ಮುಖ ಸಂಪೂರ್ಣವಾಗಿ ಕಂಡ ರಾಮಲಲ್ಲಾ ವಿಗ್ರಹದ ಫೋಟೋ ನಿಜವಾದುದಲ್ಲ : ರಾಮ ಮಂದಿರದ ಮುಖ್ಯ ಅರ್ಚಕರ ಸ್ಪಷ್ಟನೆ

ನವದೆಹಲಿ: ಶುಕ್ರವಾರ ವೈರಲ್‌ ಆಗಿರುವ ರಾಮಮಂದಿರ ಗರ್ಭಗುಡಿಯಲ್ಲಿನ ರಾಮಲಲ್ಲಾ ವಿಗ್ರಹದ ಫೋಟೋ ನಿಜವಾದುದಲ್ಲ. ಅಯೋಧ್ಯೆ ರಾಮ ಮಂದಿರದ ರಾಮಲಲ್ಲಾ ವಿಗ್ರಹದ ಚಿತ್ರಗಳು ಹೇಗೆ ಸೋರಿಕೆಯಾದವು ಎಂಬುದರ ಬಗ್ಗೆ ತನಿಖೆ ನಡೆಸಬೇಕು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಒತ್ತಾಯಿಸಿದ್ದಾರೆ. ಗುರುವಾರ ಬಹಿರಂಗಗೊಂಡಿದ್ದ ಚಿತ್ರದಲ್ಲಿ ವಿಗ್ರಹದ ಕಣ್ಣುಗಳಿಗೆ ಹಳದಿ … Continued

ರಾಮ ಮಂದಿರ ಉದ್ಘಾಟನೆಗೂ ಮುನ್ನ ರಾಮೇಶ್ವರಂನ ಪವಿತ್ರ ಅಗ್ನಿ ತೀರ್ಥ’ ಸಮುದ್ರದಲ್ಲಿ ಮುಳುಗೆದ್ದ ಪ್ರಧಾನಿ ಮೋದಿ | ವೀಕ್ಷಿಸಿ

ರಾಮೇಶ್ವರಂ: ‘ಅಗ್ನಿತೀರ್ಥ’ ಕಡಲತೀರದಲ್ಲಿ ಪುಣ್ಯಸ್ನಾನ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇಲ್ಲಿನ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ರುದ್ರಾಕ್ಷಿ ಮಾಲೆ ಧರಿಸಿದ ಪ್ರಧಾನಿ ಮೋದಿ ತಮಿಳುನಾಡಿನ ಪುರಾತನ ಶಿವ ದೇವಾಲಯವಾದ ರಾಮನಾಥಸ್ವಾಮಿ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅವರಿಗೆ ಪುರೋಹಿತರಿಂದ ಸಾಂಪ್ರದಾಯಿಕ ಗೌರವಗಳನ್ನು ನೀಡಲಾಯಿತು. ದೇಗುಲದಲ್ಲಿ ನಡೆಯುತ್ತಿದ್ದ ‘ಭಜನೆ’ಯಲ್ಲೂ ಪಾಲ್ಗೊಂಡರು. ತಮಿಳುನಾಡಿನ ರಾಮನಾಥಪುರಂ … Continued

ಮಾಧ್ಯಮ, ಸೋಶಿಯಲ್ ಮೀಡಿಯಾಗಳಲ್ಲಿ ರಾಮ ಮಂದಿರದ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಬೇಡಿ : ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಸಲಹೆ

ನವದೆಹಲಿ: ಮುಂಬರುವ ರಾಮಮಂದಿರ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸುಳ್ಳು ಅಥವಾ ನಕಲಿ ವಿಷಯವನ್ನು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರವು ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಕಟ್ಟುನಿಟ್ಟಿನ ಸಲಹೆ  ನೀಡಿದೆ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಕೆಲವು ಪರಿಶೀಲಿಸದ, ಪ್ರಚೋದನಕಾರಿ ಮತ್ತು ನಕಲಿ ಸಂದೇಶಗಳನ್ನು ಪ್ರಸಾರ ಮಾಡುವ ಸಾಧ್ಯತೆ ಬಗ್ಗೆ ಒತ್ತಿ ಹೇಳಿದ್ದು, ಇದು ಸಾಮಾಜಿಕ ಮಾಧ್ಯಮಗಳಲ್ಲಿ, … Continued

ವೀಡಿಯೊ.. | ಪ್ರತಿಷ್ಠಾಪನೆ ಸಮಾರಂಭದ ಮೊದಲು ಅಲಂಕಾರಗೊಳ್ಳುತ್ತಿರುವ ಅಯೋಧ್ಯೆ ರಾಮ ಮಂದಿರ ಹೇಗೆ ಕಾಣುತ್ತಿದೆ ನೋಡಿ

ನವದೆಹಲಿ : ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಗೆ ಇನ್ನೆರಡು ದಿನಗಳು ಬಾಕಿ ಉಳಿದಿದ್ದು, ಭಗವಾನ್ ರಾಮಲಲ್ಲಾ ಅವರ ಭವ್ಯವಾದ ಮಂದಿರವು ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಸಜ್ಜಾಗುತ್ತಿದೆ. ಡಿಡಿ ನ್ಯೂಸ್‌ ನಿಂದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊವು ಭವ್ಯವಾದ ದೇವಾಲಯದ ಒಳಗಿನ ವಿಶೇಷ ನೋಟವನ್ನು ನೀಡುತ್ತದೆ. ಅದರ ಕಂಬಗಳು ಮತ್ತು ಸ್ತಂಭಗಳನ್ನು ಹೂವಿನ ಹೂಗುಚ್ಛಗಳಿಂದ ಅಲಂಕರಿಸಲಾಗಿರುವುದರಿಂದ ಬೆಳಕಿನಿಂದ … Continued

ಅಂಕೋಲಾ : ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇಬ್ಬರು ಪದ್ಮಶ್ರೀ ಪುರಸ್ಕೃತರಿಗೆ ಆಹ್ವಾನ

ಕಾರವಾರ: ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22 ರಂದು ನಡೆಯಲಿರುವ ‘ಪ್ರಾಣ ಪ್ರತಿಷ್ಠೆ’ ಸಮಾರಂಭಕ್ಕೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಇಬ್ಬರು ಪದ್ಮಶ್ರೀ ಪುರಸ್ಕೃತರನ್ನು ವಿಶೇಷವಾಗಿ ಆಹ್ವಾನಿಸಲಾಗಿದೆ. ಅಂಕೋಲಾದ ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ (Sukri Bommagowda) ಹಾಗೂ ತುಳಸಿ ಗೌಡ (Tulasi Gowda) ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಪ್ರಾಂತ್ಯ ಪ್ರಚಾರಕರು ಆಹ್ವಾನ ಪತ್ರಿಕೆ … Continued

ರಾಮಲಲ್ಲಾ ಮೂರ್ತಿ ಕೆತ್ತನೆಗೆ ಕಪ್ಪುಶಿಲೆ ಸಿಕ್ಕ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ; ಜನವರಿ 22ಕ್ಕೆ ಭೂಮಿಪೂಜೆ

ಮೈಸೂರು : ಅಯೋಧ್ಯೆಯ ಬಾಲ ರಾಮ(ರಾಮ ಲಲ್ಲಾ)ನ ಮೂರ್ತಿ ಕೆತ್ತನೆಗೆ ಕಪ್ಪು ಶಿಲೆ ಸಿಕ್ಕ ಜಾಗದಲ್ಲೇ ಶ್ರೀರಾಮನ ಮಂದಿರ ನಿರ್ಮಾಣ ಮಾಡಲಾಗುತ್ತದೆ ಎಂದು ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನವರಿ 22 ರಂದು ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಾಗುತ್ತದೆ. ಎಲ್ಲರ ಬಳಿ ದೇಣಿಗೆ ಸಂಗ್ರಹ ಮಾಡಿ ಮೈಸೂರು … Continued

ಬಾಬರ್ ರಸ್ತೆ ನಾಮಫಲಕ ಅಳಿಸಿ ಅಯೋಧ್ಯಾ ಮಾರ್ಗ ಎಂಬ ಪೋಸ್ಟರ್ ಅಂಟಿಸಿದ ಹಿಂದೂ ಸೇನಾ ಕಾರ್ಯಕರ್ತರು…

