ಅಣು ಬಾಂಬ್ ಸ್ಫೋಟಗೊಳ್ಳಬಹುದು…ವಿಶ್ವದ ಇಬ್ಬರು ಪ್ರಧಾನಿಗಳ ಸಾವು ಸಂಭವಿಸಬಹುದು: ಕೋಡಿಮಠ ಸ್ವಾಮೀಜಿ ಭವಿಷ್ಯ

ಗದಗ: 2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ. ಅಕಾಲಿಕ ಮಳೆ, ಬಾಂಬ್ ಸಿಡಿಯುವ ಸಂಭವ. ಯುದ್ಧ ಭೀತಿ, ಜನರಲ್ಲಿ ಉಂಟಾಗುತ್ತದೆ ಎಂದು ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದ್ದಾರೆ.
ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, 2024ರಲ್ಲಿ ಅಕಾಲಿಕ ಮಳೆ, ಭೂಕಂಪ, ಜಲಕಂಟಕ, ಅಣುಬಾಂಬ್ ಸ್ಪೋಟದಂತಹ ಸನ್ನಿವೇಶಗಳು ಮತ್ತು ಯುದ್ಧದ ಭೀತಿಯಿಂದ ಜಗತ್ತು ತಲ್ಲಣಗೊಳ್ಳುವಂತಹ ಸ್ಥಿತಿ ನಿರ್ಮಾಣವಾಗಲಿದೆ. ಜಗತ್ತಿನ ಪ್ರಭಾವಿ ಸಂತರೊಬ್ಬರು ಹಾಗೂ ಪ್ರಧಾನಿಗಳಿಬ್ಬರು ಸಾವಿಗೀಡಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಜಗತ್ತಿಗೆ ಅಪಾಯ, ರೋಗ-ರುಜಿನ, ಸುನಾಮಿ, ಇತರ ಸಮಸ್ಯೆಗಳಿಂದ ಜನರು ದುಃಖ ಅನುಭವಿಸುತ್ತಾರೆ. ಮುಂಬರುವ ದಿನಗಳಲ್ಲಿ ಬರಬಹುದಾದ ಸಮಸ್ಯೆಗಳನ್ನು ಎದುರಿಸಲು ಜನರು ದೈವ ನಂಬುವುದೊಂದೆ ಪರಿಹಾರ, ದೈವ ಮೊರೆ ಹೋಗಬೇಕು ಎಂದು ಶ್ರೀಗಳು ಸಲಹೆ ನೀಡಿದ್ದಾರೆ.

ಭಾರತೀಯ ಪ್ರಜೆಗಳಲ್ಲಿ ಆಧ್ಯಾತ್ಮಿಕ ಚಿಂತನೆ ಉಚ್ಛವಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಶ್ರೀರಾಮನ ಜನ್ಮಸ್ಥಳದಲ್ಲಿ ಶ್ರೀರಾಮನ ಬೃಹತ್ ದೇಗುಲ ನಿರ್ಮಾಣಗೊಂಡಿರುವುದು ಧಾರ್ಮಿಕವಾಗಿ ಒಳ್ಳೆಯ ಸೂಚನೆ. ಆದರೆ ರಾಜಕೀಯದಲ್ಲಿ ಧಾರ್ಮಿಕತೆಯನ್ನು ಬೆರೆಸುವುದು ಸೂಕ್ತವಲ್ಲ ಎಂದು ಹೇಳಿದರು.
ದೇಶ ಹಾಗೂ ರಾಜ್ಯ ರಾಜಕೀಯ ಕುರಿತು ಮಾತನಾಡಿದ ಶ್ರೀಗಳು, ಸಾಮಾನ್ಯವಾಗಿ ಸಂಕ್ರಾಂತಿ ನಂತರ ಹಾಗೂ ಯುಗಾದಿ ನಂತರ ಭವಿಷ್ಯ ಹೇಳಲಾಗುತ್ತದೆ. ಈಗ ರಾಜಕೀಯ ಕುರಿತು ಹೇಳುವುದು ಸೂಕ್ತವಲ್ಲ. ಯುಗಾದಿ ನಂತರ ರಾಜಕೀಯದಲ್ಲಾಗುವ ಬದಲಾವಣೆಗಳ ಕುರಿತು ಭವಿಷ್ಯ ಹೇಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement