ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು : ಶಾಸಕ ಬಾಲಕೃಷ್ಣ

ರಾಮನಗರ : ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಹೆಚ್ಚು ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜ್ಯ ಸರ್ಕಾರ ಕೊಟ್ಟಿರುವ 5 ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಬಹುದು ಎಂದು ಮಾಗಡಿ ಶಾಸಕ ಎಚ್.ಡಿ. ಬಾಲಕೃಷ್ಣ ಹೇಳಿದ್ದಾರೆ.
ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರ ಅಭಿವೃದ್ಧಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಮತ ನೀಡಿ ಕಾಂಗ್ರೆಸ್ಸಿನ ಅಭ್ಯರ್ಥಿಗಳನ್ನು ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ವೇಳೆ ಬಿಜೆಪಿಯವರು ರಾಮ ಮಂದಿರ ನಿರ್ಮಾಣದ ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ಆದರೆ, ನಾವು 5 ಗ್ಯಾರಂಟಿಗಳನ್ನ ನೀಡಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಜನರಿಗೆ 5 ಗ್ಯಾರಂಟಿ ಯೋಜನೆಗಳು ಇಷ್ಟ ಇಲ್ಲ ಎಂದು ಹೇಳಿದಂತಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಯೂ ಚರ್ಚೆ ಮಾಡಿದ್ದೇನೆ. ನಿಮಗೆ ಬಿಜೆಪಿ ರಾಜಕಾರಣದ ಮಂತ್ರಾಕ್ಷತೆ ಬೇಕೋ ಅಥವಾ ಜನಸಾಂಾನ್ಯರ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಬೇಕೋ ಎಂದು ಲೋಕಸಭೆ ಚುನಾವಣೆಯಲ್ಲಿ ಜನ ತೀರ್ಮಾನ ಮಾಡಬೇಕು ಎಂದು ಹೇಳಿರು.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

2024ರ ಲೋಕಸಭೆ ಚುನಾವಣೆಯಲ್ಲಿ ನಮ್ಮ ರಾಜ್ಯದಿಂದ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನಗಳನ್ನು ನೀಡಿ ಗೆಲ್ಲಿಸಿದರೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ. ಒಂದು ವೇಳೆ ನೀವು ಕಾಂಗ್ರೆಸ್‌ ಅಭ್ಯರ್ಥೊಗಳನ್ನು ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ಜನ ತಿರಸ್ಕಾರ ಮಾಡಿದ್ದಾರೆ ಎಂದರ್ಥವಾಗುತ್ತದೆ ಎಂದು ಅವರು ಹೇಳಿದ್ದಾರೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement