ವೈಮಾನಿಕ ದಾಳಿಯ ನಂತರ ಇರಾನ್ ರಾಯಭಾರಿಯನ್ನು ಉಚ್ಚಾಟಿಸಿದ ಪಾಕಿಸ್ತಾನ : ಟೆಹ್ರಾನ್‌ನಿಂದ ಪಾಕಿಸ್ತಾನದ ರಾಯಭಾರಿ ವಾಪಸ್

ನವದೆಹಲಿ: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಮಂಗಳವಾರ ಇರಾನ್ ವೈಮಾನಿಕ ದಾಳಿ ನಡೆಸಿದ ನಂತರ ಎರಡು ದೇಶಗಳ ನಡುವೆ ಉದ್ವಿಗ್ನತೆ ಉಲ್ಬಣಗೊಂಡಿದ್ದು, ಪಾಕಿಸ್ತಾನವು ಬುಧವಾರ ಇರಾನ್‌ ರಾಜತಾಂತ್ರಿಕರನ್ನು ತನ್ನ ದೇಶದಿಂದ ಹೊರಹಾಕಿದೆ ಹಾಗೂ ತನ್ನ ಉನ್ನತ ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಂಡಿದೆ. ಅಲ್ಲದೆ, ಎಲ್ಲ ಉನ್ನತ ಮಟ್ಟದ ಭೇಟಿಗಳನ್ನು ಸ್ಥಗಿತಗೊಳಿಸಿದೆ. ವಿದೇಶಾಂಗ ಕಚೇರಿಯ ವಕ್ತಾರರು ಮಾಧ್ಯಮವದರಿಗೆ ಮಾತನಾಡಿ, ಇಸ್ಲಾಮಾಬಾದ್ ಇರಾನ್‌ನಿಂದ … Continued

ಶ್ರೀರಂಗಪಟ್ಟಣದ ಐತಿಹಾಸಿಕ ಮಸೀದಿಯಲ್ಲಿ ಮದರಸಾ ನಡೆಸುವ ಆರೋಪ: ಆಕ್ಷೇಪಣೆ ಸಲ್ಲಿಸಲು ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಶ್ರೀರಂಗಪಟ್ಟಣದ ಪ್ರಸಿದ್ಧ ಜುಮ್ಮಾ ಮಸೀದಿಯು ಕೇಂದ್ರೀಯ ಸಂರಕ್ಷಿತ ಸ್ಮಾರಕವಾಗಿದ್ದು, ಅಲ್ಲಿ ಅನಧಿಕೃತ ಮದರಸಾ ನಡೆಸಲಾಗುತ್ತಿದ್ದು, ಅದನ್ನು ಮುಚ್ಚಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಬುಧವಾರ ಕೇಂದ್ರ ಸಂಸ್ಕೃತಿ ಇಲಾಖೆ, ಭಾರತೀಯ ಪುರಾತತ್ವ ಇಲಾಖೆಯ ಮಹಾನಿರ್ದೇಶಕರು ಸೇರಿ ಏಳು ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೊಸ … Continued

ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ. ಅಂತಿಮ ವೇಳಾಪಟ್ಟಿ ಪ್ರಕಟ ಪ್ರಕಾರ, ಮಾರ್ಚ್ 25ರಿಂದ ಏಪ್ರಿಲ್ 6ರ ವರೆಗೆ ಎಸ್ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ ಹಾಗೂ ಮಾರ್ಚ್ 1ರಿಂದ ಮಾರ್ಚ್ 22ರ ವರೆಗೆ ದ್ವಿತೀಯ … Continued

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಕಲ್ಲಡ್ಕ ಪ್ರಭಾಕರ್‌ ಭಟ್‌ ಗೆ ಜಾಮೀನು ಮಂಜೂರು

ಮಂಡ್ಯ: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಿಸಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಅವರಿಗೆ ಶ್ರೀರಂಗಪಟ್ಟಣ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ. ಪ್ರಭಾಕರ ಭಟ್‌ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಜನವರಿ 10ರಂದು ಕಾಯ್ದಿರಿಸಿದ್ದ ಆದೇಶವನ್ನು ಶ್ರೀರಂಗಪಟ್ಟಣದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ … Continued

ಕ್ರಿಕೆಟಿಗ ಧೋನಿ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ ಮಾಜಿ ಪಾಲುದಾರ ಮಿಹಿರ್ ದಿವಾಕರ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಅವರ ಮಾಜಿ ವ್ಯವಹಾರ ಪಾಲುದಾರರಾದ ಮಿಹಿರ್ ದಿವಾಕರ್ ಮತ್ತು ದಿವಾಕರ ಪತ್ನಿ ಸೌಮ್ಯ ದಾಸ್‌ ಅವರು ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈ ಪ್ರಕರಣವನ್ನು ಜನವರಿ 18ರಂದು ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಅವರ ಪೀಠ ವಿಚಾರಣೆ ನಡೆಸಲಿದೆ. 2017 … Continued

ತೆಲಂಗಾಣದಲ್ಲಿ ಅದಾನಿ ಸಮೂಹದಿಂದ 12400 ಕೋಟಿ ರೂ. ಹೂಡಿಕೆ

ಹೈದರಾಬಾದ್: ತೆಲಂಗಾಣದಲ್ಲಿ 12,400 ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆಗಾಗಿ ಅದಾನಿ ಸಮೂಹ ಮತ್ತು ತೆಲಂಗಾಣ ಸರ್ಕಾರ ಬುಧವಾರ ನಾಲ್ಕು ತಿಳುವಳಿಕೆ ಪತ್ರಗಳಿಗೆ (ಎಂಒಯು) ಸಹಿ ಹಾಕಿವೆ. ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ 2024 ರಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಮತ್ತು ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಅವರ ಸಮ್ಮುಖದಲ್ಲಿ ಎಂಒಯುಗಳಿಗೆ … Continued

ಕಾಂಗ್ರೆಸ್ಸಿನ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಅಖಿಲೇಶ ಯಾದವ್ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ

ಲಕ್ನೋ : ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ ಜೋಡೋ ನ್ಯಾಯ ಯಾತ್ರೆಗೆ ಹೋಗುವ ಸಾಧ್ಯತೆಯಿಲ್ಲ ಎಂದು ಬುಧವಾರ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಯಾದವ್ ಅವರನ್ನು ಪ್ರಶ್ನಿಸಿದಾಗ, ‘ಕಾಂಗ್ರೆಸ್ ಆಗಲಿ, ಬಿಜೆಪಿಯಾಗಲಿ ನಮ್ಮನ್ನು ತಮ್ಮ ಕಾರ್ಯಕ್ರಮಗಳಿಗೆ ಆಹ್ವಾನಿಸುವುದಿಲ್ಲ ಎಂದು ಹೇಳಿದ್ದಾರೆ. ಇಲ್ಲಿನ ಪಕ್ಷದ … Continued

ವೀಡಿಯೊ..| ಪ್ರಧಾನಿ ಮೋದಿಯವರ ತವರೂರಾದ ವಡ್ನಗರದಲ್ಲಿ 2800 ವರ್ಷಗಳಷ್ಟು ಪುರಾತನವಾದ ಮಾನವ ವಸಾಹತು ಪತ್ತೆ

ಪ್ರಧಾನಿ ನರೇಂದ್ರ ಮೋದಿಯವರ ತವರು ಗ್ರಾಮವಾದ ಗುಜರಾತಿನ ವಡ್ನಗರದಲ್ಲಿರುವ 2,800 ವರ್ಷಗಳಷ್ಟು ಹಳೆಯದಾದ ಮಾನವ ವಸಾಹತು ಅವಶೇಷಗಳು ಪತ್ತೆಯಾಗಿವೆ. ಐಐಟಿ ಖರಗಪುರ, ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್‌ಐ), ಫಿಸಿಕಲ್ ರಿಸರ್ಚ್ ಲ್ಯಾಬೊರೇಟರಿ (ಪಿಆರ್‌ಎಲ್), ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಮತ್ತು ಡೆಕ್ಕನ್ ಕಾಲೇಜು ನಡೆಸಿದ ಸಂಶೋಧನೆಯಲ್ಲಿ ವಡ್ನಗರದಲ್ಲಿ ಕ್ರಿಸ್ತಪೂರ್ವ 800ರಷ್ಟು ಹಳೆಯದಾದ ಮಾನವ ವಸಾಹತುಗಳ ಪುರಾವೆಗಳು … Continued

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆದ್ರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ: ಕಾಂಗ್ರೆಸ್‌ನಲ್ಲಿ ಚರ್ಚೆಗೆ ಕಾರಣವಾದ ಯತೀಂದ್ರ ಹೇಳಿಕೆ

ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಎಂದು ಮಾಜಿ ಶಾಸಕ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿರುವುದು ಈಗ ಪುನಃ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಅಣ್ಣೇಚಾಕನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ … Continued

ರಾಜತಾಂತ್ರಿಕ ಗದ್ದಲದ ನಂತರ ಕೆನಡಾಕ್ಕೆ ತೆರಳುವ ಭಾರತದ ವಿದ್ಯಾರ್ಥಿಗಳ ಸಂಖ್ಯೆ ತೀವ್ರ ಇಳಿಕೆ : 86%ರಷ್ಟು ಕುಸಿತ ಎಂದ ಸಚಿವರು

ಎರಡು ದೇಶಗಳ ನಡುವಿನ ರಾಜತಾಂತ್ರಿಕ ಗದ್ದಲದ ನಂತರ 2023 ರಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಕೆನಡಾ ನೀಡಿದ ಅಧ್ಯಯನ ಪರವಾನಗಿಗಳ ಸಂಖ್ಯೆಯಲ್ಲಿ ತೀವ್ರ ಕುಸಿತ ಕಂಡಿದೆ ಎಂದು ಕೆನಡಾದ ಉನ್ನತ ಅಧಿಕಾರಿಗಳು ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದೆ. ಭಾರತೀಯರಿಗೆ ಅಧ್ಯಯನ ಪರವಾನಗಿಗಳ ಸಂಖ್ಯೆಯು ಸನಿಹದಲ್ಲಿ ಮರುಕಳಿಸುವ ಸಾಧ್ಯತೆಯಿಲ್ಲ ಎಂದು ತಾವು ನಂಬಿದ್ದಾಗಿ ಎಂದು ಉನ್ನತ ಅಧಿಕಾರಿ ಸಂದರ್ಶನದಲ್ಲಿ … Continued