ಟಿಪ್ಪು ಸುಲ್ತಾನ್‌ ನಾಮಫಲಕಕ್ಕೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು: ಪ್ರತಿಭಟನೆ

ರಾಯಚೂರು : ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಘಟನೆ ರಾಯಚೂರು ಜಿಲ್ಲೆಯ ಸಿರವಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿಯ ಟಿಪ್ಪು ಸರ್ಕಲ್​ನಲ್ಲಿನ ಭಾವಚಿತ್ರಕ್ಕೆ ಮಂಗಳವಾರ ರಾತ್ರಿ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಪರಾರಿಯಾಗಿದ್ದಾರೆ. ಇದನ್ನು ಬೆಳಗ್ಗೆ ನೋಡಿದ ಸಮುದಾಯದ ಮುಖಂಡರು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.

ರಸ್ತೆ ಸಂಚಾರ ಬಂದ್ ಮಾಡಿ, ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮುಖಂಡರ ಜೊತೆ ಚರ್ಚೆ ನಡೆಸಿದ್ದು, ಫೋಟೋಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಭರವಸೆ ನೀಡಿ ರಸ್ತೆ ತಡೆ ಕೈಬಿಡುವಂತೆ ತಿಳಿಸಿದ್ದಾರೆ. ನಂತರ ಪ್ರತಿಭಟನೆ ಮುಂದುವರಿದಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement