ಮೈಸೂರು: ನಾಮಫಲಕ ಅಳವಡಿಕೆ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಜಗಳ ; ಹಲವು ಮಂದಿಗೆ ಗಾಯ

ಮೈಸೂರು: ಅಂಬೇಡ್ಕರ ನಾಮಫಲಕ (Ambedkar Nameplate) ವಿಚಾರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದ ಘಟನೆ ನಂಜನಗೂಡು (Nanjangud) ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮನೆಗಳ ಮೇಲೆಯೂ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದ್ದು, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಜಖಂ ಆಗಿದೆ. ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು , ಎಸ್​​ಪಿ ಸೀಮಾ ಲಾಟ್ಕರ್   ದೌಡಾಯಿಸಿದ್ದಾರೆ. ಘಟನೆ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಬೇಡ್ಕರ ನಾಮಫಲಕ ಹಾಕುವ ವಿಚಾರದಲ್ಲಿ ಹಲ್ಲರೆ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ ನಡುವೆ ನಡೆದ ಜಗಳ ವಿಕೋಪಕ್ಕೆ ಹೋಗಿದೆ.

ಹಲ್ಲರೆ ಗ್ರಾಮದಿಂದ ಹುರ ಗ್ರಾಮದ ಕಡೆಗೆ ತೆರಳುವ ರಸ್ತೆಗೆ ಡಾ. ಬಿ ಆರ್ ಅಂಬೇಡ್ಕ‌ರ್ ಹೆಸರಿಡಲು ಪರಿಶಿಷ್ಟ ಸಮುದಾಯದ ಯುವಕರು ಸ್ಥಳೀಯ ಗ್ರಾಮ ಪಂಚಾಯತಕ್ಕೆ ಅರ್ಜಿ ಸಲ್ಲಿಸಿ ಪಿಡಿಒ ಅವರಿಂದ ಅನುಮತಿ ಪಡೆದಿದ್ದು, ಆದರೆ ‘ಬೀದಿಯ ಕೊನೆಯಲ್ಲಿ ನಮ್ಮ ಮನೆಗಳಿದ್ದು, ಇಲ್ಲಿ ಫಲಕ ಅಳವಡಿಸಬೇಡಿ’ ಎಂದು ನಾಯಕ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಹೀಗಾಗಿ ಐದು ದಿನಗಳ ಹಿಂದೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ಮುಂದೂಡಲಾಗಿತ್ತು.

ಪ್ರಮುಖ ಸುದ್ದಿ :-   ಕರ್ನಾಟಕ ಬಿಜೆಪಿ ಹಂಚಿಕೊಂಡ ಅನಿಮೇಟೆಡ್ ವೀಡಿಯೊ ತೆಗೆದುಹಾಕಿ ; ಎಕ್ಸ್​ ಗೆ ಚುನಾವಣಾ ಆಯೋಗ ಸೂಚನೆ

ಸೋಮವಾರ ಮತ್ತೆ ನಾಮಫಲಕ ಅಳವಡಿಸಲು ಮುಂದಾದಾಗ ಆರಂಭಗೊಂಡ ಜಗಳವು ಹೊಡೆದಾಟಕ್ಕೆ ತಿರುಗಿದ್ದು, ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಎರಡೂ ಕಡೆಗಳಿಂದಲೂ ಕಲ್ಲು ತೂರಾಟ ನಡೆದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನಂಜನಗೂಡು ಗ್ರಾಮಾಂತರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸರ ಸಹಿತ 30ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದೆ ಎಂದು ವರದಿಯಾಗಿದೆ. ಈ ಪೈಕಿ ಎಂಟು ಮಂದಿಯನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ಅರಿತ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್, ಅಡಿಷನಲ್ ಎಸ್ ಪಿ ನಂದಿನಿ ಸಹಿತ ನೂರಾರು ಪೊಲೀಸರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement