
ಬೆಂಗಳೂರು : ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ಎಸ್. ದಿನೇಶಕುಮಾರ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಯವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಸರ್ಕಾರ ಈ ಸಂಬಂಧ ಬುಧವಾರ ಅಧಿಸೂಚನೆ ಪ್ರಕಟಿಸಿದೆ. ಫೆಬ್ರವರಿ 24ರಂದು ನ್ಯಾ. ದಿನೇಶಕುಮಾರ ಅವರು ಸೇವೆಯಿಂದ ನಿವೃತ್ತರಾಗಲಿದ್ದಾರೆ. ಅವರು 2015ರಿಂದ ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶರಾಗಿದ್ದಾರೆ. ಅವರು 24 ದಿನಗಳ ಕಾಲ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ.
ಜನವರಿ 19ರಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಂಚ್ರ ವರಾಳೆ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸ್ಸು ಮಾಡಿದ ನಂತರ, ತೆರವಾಗುವ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾ. ಪಿ ಎಸ್ ದಿನೇಶಕುಮಾರ ಅವರ ಹೆಸರನ್ನು ಕೊಲಿಜಿಯಂ ಶಿಫಾರಸ್ಸು ಮಾಡಿತ್ತು. ಜನವರಿ 24ರಂದು ಕೇಂದ್ರ ಸರ್ಕಾರವು ನ್ಯಾ. ದಿನೇಶ್ ಕುಮಾರ್ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಅಧಿಸೂಚನೆ ಪ್ರಕಟಿಸಿತ್ತು.



ನಿಮ್ಮ ಕಾಮೆಂಟ್ ಬರೆಯಿರಿ