ಸಂಸದ‌ ರಮೇಶ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಬಾಗಲಕೋಟೆ : ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ರಮೇಶ ಜಿಗಜಿಣಗಿ ಅವರು ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಆದಿತ್ಯ ಎಲ್‌1, ಪ್ರೋಬಾ-3 ಉಪಗ್ರಹಗಳ ನೆರವಿನಿಂದ ಸೌರ ಸ್ಫೋಟಗಳ ರಹಸ್ಯ ಬಯಲು ಮಾಡಿದ ವಿಜ್ಞಾನಿಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement