ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಚಕಮಕಿ : 3 ಸಿ ಆರ್‌ ಪಿ ಎಫ್ ಯೋಧರು ಹುತಾತ್ಮ, 14 ಮಂದಿಗೆ ಗಾಯ

ರಾಯ್ಪುರ: ಛತ್ತೀಸ್‌ಗಢದ ಗಡಿಯಲ್ಲಿರುವ ಟೇಕಲ್‌ಗುಡೆಂ ಗ್ರಾಮದಲ್ಲಿ ಮಂಗಳವಾರ ಮಾವೋವಾದಿಗಳು ಗುಂಡಿನ ದಾಳಿ ನಡೆಸಿದ್ದರಿಂದ ಮೂವರು ಯೋಧರು ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಈ ಗ್ರಾಮವು ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಗಳ ಗಡಿಯಲ್ಲಿದೆ.
ನಕ್ಸಲ್ ಚಟುವಟಿಕೆಗಳ ಮೇಲೆ ನಿಗಾ ಇಡಲು ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಶಿಬಿರವನ್ನು ಸ್ಥಾಪಿಸಿದ್ದು, ಸ್ಥಳೀಯರಿಗೂ ಅನುಕೂಲವಾಗಲಿದೆ. ಶಿಬಿರವನ್ನು ಸ್ಥಾಪಿಸಿದ ನಂತರ, ಸಿಆರ್‌ಪಿಎಫ್‌ನ ಕೋಬ್ರಾ, ಜಿಲ್ಲಾ ಮೀಸಲು ಗುಂಪುಗಳು (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆಗಳ ಸಿಬ್ಬಂದಿ ಒಳಗೊಂಡ ಪಡೆಗಳು ಜೋನಗುಡ-ಅಲಿಗುಡಾ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ ಮಾವೋವಾದಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದರು.

ಇದು ಸಿಆರ್‌ಪಿಎಫ್‌ (CRPF)ನ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (CoBRA) ಜಂಗಲ್ ವಾರ್ಫೇರ್ ಘಟಕವಾಗಿದೆ.
ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು, 14 ಮಂದಿ ಗಾಯಗೊಂಡಿದ್ದರು. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ ನಂತರ ಮಾವೋವಾದಿಗಳು ಅರಣ್ಯದೊಳಕ್ಕೆ ಓಡಿಹೋದರು.
ಗಾಯಗೊಂಡ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ರಾಯಪುರಕ್ಕೆ ಕಳುಹಿಸಲಾಗಿದೆ. ಗಾಯಗೊಂಡವರನ್ನು ಸ್ಥಳಾಂತರಿಸಲು ಹೆಲಿಕಾಪ್ಟರ್‌ಗಳನ್ನು ಕೋರಲಾಗಿದೆ ಎಂದು ವರದಿ ತಿಳಿಸಿದೆ.

ಪ್ರಮುಖ ಸುದ್ದಿ :-   ದಕ್ಷಿಣ ಭಾರತದಲ್ಲಿ ತೀವ್ರ ನೀರಿನ ಬಿಕ್ಕಟ್ಟು : 42 ಜಲಾಶಯದಲ್ಲಿ ಕೇವಲ 17%ರಷ್ಟು ನೀರಿನ ಸಂಗ್ರಹ ಮಾತ್ರ ಬಾಕಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement