ರಾಮಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಭಾಗವಹಿಸಿದ್ದ ಮುಖ್ಯ ಇಮಾಮ್ ವಿರುದ್ಧ ಫತ್ವಾ, ಬೆದರಿಕೆ ಕರೆ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಭಾಗವಹಿಸಿದ ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ ಮುಖ್ಯಸ್ಥ ಡಾ.ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ವಿರುದ್ಧ ಫತ್ವಾ ಹೊರಡಿಸಲಾಗಿದೆ ಎಂದು ವರದಿಯಾಗಿದೆ.
ಫತ್ವಾವನ್ನು ಭಾನುವಾರ ಹೊರಡಿಸಲಾಗಿದೆ. ಆದರೆ ರಾಮ ಮಂದಿರದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ದಿನದಿಂದಲೂ ತನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಇಮಾಮ್ ಹೇಳಿದ್ದಾರೆ.
“ಮುಖ್ಯ ಇಮಾಮ್ ಆಗಿ, ನಾನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಿಂದ ಆಹ್ವಾನವನ್ನು ಸ್ವೀಕರಿಸಿದ್ದೇನೆ. ನಾನು ಎರಡು ದಿನಗಳ ಕಾಲ ಆಲೋಚಿಸಿ ನಂತರ ಸೌಹಾರ್ದತೆ ಮತ್ತು ದೇಶಕ್ಕಾಗಿ ಅಯೋಧ್ಯೆಗೆ ಹೋಗಲು ನಿರ್ಧರಿಸಿದೆ. ಫತ್ವಾ ಭಾನುವಾರ ಹೊರಡಿಸಲಾಗಿದೆ. ಆದರೆ ನನಗೆ ಜನವರಿ 22 ರ ಸಂಜೆಯಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಇಲ್ಯಾಸಿ ಸೋಮವಾರ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಭೇಟಿ ನೀಡಿದಾಗಿನಿಂದ ತನಗೆ ಪ್ರತಿಭಟನೆಗಳು ಮತ್ತು ಬೆದರಿಕೆ ಕರೆಗಳು ಬರುತ್ತಿವೆ ಎಂದು ಇಸ್ಲಾಂ ಧರ್ಮಗುರು ಹೇಳಿದ್ದಾರೆ.
“ನಾನು ಕೆಲವು ಕರೆಗಳನ್ನು ರೆಕಾರ್ಡ್ ಮಾಡಿದ್ದೇನೆ, ಅದರಲ್ಲಿ ಕರೆ ಮಾಡಿದವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ … ನನ್ನನ್ನು ಪ್ರೀತಿಸುವವರು, ರಾಷ್ಟ್ರವನ್ನು ಪ್ರೀತಿಸುವವರು ನನ್ನನ್ನು ಬೆಂಬಲಿಸುತ್ತಾರೆ. ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ನನ್ನನ್ನು ದ್ವೇಷಿಸುವವರು ಬಹುಶಃ ಪಾಕಿಸ್ತಾನಕ್ಕೆ ಹೋಗಬೇಕು. ನಾನು ಪ್ರೀತಿಯ ಸಂದೇಶವನ್ನು ನೀಡಿದ್ದೇನೆ. ; ನಾನು ಯಾವುದೇ ಅಪರಾಧ ಮಾಡಿಲ್ಲ ಎಂದು ಅವರು ಹೇಳಿದರು.
ಮುಂದೆ ಕ್ಷಮೆ ಕೇಳುವುದಿಲ್ಲ, ರಾಜೀನಾಮೆ ನೀಡುವುದಿಲ್ಲ ಎಂದ ಅವರು, ಅವರು ಏನು ಬೇಕಾದರೂ ಮಾಡಿಕೊಳ್ಳಬಹುದು ಎಂದರು.

ಪ್ರಮುಖ ಸುದ್ದಿ :-   "ಚಾಣಕ್ಯ ಕೂಡ...: ತನ್ನ ಲುಕ್‌ ಬಗ್ಗೆ ಟ್ರೋಲ್‌ ಮಾಡಿದವರ ಬಾಯ್ಮುಚ್ಚಿಸಿದ ಬೋರ್ಡ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ

ಇದಕ್ಕೂ ಮುನ್ನ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಡಾ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಭಾಗವಹಿಸಿದ್ದರು ಮತ್ತು ಪ್ರೀತಿ ಮತ್ತು ಸಾಮರಸ್ಯದ ಸಂದೇಶವನ್ನು ಹರಡುವುದು ತನ್ನ ಕೆಲಸ ಎಂದು ಹೇಳಿದ್ದರು.
ಇದು ನವ ಭಾರತದ ಮುಖ. ಮಾನವೀಯತೆಯೇ ನಮ್ಮ ದೊಡ್ಡ ಧರ್ಮ. ನಮಗೆ ರಾಷ್ಟ್ರವೇ ಮೊದಲು ಎಂದರು.
ಜನವರಿ 22 ರಂದು ಸಮಾರಂಭದ ನೇತೃತ್ವ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಒಂದು ಗಂಟೆ ಕಾಲ ಧಾರ್ಮಿಕ ವಿಧಿ ವಿಧಾನಗಳ ನಂತರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ರಾಮಲಲ್ಲಾ ಮೂರ್ತಿಯನ್ನು ಅನಾವರಣಗೊಳಿಸಲಾಯಿತು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ವೇಳೆಯೇ ಕಾಂಗ್ರೆಸ್ಸಿಗೆ ಶಾಕ್‌ : ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಈ ಕುರಿತು ಮುಖ್ಯ ಇಮಾಮ್ ಅವರು ಕೇಂದ್ರ ಗೃಹ ಸಚಿವಾಲಯ ಮತ್ತು ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಮತ್ತೊಂದೆಡೆ ಅವರ ವಿರುದ್ಧದ ಫತ್ವಾ ದುರದೃಷ್ಟಕರ ಮತ್ತು ಖಂಡನೀಯ ಕೃತ್ಯ ಎಂದು ವಿಎಚ್‌ಪಿ ಬಣ್ಣಿಸಿದೆ. ಕೆಲವು ಮೂಲಭೂತವಾದಿಗಳು ಇಸ್ಲಾಂ ಅನ್ನು ತಮ್ಮ ಆಸ್ತಿ ಎಂದು ಪರಿಗಣಿಸುತ್ತಾರೆ ಎಂದು ಅಸಮಾದಾನ ವ್ಯಕ್ತಪಡಿಸಿದೆ.
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್, ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೂಜಾ ವಿಧಿವಿಧಾನದ ವೇಳೆ ಗರ್ಭಗುಡಿಯೊಳಗೆ ಉಪಸ್ಥಿತರಿದ್ದರು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement