ಲೋಕಸಭೆ ಚುನಾವಣೆ: ಕರ್ನಾಟಕ ಸೇರಿ 23 ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳ ನೇಮಿಸಿದ ಬಿಜೆಪಿ

ನವದೆಹಲಿ: ಈ ವರ್ಷದ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಶನಿವಾರ ಕರ್ನಾಟಕ ಸೇರಿದಂತೆ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳನ್ನು ನೇಮಿಸಿದೆ.
ಕರ್ನಾಟಕದ ಚುನಾವಣಾ ಉಸ್ತುವಾರಿಯಾಗಿ ರಾಧಾಮೋಹನದಾಸ ಅಗರ್ವಾಲ್‌ ಹಾಗೂ ಸಹ ಪ್ರಭಾರಿಯಾಗಿ ಸುಧಾಕರ ರೆಡ್ಡಿ ಅವರನ್ನು ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ ತಾವ್ಡೆ ಅವರನ್ನು ಬಿಹಾರ ಚುನಾವಣಾ ಉಸ್ತುವಾರಿಯನ್ನಾಗಿ ಮಾಡಲಾಗಿದ್ದು, ಬಿಜೆಪಿ ರಾಜ್ಯಸಭಾ ಸದಸ್ಯ ಮತ್ತು ಜಾರ್ಖಂಡ್ ಘಟಕದ ಮಾಜಿ ಮುಖ್ಯಸ್ಥ ದೀಪಕ್ ಪ್ರಕಾಶ ಅವರು ಸಹ-ಪ್ರಭಾರಿಯಾಗಲಿದ್ದಾರೆ ಎಂದು ಪಕ್ಷದ ಹೇಳಿಕೆ ತಿಳಿಸಿದೆ.
ಬಿಜೆಪಿ ಉಪಾಧ್ಯಕ್ಷ ಬೈಜಯಂತ ಜಯ ಪಾಂಡಾ ಅವರನ್ನು ಉತ್ತರ ಪ್ರದೇಶದ ಚುನಾವಣಾ ಉಸ್ತುವಾರಿಯಾಗಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ ಅವರನ್ನು ಉತ್ತರಾಖಂಡದ ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಿದೆ.

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಲಕ್ಷ್ಮೀಕಾಂತ ಬಾಜಪೇಯಿ ಅವರನ್ನು ಜಾರ್ಖಂಡ್‌ನ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಉತ್ತರಾಖಂಡಕ್ಕೆ ದುಶ್ಯಂತಕುಮಾರ ಗೌತಮ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ..
ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ನೇಮಕ ಮಾಡಿದ್ದಾರೆ ಎಂದು ಅದು ಹೇಳಿದೆ.
ಬಿಜೆಪಿ ರಾಜ್ಯಸಭಾ ಸದಸ್ಯ ಮತ್ತು ತ್ರಿಪುರಾ ಮಾಜಿ ಮುಖ್ಯಮಂತ್ರಿ ಬಿಪ್ಲಬಕುಮಾರ ದೇವ ಅವರನ್ನು ಹರಿಯಾಣದ ಚುನಾವಣಾ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಬಿಜೆಪಿ ಮುಖಂಡ ಸುರೇಂದ್ರ ನಗರ ಚುನಾವಣಾ ಸಹ-ಪ್ರಭಾರಿಯಾಗಲಿದ್ದಾರೆ.

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿಗೆ ಮುಸ್ಲಿಂ ಮತಗಳು ಬೇಕು, ಆದರೆ ಟಿಕೆಟ್‌ ಕೊಡಲ್ಲ : ಕಾಂಗ್ರೆಸ್‌ ಬಗ್ಗೆ ನಸೀಂ ಖಾನ್ ತೀವ್ರ ಅಸಮಾಧಾನ, ಹುದ್ದೆಗೆ ರಾಜೀನಾಮೆ

ಬಿಹಾರದ ಮಾಜಿ ಸಚಿವ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿ ಮಂಗಲ ಪಾಂಡೆ ಅವರನ್ನು ಅದೇ ರಾಜ್ಯದ ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದೆ. ಬಿಜೆಪಿ ನಾಯಕರಾದ ಅಮಿತ್ ಮಾಳವೀಯ ಮತ್ತು ಆಶಾ ಲಾಕ್ರಾ ಸಹ ಪ್ರಭಾರಿಗಳಾಗಿರುತ್ತಾರೆ.
ಕೇಂದ್ರದ ಮಾಜಿ ಸಚಿವ ಪ್ರಕಾಶ ಜಾವಡೇಕರ ಅವರನ್ನು ದಕ್ಷಿಣ ರಾಜ್ಯ ಕೇರಳದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ನಡ್ಡಾ ಅವರು ಈ ಹಿಂದೆ ರಾಜ್ಯ ಸಚಿವರಾಗಿದ್ದ ಉತ್ತರ ಪ್ರದೇಶದ ವಿಧಾನ ಪರಿಷತ್‌ ಸದಸ್ಯ ಮಹೇಂದ್ರ ಸಿಂಗ್ ಅವರನ್ನು ಮಧ್ಯಪ್ರದೇಶದ ಬಿಜೆಪಿಯ ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಿದ್ದಾರೆ. ಸತೀಶ್ ಉಪಾಧ್ಯಾಯ ಅವರು ರಾಜ್ಯಕ್ಕೆ ಸಹ ಪ್ರಭಾರಿಯಾಗಿರುತ್ತಾರೆ.

ಗುಜರಾತ್‌ನ ಮಾಜಿ ಮುಖ್ಯಮಂತ್ರಿ ಮತ್ತು ಪಂಜಾಬ್‌ನ ಬಿಜೆಪಿ ಉಸ್ತುವಾರಿ ವಿಜಯ್ ರೂಪಾನಿ ಅವರನ್ನು ಪಂಜಾಬ್‌ ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದೆ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ನರೀಂದರ್ ಸಿಂಗ್ ಅವರು ರಾಜ್ಯದ ಚುನಾವಣಾ ಸಹ-ಪ್ರಭಾರಿಯಾಗಿದ್ದಾರೆ.
ಉತ್ತರ ಪ್ರದೇಶದ ಮಾಜಿ ಸಚಿವ ಶ್ರೀಕಾಂತ ಶರ್ಮಾ ಅವರನ್ನು ಹಿಮಾಚಲ ಪ್ರದೇಶದ ಚುನಾವಣಾ ಉಸ್ತುವಾರಿಯಾಗಿ ಬಿಜೆಪಿ ನೇಮಿಸಿದೆ. ಸಂಜಯ ಟಂಡನ್ ಸಹ-ಪ್ರಭಾರಿಯಾಗಿರುತ್ತಾರೆ.
ಒಡಿಶಾಕ್ಕೆ ವಿಜಯಪಾಲ ಸಿಂಗ್ ತೋಮರ್, ತಮಿಳುನಾಡಿಗೆ ಅರವಿಂದ ಮೆನನ್, ಪಶ್ಚಿಮ ಬಂಗಾಳಕ್ಕೆ ಮಂಗಲ ಪಾಂಡೆ ಇವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಅಂಡಮಾನ್ ಮತ್ತು ನಿಕೋಬಾರ್​ಗೆ ವೈ.ಸತ್ಯಕುಮಾರ, ಅರುಣಾಚಲ ಪ್ರದೇಶಕ್ಕೆ ಅಶೋಕ್ ಸಿಂಘಾಲ್, ಚಂಡೀಗಢಕ್ಕೆ ವಿಜಯಭಾಯಿ ರೂಪಾನಿ, ಗೋವಾಕ್ಕೆ ಆಶಿಶ್ ಸೂದ್, ಜಾರ್ಖಂಡ್​ಗೆ ಲಕ್ಷ್ಮೀಕಾಂತ ಬಾಜಪೇಯಿ, ಲಡಾಖ್​ಗೆ ತರುಣ ಚುಗ್, ಲಕ್ಷದ್ವೀಪಕ್ಕೆ ಅರವಿಂದ ಮೆನನ್, ಪುದುಚೇರಿಗೆ ನಿರ್ಮಲಕುಮಾರ ಸುರಾನಾ, ಸಿಕ್ಕಿಂಗೆ ದಿಲೀಪ ಜೈಸ್ವಾಲ್,

ಪ್ರಮುಖ ಸುದ್ದಿ :-   ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಮುಂಬೈ 26/11 ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ವಾದಿಸಿದ್ದ ಉಜ್ವಲ್ ನಿಕಮ್ ಕಣಕ್ಕಿಳಿಸಿದ ಬಿಜೆಪಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement