ಮುಂಬರುವ ಲೋಕಸಭೆ ಚುನಾವಣೆಗೆ 96 ಕೋಟಿ ಮತದಾರರು

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ 47 ಕೋಟಿ ಮಹಿಳೆಯರು ಸೇರಿದಂತೆ ಮುಂದಿನ ಲೋಕಸಭಾ ಚುನಾವಣೆಗೆ 1.73 ಕೋಟಿ (18-19 ವಯೋಮಾನ) ಯುವ ಮತದಾರರು ಸೇರಿದಂತೆ 96 ಕೋಟಿ ಮತದಾರರು ಮತದಾನಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಜನರು ಮತ ಚಲಾಯಿಸಲು ಅರ್ಹರಾಗಿದ್ದು, ಇದಕ್ಕಾಗಿ ಭಾರತದಾದ್ಯಂತ 12 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಮುಂದಿನ ಲೋಕಸಭಾ ಚುನಾವಣೆಗೆ 1.73 ಕೋಟಿ (18-19 ವಯೋಮಾನ) ಯುವ ಮತದಾರರು ಮತದಾನಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

18ನೇ ಲೋಕಸಭೆಯ ಚುನಾವಣೆಯನ್ನು ಸುಗಮವಾಗಿ ನಡೆಸಲು 1.5 ಕೋಟಿ ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. 2023 ರಲ್ಲಿ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಕಳುಹಿಸಿರುವ ಪತ್ರದ ಪ್ರಕಾರ, ಭಾರತವು 1951 ರಲ್ಲಿ 17.32 ಕೋಟಿ ನೋಂದಾಯಿತ ಮತದಾರರನ್ನು ಹೊಂದಿತ್ತು, ಇದು 1957 ರಲ್ಲಿ 19.37 ಕೋಟಿಗೆ ಏರಿತು.
2019 ರ ಚುನಾವಣೆಯಲ್ಲಿ 91.20 ಕೋಟಿ ಮತದಾರರಿದ್ದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಗೆ 96 ಕೋಟಿ ಮತದಾರರು ಮತದಾನಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಒಟ್ಟು ಮತದಾರರ ಪೈಕಿ ಸುಮಾರು 18 ಲಕ್ಷ ಮಂದಿ ವಿಕಲಚೇತನರು. ಮೊದಲ ಲೋಕಸಭೆ ಚುನಾವಣೆಯಲ್ಲಿ ಶೇ.45ರಷ್ಟು ಮತದಾನವಾಗಿತ್ತು. ಕಳೆದ ಲೋಕಸಭಾ ಚುನಾವಣೆಯಲ್ಲಿ ಇದು ಶೇ 67ರಷ್ಟಿತ್ತು

ಪ್ರಮುಖ ಸುದ್ದಿ :-   ವೀಡಿಯೊ...| ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದ ಮಮತಾ ಬ್ಯಾನರ್ಜಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement