ಕೆರೆಗೋಡು ಹನುಮ ಧ್ವಜ ಪ್ರಕರಣ: ಪಿಡಿಒ ತಲೆದಂಡ

ಮಂಡ್ಯ : ಮಂಡ್ಯದ ಕೆರಗೋಡು (Keragodu) ಗ್ರಾಮದ ಧ್ವಜ ವಿವಾದ ಪ್ರಕರಣದಲ್ಲಿ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯತ ಪಿಡಿಒ ಜೀವನ್‌.ಬಿ.ಎಂ ಅವರನ್ನು ಸರ್ಕಾರ ಅಮಾನತು ಮಾಗಿದೆ. ಐದು ಕಾರಣಗಳನ್ನು ನೀಡಿ ಪಿಡಿಒ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ತನ್ವೀರ್ ಆಸೀಫ್ ಸೇಠ್ ಆದೇಶ ಹೊರಡಿಸಿದ್ದಾರೆ.
ಕೆರಗೋಡು ಗ್ರಾಮ ಪಂಚಾಯತ ಸ್ವತ್ತನ್ನು ಖಾಸಗಿಯವರಿಗೆ ನೀಡುವುದಕ್ಕೆ ಸರ್ಕಾರದ ಅನುಮತಿ ಕಡ್ಡಾಯವಿದ್ದರೂ ನಿಯಮ ಉಲ್ಲಂಘಿಸಿ ಖಾಸಗಿಯವರಿಗೆ ನೀಡಿ ಕೆರಗೋಡು ಗ್ರಾಮದಲ್ಲಿ ನಡೆದ ಸಂಘರ್ಷಕ್ಕೆ ಪಿಡಿಒ ನೇರ ಕಾರಣ ಎಂದು ಅಮಾನತು ಮಾಡಲಾಗಿದೆ.

ಪಿಡಿಒ ಅಮಾನತು ಆದೇಶಕ್ಕೆ 5 ಕಾರಣ ಕೊಟ್ಟ ಸರ್ಕಾರ
ಗ್ರಾಮ ಪಂಚಾಯತ ಸ್ವತ್ತನ್ನು ಖಾಸಗಿಯವರಿಗೆ ನೀಡುವುದಕ್ಕೆ ಸರ್ಕಾರದ (ಜಿಲ್ಲೆ ಅಥವಾ ತಾಲೂಕು ಪಂಚಾಯತ) ಅನುಮತಿ ಕಡ್ಡಾಯ.
ಧ್ವಜ ಸ್ತಂಭ ನಿರ್ಮಾಣಕ್ಕೆ ಅನುಮತಿ ನೀಡಿ ಕರ್ತವ್ಯ ಲೋಪ.
ಧ್ವಜ ಸ್ತಂಭದಲ್ಲಿ ರಾಷ್ಟ್ರೀಯ ಧ್ವಜ ಹಾರಿಸಲು ಅನುಮತಿ ನೀಡಿ, ಷರತ್ತು ಉಲ್ಲಂಘಿಸಿದರೂ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ.
ರಾಷ್ಟ್ರ ಧ್ವಜದ ಬದಲು ಹನುಮ ಧ್ವಜ‌ ಹಾರಿಸಲು ಅವಕಾಶ ನೀಡಿರುವುದು ಹಾಗೂ
ಹನುಮ‌ ಧ್ವಜ‌ಹಾರಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು.
ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಖಾಸಗಿಯವರಿಗೆ ಟ್ರಸ್ಟ್‌ಗೆ ಧ್ವಜ ಸ್ತಂಭ ನಿರ್ಮಾಣಕ್ಕೆ ಅನುಮತಿ ನೀಡಿರುವುದು.
ಈ ಐದು ಕಾರಣಗಳನ್ನು ನೀಡಿ ಕೆರಗೋಡು ಗ್ರಾಮ ಪಂಚಾಯತ ಪಿಡಿಒ ಜೀವನ್‌.ಬಿ.ಎಂ ಅವರನ್ನು ಅಮಾನತು ಮಾಡಿ ಮಂಡ್ಯ ಜಿಪಂ ಸಿಇಒ ಆದೇಶ ಹೊರಡಿಸಿದ್ದಾರೆ.

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿಗೆ ಮುಸ್ಲಿಂ ಮತಗಳು ಬೇಕು, ಆದರೆ ಟಿಕೆಟ್‌ ಕೊಡಲ್ಲ : ಕಾಂಗ್ರೆಸ್‌ ಬಗ್ಗೆ ನಸೀಂ ಖಾನ್ ತೀವ್ರ ಅಸಮಾಧಾನ, ಹುದ್ದೆಗೆ ರಾಜೀನಾಮೆ

ಕೆರಗೋಡು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಗ್ರಾಮಸ್ಥರು ರಾಷ್ಟ್ರ ಧ್ವಜ ಹಾರಿಸಲು ಅನುಮತಿ ಪಡೆದು, ಹನುಮ ಧ್ವಜ ಹಾರಿಸಲಾಗಿದೆ ಎಂದು ಆರೋಪಿಸಲಾಗಿದೆ. ಬಳಿಕ ಪೊಲೀಸರು ಪ್ರವೇಶಿಸಿ ಹನುಮ ಧ್ವಜ ಇಳಿಸಿ ರಾಷ್ಟ್ರ ಧ್ವಜ ಹಾರಿಸಿದ್ದರು. ಹನುಮ ಧ್ವಜ ಇಳಿಸಿದ ವಿಚಾರಕ್ಕೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದ್ದವು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement