೆಯ ಪಿಂಚಣಿ ಯೋಜನೆಗೆ ಒಳಪಟ್ಟರೆ, ಬದಲಾವಣೆಗೆ ಮತ್ತೆ ಅವಕಾಶವಿರುವುದಿಲ್ಲ ಎಂದು ತಿಳಿಸಲಾಗಿದೆ. ಇನ್ನು ಹಳೆಯ ಪಿಂಚಣಿ ಯೋಜನೆ (ಒಪಿಎಸ್‌)ಗೆ ಒಳಪಡದೆ ಹೋದರೆ ಅಂತಹ ನೌಕರರು ಎನ್‌ಪಿಎಸ್‌ನಲ್ಲೇ ಮುಂದುವರಿಯಲಿದ್ದಾರೆ.

ಈ ಬಗ್ಗೆ  ಷರತ್ತುಗಳನ್ನು ವಿಧಿಸಿದ್ದು, ನೌಕರರು ಇಚ್ಛೆಪಟ್ಟಲ್ಲಿ ಮಾತ್ರ ಒಮ್ಮೆ ಬದಲಾವಣೆಗೆ ಅವಕಾಶ ನೀಡಿದೆ. ಈ ಕುರಿತು ಅರ್ಜಿ ನಮೂನೆಯನ್ನು ಜೂನ್‌ 30ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಒಪಿಎಸ್‌ಗೆ ಅರ್ಜಿ ಸಲ್ಲಿಸಲು 2024ರ ಜೂನ್ 30ವರೆಗೆ ಮಾತ್ರ ಅವಕಾಶ ನೀಡಲಾಗಿದೆ.
ಮೊದಲಿನಿಂದಲೂ ಇದ್ದ ಡಿಫೈನ್ಡ್‌ ಪಿಂಚಣಿ ಯೋಜನೆಯನ್ನು ಬದಲಾವಣೆ ಮಾಡಿ 2006 ರ ಬಳಿಕ ನೇಮಕವಾದ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈ ಯೋಜನನ್ನು ವಿರೋಧಿಸಿ ರಾಜ್ಯ ಸರ್ಕಾರಿ ನೌಕರರು ಹೋರಾಟ ನಡೆಸಿ ಮತ್ತೆ ಹಿಂದಿನ ಯೋಜನೆ ವ್ಯಾಪ್ತಿಗೆ ಸೇರಿಸುವಂತೆ ಪಟ್ಟು ಹಿಡಿದಿದ್ದರು. ಸದ್ಯ ಸರ್ಕಾರ ಒಂದು ಬಾರಿ ಬದಲಾವಣೆಗೆ ಅವಕಾಶ ಮಾಡಿಕೊಟ್ಟಿದೆ.

ಪ್ರಮುಖ ಸುದ್ದಿ :-   ಏಪ್ರಿಲ್‌ 30 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement