ಬೆಳ್ತಂಗಡಿ : ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ; ಮೂವರು ಸಾವು

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಬಳಿ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ಕೇರಳದ ಸ್ವಾಮಿ(55), ವರ್ಗೀಸ್‌ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ, ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಹಾಗೂ ಕೇಶವ ಗಾಯಗೊಂಡವರು ಎಂದು ಹೇಳಲಾಗಿದೆ.

ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು ಎನ್ನಲಾಗಿದೆ.
ಮೃತಪಟ್ಟ ಮೂವರು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ಓರ್ವನ ಮೃತದೇಹ ದೊರೆತಿದ್ದು, ಇನ್ನಿಬ್ಬರ ದೇಹ ಸ್ಫೋಟದ ಸುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ. ಸ್ಫೋಟದ ಸದ್ದು ಸುಮಾರು 4 ಕಿಮೀ ದೂರದ ವರೆಗೆ ಕೇಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದರೂ, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಪ್ರಮುಖ ಸುದ್ದಿ :-   ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ : ತಾಯಿ-ಮಗು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement