ನಿಗಮ-ಮಂಡಳಿ ಅಧಿಕಾರ 2 ವರ್ಷಕ್ಕೆ ನಿಗದಿ : ಡಿ.ಕೆ.ಶಿವಕುಮಾರ ಕೊಟ್ಟ ಕಾರಣ ಹೀಗಿದೆ..

ಬೆಂಗಳೂರು: ರಾಜ್ಯದ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ 34 ಶಾಸಕರನ್ನು ಆಯ್ಕೆ ಮಾಡಲಾಗಿದ್ದು, ಅವರಿಗೆ ಎರಡು ವರ್ಷ ಮಾತ್ರ ಅಧಿಕಾರದ ಅವಧಿ ನೀಡಲಾಗಿದೆ. ಇದು ಕೆಲವರ ಅಸಮಾಧಾನಕ್ಕೆ ಕಾರಣವಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (DK Shivakumar) ಅವರು “ಪಕ್ಷಕ್ಕಾಗಿ ದುಡಿದ ಎಲ್ಲ ಶಾಸಕರು, ಕಾರ್ಯಕರ್ತರಿಗೆ ಅಧಿಕಾರ ಸಿಗಲಿ ಎಂಬ ಕಾರಣಕ್ಕೆ ನಿಗಮ ಮಂಡಳಿಗಳಿಗೆ ಎರಡು ವರ್ಷ ಅವಧಿಯ ಸೂತ್ರವನ್ನು ಹೈಕಮಾಂಡ್ ನಿಗದಿ ಮಾಡಿದೆ” ಎಂದು ಹೇಳಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪಕ್ಷದ ಎಲ್ಲರಿಗೂ ಅವಕಾಶ ದೊರೆಯಬೇಕು ಎಂಬ ಕಾರಣಕ್ಕೆ 2 ವರ್ಷ ಮಾತ್ರ ಅಧಿಕಾರದ ಅವಧಿ ಸೂತ್ರವನ್ನು ಹೈಕಮಾಂಡ್‌ ನಿಗದಿ ಮಾಡಿದೆ ಎಂದು ಹೇಳಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಹೈಕಮಾಂಡ್ ಸೂತ್ರ ನಿಗದಿ ಪಡಿಸಿದ್ದನ್ನು ನಾವು ಜಾರಿಗೆ ತಂದಿದ್ದೇವೆ. ಇಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವೂ ಇಲ್ಲ, ಡಿ.ಕೆ. ಶಿವಕುಮಾರ ಅವರ ಪಾತ್ರವೂ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಲು ಸಾಕಷ್ಟು ಕಾರ್ಯಕರ್ತರು ದುಡಿದಿದ್ದಾರೆ. ಆದ ಕಾರಣ ಎಲ್ಲರಿಗೂ ಅವಕಾಶ ನೀಡಬೇಕು ಎಂಬ ಕಾರಣಕ್ಕೆ ಹೈಕಮಾಂಡ್‌ ಈ ಸೂತ್ರ ಸಿದ್ಧಪಡಿಸಿದೆ. ಅದರಂತೆ ನಾವು ಪಾಲನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement