ರಾಮ ಮಂದಿರ ಉದ್ಘಾಟನೆ : ಸೋಮವಾರ ಸರ್ಕಾರಿ ರಜೆ ನೀಡಲ್ಲ ; ಸಿಎಂ ಸಿದ್ದರಾಮಯ್ಯ

ತುಮಕೂರು: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ಸೋಮವಾರ(ಜನವರಿ 22) ನಡೆಯಲಿದ್ದು ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಸರ್ಕಾರಿ ರಜೆ ಘೋಷಿಸಬೇಕು ಎಂದು ಬಿಜೆಪಿ, ಹಿಂದೂ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಆಗ್ರಹಿಸಿದ್ದವು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತುಮಕೂರಿನಲ್ಲಿ … Continued

ರಾಮ ಮಂದಿರ ಉದ್ಘಾಟನೆ : ಜನವರಿ 22 ರಂದು ಸಾರ್ವಜನಿಕ ರಜೆ ಘೋಷಿಸಿದ ಕಾಂಗ್ರೆಸ್ ಆಡಳಿತದ ಮೊದಲ ರಾಜ್ಯವಾದ ಹಿಮಾಚಲ..!

ಶಿಮ್ಲಾ: ಅಯೋಧ್ಯೆಯಲ್ಲಿ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಸರ್ಕಾರ ಜನವರಿ 22 ರಂದು ಸಾರ್ವಜನಿಕ ರಜೆ ಘೋಷಿಸಿದೆ. ಹಿಮಾಚಲ ಪ್ರದೇಶ ರಾಮಮಂದಿರ ಕಾರ್ಯಕ್ರಮಕ್ಕೆ ರಜೆ ಘೋಷಿಸಿದ ಏಕೈಕ ಕಾಂಗ್ರೆಸ್ ಆಡಳಿತದ ರಾಜ್ಯವಾಗಿದೆ. ಭಗವಾನ್‌ ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾ’ದ ಸಂದರ್ಭದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಜನವರಿ … Continued

ತುರ್ತು ಚಿಕಿತ್ಸೆಗೆ ಏರ್‌ಲಿಫ್ಟ್‌ ಮಾಡಲು ಭಾರತೀಯ ವಿಮಾನಕ್ಕೆ ಮಾಲ್ಡೀವ್ಸ್ ಅಧ್ಯಕ್ಷರಿಂದ ಅನುಮತಿ ನಿರಾಕರಣೆ : ಬಾಲಕ ಸಾವು- ವರದಿ

ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣಗೊಂಡ ನಂತರ ಮಾಲ್ಡೀವ್ಸ್ ಅಧ್ಯಕ್ಷರ ಹಠಮಾರಿತನಕ್ಕೆ 14 ವರ್ಷದ ಬಾಲಕ ಜೀವತೆತ್ತ ಘಟನೆ ವರದಿಯಾಗಿದೆ. ಜೀವವನ್ನು ಸಮರ್ಥವಾಗಿ ಉಳಿಸಬಹುದಾಗಿದ್ದ ಭಾರತೀಯ ಡೋರ್ನಿಯರ್ ವಿಮಾನದ ಬಳಕೆಗೆ ಅಧ್ಯಕ್ಷ ಮೊಹಮ್ಮದ್ ಮುಯಿಝು ಅನುಮತಿ ನಿರಾಕರಿಸಿದ ನಂತರ 14 ವರ್ಷದ ಮಾಲ್ಡೀವ್ಸ್ ಬಾಲಕ ಶನಿವಾರ ಮೃತಪಟ್ಟಿದ್ದಾನೆ ಎಂದು ಸ್ಥಳೀಯ ಮಾಧ್ಯಮಗಳು ವರದಿ … Continued

ರಾಮ ಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಹೊರಟ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ

ಬೆಂಗಳೂರು: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Deve Gowda) ಹಾಗೂ ಕುಟುಂಬದ ಸದಸ್ಯರು ಅಯೋಧ್ಯೆಗೆ ತೆರಳಿದ್ದಾರೆ. ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್‌ ರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಪೂಜಾ ಕೈಂಕರ್ಯಗಳು ಈಗಾಗಲೇ ಆರಂಭಗೊಂಡಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಮಾಜಿ ಪ್ರಧಾನಿ ದೇವೇಗೌಡರು ಭಾನುವಾರ (ಜನವರಿ … Continued

ಅಯೋಧ್ಯೆಯ ರಾಮ ಮಂದಿರಕ್ಕೆ ಪಾಕ್‌ ಆಕ್ರಮಿತ ಕಾಶ್ಮೀರದಿಂದ ನೀರು ಕಳುಹಿಸಿದ ಮುಸ್ಲಿಂ ವ್ಯಕ್ತಿ…!

ನವದೆಹಲಿ: ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಭಗವಾನ್‌ ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬಳಸಲು ಮುಸ್ಲಿಂ ವ್ಯಕ್ತಿಯೊಬ್ಬರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಶಾರದಾ ಪೀಠದ ಕುಂಡದಿಂದ ಪವಿತ್ರ ನೀರನ್ನು ಸಂಗ್ರಹಿಸಿ ಬ್ರಿಟನ್ ಮೂಲಕ ಭಾರತಕ್ಕೆ ಕಳುಹಿಸಿದ್ದಾರೆ…! 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರದಲ್ಲಿ ಬಾಲಾಕೋಟ್ ವೈಮಾನಿಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ … Continued

ಭಗವಾನ್‌ ರಾಮಲಲ್ಲಾ ವಿಗ್ರಹದ ಹಣೆಗೆ ಪ್ರತಿ ʼರಾಮನವಮಿʼಗೆ ಸೂರ್ಯನ ಬೆಳಕಿನ ತಿಲಕ : ʼಸೂರ್ಯ ತಿಲಕʼಕ್ಕಾಗಿ ವಿಜ್ಞಾನಿಗಳಿಂದ ಕನ್ನಡಿ-ಮಸೂರ ವ್ಯವಸ್ಥೆ; ಇದರ ವಿಶೇಷತೆ ಇಲ್ಲಿದೆ

ನವದೆಹಲಿ : ವರ್ಷಕ್ಕೊಮ್ಮೆ ವಿಶೇಷವಾದ ‘ಸೂರ್ಯ ತಿಲಕ’ ಅಯೋಧ್ಯೆ ರಾಮ ಮಂದಿರದ ರಾಮಲಲ್ಲಾನ ಹಣೆಯನ್ನು ಅಲಂಕರಿಸುತ್ತದೆ. ಪ್ರತಿ ರಾಮ ನವಮಿಯಂದು ಅಥವಾ ಜನ್ಮದಿನದಂದು ರಾಮಲಲ್ಲಾನಿಗಾಗಿ ಭಾರತೀಯ ವಿಜ್ಞಾನಿಗಳು ವಿನ್ಯಾಸಗೊಳಿಸಿದ ವಿಶೇಷ ʼಸೂರ್ಯ ತಿಲಕʼವನ್ನು ವಿನ್ಯಾಸಗೊಳಿಸಿದ್ದಾರೆ. ಉನ್ನತ ಸರ್ಕಾರಿ ಸಂಸ್ಥೆಯ ವಿಜ್ಞಾನಿಗಳು ವಿಶೇಷ ಕನ್ನಡಿ ಮತ್ತು ಮಸೂರ ಆಧಾರಿತ ಉಪಕರಣವನ್ನು ವಿನ್ಯಾಸಗೊಳಿಸಿದ್ದಾರೆ, ಇದು ಪ್ರತಿ ರಾಮನವಮಿ ದಿನ … Continued

ʼಸಿದ್ಧಗಂಗಾʼ ಬೆಳಕು ಪೂಜ್ಯ ಶ್ರೀ ಡಾ.ಶಿವಕುಮಾರ ಸ್ವಾಮಿಗಳು

(೨೧-೦೧-೨೦೨೪ರಂದು ಪೂಜ್ಯರಾದ ಡಾ. ಶಿವಕುಮಾರ ಸ್ವಾಮಿಗಳ ೫ನೇ ಪುಣ್ಯಸ್ಮರಣೆ ಸಿದ್ಧಗಂಗಾ ಮಠದಲ್ಲಿ ಜರುಗಲಿದ್ದು, ಆ ನಿಮಿತ್ತ ಲೇಖನ) ೭೦೦ ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಸಿದ್ಧಗಂಗಾ ಮಠ ಇಂದು ಎಲ್ಲರಲ್ಲಿ ಪ್ರೀತಿ, ವಿಶ್ವಾಸ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಿದೆ. ೧೨ ನೇ ಶತಮಾನದ ಶರಣರ ಕಾಯಕ, ದಾಸೋಹ ಪ್ರಸಾದ ತತ್ವ ಸಿದ್ಧಾಂತ, ಸಮಾನತೆ ಸಂಸ್ಕೃತಿ, ಭಕ್ತ ಪರಂಪರೆಯನ್ನು … Continued

ಸಿ.ಎಂ.ಇಬ್ರಾಹಿಂ ಜೆಡಿಎಸ್‌ ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಸುವಂತಿಲ್ಲ : ಕೋರ್ಟ್‌ ಆದೇಶ

ಬೆಂಗಳೂರು: ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಮುಖಂಡ ಸಿ.ಎಂ.ಇಬ್ರಾಹಿಂ ಅವರಿಗೆ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ನ್ಯಾಯಾಲಯ ಸೂಚನೆ ನೀಡಿದೆ. ಪಕ್ಷದ ಚಿಹ್ನೆ ಬಳಸದಂತೆ ಸಿ.ಎಂ. ಇಬ್ರಾಹಿಂ ಅವರಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. … Continued

ಟೆನಿಸ್‌ ತಾರೆ ಸಾನಿಯಾ ಮಿರ್ಜಾ ಜೊತೆ ವಿಚ್ಛೇದನದ ವದಂತಿಗಳ ನಡುವೆಯೇ ಪಾಕಿಸ್ತಾನಿ ನಟಿಯನ್ನು ವಿವಾಹವಾದ ಶೋಯೆಬ್ ಮಲಿಕ್..!

ಭಾರತದ ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರ ಜೊತೆ ವಿಚ್ಛೇದನದ ವದಂತಿಗಳ ಮಧ್ಯೆಯೇ ಪಾಕಿಸ್ತಾನದ ಕ್ರಿಕೆಟ್ ತಾರೆ ಶೋಯೆಬ್ ಮಲಿಕ್ ಜನಪ್ರಿಯ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾಗಿದ್ದಾರೆ. ಶನಿವಾರ, ಜನವರಿ 20 ರಂದು ನಡೆದ ತಮ್ಮ ವಿವಾಹ ಸಮಾರಂಭದ ಫೋಟೋಗಳನ್ನು ಶೋಯೆಬ್ ಮಲಿಕ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಶೋಯೆಬ್ ಮಲಿಕ್ ಮತ್ತು … Continued

ಕೆಲವೇ ಸೆಕೆಂಡುಗಳಲ್ಲಿ ಕುಸಿದುಬಿದ್ದ ಐದು ಅಂತಸ್ತಿನ ಬೃಹತ್‌ ಕಟ್ಟಡ | ವೀಕ್ಷಿಸಿ

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಐದು ಅಂತಸ್ತಿನ ಕಟ್ಟಡವೊಂದು ಕುಸಿದಿದೆ, ಆದರೆ ಅದೃಷ್ಟವಶಾತ್, ಘಟನೆಯ ಮೊದಲು ನಿವಾಸಿಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಿದ್ದರಿಂದ ಯಾರೂ ಗಾಯಗೊಂಡಿಲ್ಲ ಎಂದು ವರದಿಯಾಗಿದೆ. ಹಿಮಾಚಲದ ಧಾಮಿ ಪ್ರದೇಶದ ಘಂಡಾಲ್ ಗ್ರಾಮದಲ್ಲಿ ಈ ಐದು ಅಂತಸ್ತಿನ ಕಟ್ಟಡ ಕುಸಿದು ರಸ್ತೆ ಹಾಳಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದು ಕಟ್ಟಡ ಕುಸಿತದ ಕ್ಷಣವನ್ನು … Continued