ನವದೆಹಲಿ : ದೆಹಲಿಯಲ್ಲಿರುವ ಬಾಬರ್ ರಸ್ತೆಯ ನಾಮಫಲಕಗಳ ಮೇಲೆ ‘ಅಯೋಧ್ಯಾ ಮಾರ್ಗ’ ಎಂಬ ಪೋಸ್ಟರ್‌ಗಳನ್ನು ಹಿಂದೂ ಸೇನಾ ಕಾರ್ಯಕರ್ತರು ಅಂಟಿಸಿರುವುದು ಬೆಳಕಿಗೆ ಬಂದಿದೆ. ಬಾಬರ್ ರಸ್ತೆಯ ಹೆಸರನ್ನು ಅಯೋಧ್ಯಾ ರಸ್ತೆ ಎಂದು ಬದಲಾಯಿಸುವಂತೆ ಹಿಂದೂ ಸೇನಾ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಈಗ ಬಾಬರ್ ರಸ್ತೆಯ ಫಲಕದ ಮೇಲೆ ಅಯೋಧ್ಯಾ ಮಾರ್ಗ ಎಂದು ಪೋಸ್ಟರ್ ಅನ್ನು ಅಂಟಿಸಿದ್ದಾರೆ. ಈ … Continued

ಕಂಪನಿಯ ಬೆಳ್ಳಿ ಹಬ್ಬದ ಸಮಾರಂಭದಲ್ಲಿ ವೇದಿಕೆ ಮೇಲೆಯೇ ಅವಘಡ: ಸಂಸ್ಥೆಯ ‘ಸಿಇಒ’ ಸಾವು

ಹೈದರಾಬಾದ್ : ಕಂಪನಿಯ ರಜತ ಮಹೋತ್ಸವದ ಸಂದರ್ಭದಲ್ಲಿ ಸಮಾರಂಭದ ವೇಳೆ ವೇದಿಕೆಯಲ್ಲಿ ನಡೆದ ದುರಂತದಲ್ಲಿಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಸಿಇಓ ಹಾಗೂ ಬಹುರಾಷ್ಟ್ರೀಯ ಸಾಫ್ಟ್ ವೇರ್ ಕಂಪನಿಯ ಸಂಸ್ಥಾಪಕ ಮೃತಪಟ್ಟಿದ್ದಾರೆ. ಮತ್ತೊಬ್ಬ ಅಧಿಕಾರಿ ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಅಮೆರಿಕದ ಇಲಿನೊಯಿಸ್ ಮೂಲದ ಸಿಇಓ ಸಂಜಯ ಶಾ (56) ಮೃತಪಟ್ಟಿದ್ದಾರೆ. ಘಟನೆಯಲ್ಲಿ ತೀವ್ರವಾಗಿ … Continued

ರಾಮಮಂದಿರ ಕಾರ್ಯಕ್ರಮದ ಬಗ್ಗೆ ಪಕ್ಷದ ನಿಲುವಿನಿಂದ ಅಸಮಾಧಾನ : ಗುಜರಾತ್ ಕಾಂಗ್ರೆಸ್ ಶಾಸಕ ರಾಜೀನಾಮೆ

ಗಾಂಧಿನಗರ: ಗುಜರಾತ್‌ನ ಹಿರಿಯ ಕಾಂಗ್ರೆಸ್ ಶಾಸಕ ಸಿ.ಜೆ. ಚಾವ್ಡಾ ಅವರು ಅಯೋಧ್ಯಾ ರಾಮಮಂದಿರದ ಬಗ್ಗೆ ಪಕ್ಷದ ಧೋರಣೆಯಿಂದ ಅಸಮಾಧಾನಗೊಂಡಿದ್ದು, ಶುಕ್ರವಾರ ತಮ್ಮ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿಜಪುರ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಬೆಳಗ್ಗೆ ಗಾಂಧಿನಗರದಲ್ಲಿ ವಿಧಾನಸಭೆ ಸ್ಪೀಕರ್ ಶಂಕರ ಚೌಧರಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ರಾಜ್ಯ ವಿಧಾನಸಭೆಯ ಅಧಿಕಾರಿ … Continued

ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ವಂಚನೆ ಆರೋಪ : ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ತಮ್ಮ ವಿರುದ್ಧದ ಬ್ಯಾಂಕ್‌ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ದೂರು ಮತ್ತು ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ಗೆ … Continued