ನಿಯಮ ಉಲ್ಲಂಘನೆ ಆರೋಪ: ಬಸನಗೌಡ ಪಾಟೀಲ ಯತ್ನಾಳ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ನೋಟಿಸ್‌

ಬೆಂಗಳೂರು: ಪರಿಸರ ನಿಯಮಾವಳಿ ಉಲ್ಲಂಘನೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒಡೆತನದ ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೋಟಿಸ್ ಜಾರಿಗೊಳಿಸಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಯತ್ನಾಳ ಒಡೆತನದ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಎಥೆನಾಲ್‌ ಉತ್ಪಾದಿಸುವ ಘಟಕವೂ ಇದೆ. ಕಾರ್ಖಾನೆಯ ಕೊಳಚೆ ನೀರನ್ನು ನೇರವಾಗಿ ಮುಲ್ಲಾಮಾರಿ ಜಲಾಶಯಕ್ಕೆ ಹರಿಸಲಾಗುತ್ತಿದೆ ಎಂದು ಆರೋಪಿಸಲಾಗಿತ್ತು.

ಮಂಡಳಿಯ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಕಾರ್ಖಾನೆಯ ಅವೈಜ್ಞಾನಿಕ ನಿರ್ವಹಣೆ ಹಾಗೂ ಹಲವಾರು ಲೋಪಗಳು ಕಂಡುಬಂದಿದ್ದು, ಕಾರ್ಖಾನೆಯನ್ನು ಮುಚ್ಚಲು ಮಂಡಳಿ ನೋಟಿಸ್‌ ನೀಡಿದೆ. ಕಾರ್ಖಾನೆಗೆ ಒದಗಿಸುತ್ತಿದ್ದ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಕಡಿತಗೊಳಿಸಲು ಎಂದು ಸೂಚನೆ ನೀಡಿದೆ.
ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ನಡೆದ ಕೆಎಸ್‌ಪಿಸಿಬಿ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಕಾರ್ಖಾನೆಯನ್ನು ಮುಚ್ಚುವಂತೆ ನೋಟಿಸ್ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement