ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಶರದ್‌ ಪವಾರ್‌ ನಿರ್ಧಾರ: ಶೀಘ್ರದಲ್ಲೇ “ದರ್ಶನʼ ಪಡೆಯುವೆ ಎಂದ ಎನ್‌ಸಿಪಿ ನಾಯಕ

ನವದೆಹಲಿ : ಅಯೋಧ್ಯೆ ರಾಮಮಂದಿರದಲ್ಲಿ ಜನವರಿ 22 ರಂದು ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಆಹ್ವಾನ ನೀಡಿದ್ದಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿರುವ ಅವರು, ದೊಡ್ಡ ಕಾರ್ಯಕ್ರಮಕ್ಕಾಗಿ ಅಯೋಧ್ಯೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಹೀಗಾಗಿ ಜನವರಿ 22 ರ ನಂತರ ದರ್ಶನ ಪಡೆಯಲು ಸುಲಭವಾಗುವುದರಿಂದ ಶೀಘ್ರದಲ್ಲೇ ಅಯೋಧ್ಯೆಗೆ ಭೇಟಿ … Continued

ಜಾಗತಿಕ ಮಿಲಿಟರಿ ಸಾಮರ್ಥ್ಯದ 2024ರ ಶ್ರೇಯಾಂಕ ಪ್ರಕಟ : ಅಮೆರಿಕ ಅತ್ಯಂತ ಶಕ್ತಿಶಾಲಿ ಮಿಲಿಟರಿ ಶಕ್ತಿ, 2ನೇ ಸ್ಥಾನದಲ್ಲಿ ರಷ್ಯಾ, ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತೆ …?

ಅತ್ಯಂತ ಶಕ್ತಿಶಾಲಿ ಮಿಲಿಟರಿ ದೇಶಗಳು ಯಾವುದು ಎಂಬ ಬಗ್ಗೆ 2024ರ ಜಾಗತಿಕ ಫೈರ್‌ಪವರ್ ಶ್ರೇಯಾಂಕಗಳು ಪ್ರಕಟವಾಗಿದ್ದು, ಅಮೆರಿಕವು ಜಗತ್ತಿನ ಅತ್ಯಂತ ಶಕ್ತಿಶಾಲಿ ಮಿಲಿಟರಿ ಎಂಬ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಜಿಎಫ್‌ಪಿ (GFP) ಶ್ರೇಯಾಂಕಗಳು ದೇಶದ ಪವರ್‌ಇಂಡೆಕ್ಸ್ (PwrIndx) ಸ್ಕೋರ್ ಅನ್ನು ನಿರ್ಧರಿಸಲು 60 ಕ್ಕೂ ಹೆಚ್ಚು ವೈಯಕ್ತಿಕ ಅಂಶಗಳನ್ನು ಇತರ ರಾಷ್ಟ್ರಗಳೊಂದಿಗೆ ಹೋಲಿಸಿ ಪ್ರತಿ ರಾಷ್ಟ್ರಗಳ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ : ಆರೋಪಿ ವಶಕ್ಕೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ಮಾತನಾಡಿವ ಅದರ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಬಗ್ಗೆ ಯುವಕನ ವಿರುದ್ಧ ಈ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನವರಾದ, ಸುರತ್ಕಲ್‌ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ … Continued

ಜನವರಿ 19ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ

ಬೆಂಗಳೂರು: ಪ್ರಧಾನಿ ಮೋದಿ ಅವರು ಜನವರಿ 19ರಂದು ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ ಬಿಜೆಪಿ ಕಾರ್ಯಕಾರಿಣಿಯನ್ನು ಮುಂದೂಡಲಾಗಿದೆ. ಪ್ರಧಾನಿ ಮೋದಿ ಜನವರಿ 19ರಂದು ರಂದು ರಾಜ್ಯಕ್ಕೆ ಭೇಟಿ ನೀಡಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಪಕ್ಷದ ಕಚೇರಿಯಲ್ಲಿ ಪ್ರಮುಖ ಪದಾಧಿಕಾರಿಗಳ ಜತೆ … Continued

ಅರವಿಂದ್ ಕೇಜ್ರಿವಾಲರನ್ನು ‘ಆರ್‌ಎಸ್‌ಎಸ್ ಕಾ ಚೋಟಾ ರೀಚಾರ್ಜ್’ ಎಂದು ಕರೆದ ಓವೈಸಿ, ತಿರುಗೇಟು ನೀಡಿದ ಎಎಪಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಂಘ ಪರಿವಾರದ ರಾಜಕೀಯವನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು “ಆರ್‌ಎಸ್‌ಎಸ್ ಕಾ ಚೋಟಾ ರೀಚಾರ್ಜ್” ಎಂದು ಕರೆದ ನಂತರ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ದೆಹಲಿಯಲ್ಲಿ ಸುಂದರಕಾಂಡ ಪಠಣ ಕಾರ್ಯಕ್ರಮವನ್ನು … Continued

ವೀಡಿಯೊ…| ರಾಮಮಂದಿರ ಪ್ರಾಣಪ್ರತಿಷ್ಠೆ ಸಮಾರಂಭಕ್ಕೆ ಮುನ್ನ 108 ಅಡಿ ಉದ್ದದ ಅಗರಬತ್ತಿ ಬೆಳಗಿಸಲಾಯ್ತು…ಇದು 45 ದಿನಗಳ ಕಾಲ ಬೆಳಗಲಿದೆ

ಅಯೋಧ್ಯೆ : ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರ ರಾಮನ ಮೂರ್ತಿ ಪ್ರಾಣ ಪ್ರತಿಷ್ಠೆ ಸಮಾರಂಭದ ಪೂರ್ವಭಾವಿಯಾಗಿ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಹಾಂತ ನೃತ್ಯ ಗೋಪಾಲ ದಾಸ್ ಅವರು ಮಂಗಳವಾರ 108 ಅಡಿ ಉದ್ದದ ಅಗರಬತ್ತಿಯನ್ನು ಬೆಳಗಿಸಿದ್ದಾರೆ. “ಜೈ ಶ್ರೀ ರಾಮ” ಎಂದು ಘೋಷಣೆಗಳನ್ನು ಕೂಗುತ್ತಿದ್ದ ಭಾರೀ ಜನಸಮೂಹದ ನಡುವೆ … Continued

ಲೋಕಸಭೆ ಚುನಾವಣೆ: ಮೈಸೂರಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ

ಮೈಸೂರು : ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ” ಎಂದು ರೇಷ್ಮೆ ಮತ್ತು ಪಶು ಸಂಗೋಪನೆ ಖಾತೆ ಸಚಿವ ಕೆ.ವೆಂಕಟೇಶ ಹೇಳಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಯತೀಂದ್ರ ಮೈಸೂರು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಇದನ್ನೇ ಹೇಳಿದ್ದಾರೆ. ಆದರೆ … Continued

ಪ್ರಧಾನಿ ಮೋದಿ ಪದವಿ ವಿವಾದ: ಅರವಿಂದ ಕೇಜ್ರಿವಾಲ್, ಸಂಜಯ ಸಿಂಗ್ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದ ಹೇಳಿಕೆಗಳಿಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಸಂಸದ ಸಂಜಯ್ ಸಿಂಗ್ ವಿರುದ್ಧ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ಈ ವೇಳೆ ಮಧ್ಯಂತರ ಪರಿಹಾರ ಕೋರಿ ಈ ಇಬ್ಬರೂ ಸಲ್ಲಿಸಿರುವ ಮನವಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ನ್ಯಾಯಮೂರ್ತಿಗಳಾದ ಬಿ.ಆರ್‌. … Continued

ಅಯೋಧ್ಯೆ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೂ ಮುನ್ನ ಆಂಧ್ರದ ರಾಮಾಯಣದ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಹಿಂದೂ ಮಹಾಕಾವ್ಯ ರಾಮಾಯಣದಲ್ಲಿ ಮಹತ್ವದ ಸ್ಥಾನ ಪಡೆದಿರುವ ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭೇಟಿ ನೀಡಿದರು. ರಾವಣನಿಂದ ಸೀತಾದೇವಿಯನ್ನು ಅಪಹರಿಸಿದ ನಂತರ ಜಟಾಯು ಸೀತಾದೇವಿಯನ್ನು ಹಿಂಬಾಲಿಸಿದ ಸ್ಥಳ ಲೇಪಾಕ್ಷಿ ಎಂದು ನಂಬಲಾಗಿದೆ. ಸಾಯುತ್ತಿರುವ ಜಟಾಯು, ಸೀತಾ ದೇವಿಯ ಸೆರೆಯಲ್ಲಿರುವ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ತಿಳಿಸಿದ ನಂತರ, ಲೇಪಾಕ್ಷಿಯಲ್ಲಿ … Continued

9 ವರ್ಷಗಳಲ್ಲಿ ಭಾರತದಲ್ಲಿ ಸುಮಾರು 25 ಕೋಟಿ ಜನರು ಬಡತನದಿಂದ ಮುಕ್ತ: ನೀತಿ ಆಯೋಗ

ನವದೆಹಲಿ: ಕಳೆದ 9 ವರ್ಷಗಳಲ್ಲಿ ಬಾರತದಲ್ಲಿ ಸುಮಾರು 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ ಎಂದು ನೀತಿ (NITI) ಆಯೋಗ ಹೇಳಿದೆ. ನೀತಿ ಆಯೋಗದ ವರದಿಯ ಪ್ರಕಾರ, 2013-14ರಲ್ಲಿ ದೇಶದಲ್ಲಿ ಬಹು ಆಯಾಮದ ಬಡತನವು ಶೇಕಡಾ 29.17 ರಷ್ಟಿತ್ತು, ಇದು 2022-23 ರಲ್ಲಿ ಶೇಕಡಾ 11.28 ಕ್ಕೆ ಇಳಿದಿದೆ. 2013-14ರಿಂದ 2022-23ರವರೆಗಿನ 9 ವರ್ಷಗಳ ಅವಧಿಯಲ್ಲಿ … Continued