ಬೊಲೆರೊ ವಾಹನ ಪಲ್ಟಿ: ಮೂವರು ಸಾವು

ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಸಮೀಪದ ಚಿನ್ನಿಕಟ್ಟಿ ಗ್ರಾಮದ ಬಳಿ ಬೊಲೆರೊ ಪಲ್ಟಿಯಾಗಿ ಮೂವರು ಮೃತಪಟ್ಟಿದ್ದಾರೆ ಹಾಗೂ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶಿವಮೊಗ್ಗ-ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಚಂದನಕೆರೆ ಗ್ರಾಮದ ಮಂಜುನಾಥ (45), ನಾಗರಾಜ (39) ಶಿವಮೊಗ್ಗ ಆಸ್ಪತ್ರೆಯಲ್ಲಿ … Continued

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧೆ : ಮಾಯಾವತಿ ಘೋಷಣೆ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷವು ಯಾವುದೇ ಮೈತ್ರಿಕೂಟದ ಭಾಗವಾಗುವುದಿಲ್ಲ, ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತ ಅಥವಾ ವಿರೋಧ ಪಕ್ಷದ ಮೈತ್ರಿಕೂಟದ ವಾಗುವುದಿಲ್ಲ ಮತ್ತು ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಪ್ರಕಟಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಬಿಎಸ್‌ಪಿ ಯಾವುದೇ ಮೈತ್ರಿಕೂಟದ ಭಾಗವಾಗುವುದಿಲ್ಲ ಮತ್ತು ಲೋಕಸಭೆ ಚುನಾವಣೆಯಲ್ಲಿ … Continued

ವೀಡಿಯೋ: ವಿಮಾನ ವಿಳಂಬದ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ದೆಹಲಿ-ಗೋವಾ ಇಂಡಿಗೋ ಕ್ಯಾಪ್ಟನ್‌ ಗೆ ಗುದ್ದಿದ ಪ್ರಯಾಣಿಕ

ನವದೆಹಲಿ : ವಿಮಾನ ವಿಳಂಬದ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ವಿಮಾನದ ಪೈಲಟ್‌ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದು, ಹಲ್ಲೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ (6E-2175) ಈ ಘಟನೆ ನಡೆದಿದ್ದು, ಮಂಜಿನಿಂದಾಗಿ ವಿಮಾನ ಹೊರಡುವುದು ಹಲವು ಗಂಟೆಗಳ ಕಾಲ ವಿಳಂಬವಾಗಿತ್ತು. … Continued

ರಾಜ್ಯದ 39 ಸಂಘಟನಾ ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರ ನೇಮಕ ಮಾಡಿದ ಬಿಜೆಪಿ : ಯಾವ ಜಿಲ್ಲೆಗೆ ಯಾರು..? ಪಟ್ಟಿ ಇಲ್ಲಿದೆ..

ಬೆಂಗಳೂರು : ರಾಜ್ಯ ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ರಾಜ್ಯದ ಒಟ್ಟು 39 ಸಂಘಟನಾ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇಮಕ ಮಾಡಿ  ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕರಾಗಿ ಎಸ್. ದತ್ತಾತ್ರಿ ಅವರನ್ನು ನೇಮಕ … Continued

ಮಂದಿರ ನಿರ್ಮಾಣಕ್ಕೆ 20 ರೂ. ದೇಣಿಗೆ ನೀಡಿದ್ದ ಕಸ ಸಂಗ್ರಹಿಸುವ ವೃದ್ಧೆಗೆ ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ…

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಹಲವಾರು ಭಕ್ತರು ತಮ್ಮ ಕೈಲಾದಷ್ಟು ಹಾಗೂ ತಮ್ಮ ಶಕ್ತಿಗೂ ಮೀರಿ ದೇಣಿಗೆಯನ್ನು ನೀಡಿದ್ದಾರೆ. ಇದೇ ರೀತಿ ಛತ್ತೀಸ್‌ಗಢದ ಪ್ರಯಾಗರಾಜ ಎಂದೂ ಕರೆಯಲ್ಪಡುವ ರಾಜೀಂ ಎಂಬಲ್ಲಿ ಕಸ ಸಂಗ್ರಹಿಸುವ ಬಿಹುಲಾ ಬಾಯಿ ಕೂಡ 20 ರೂ. ದೇಣಿಗೆ ನೀಡಿದ್ದಾರೆ. ಇದಕ್ಕಾಗಿ ಅಯೋಧ್ಯೆಯ ರಾಮಮಂದಿರದಲ್ಲಿನ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಅವರನ್ನು … Continued

ಅಯೋಧ್ಯಾ ರಾಮ ಮಂದಿರ ಉದ್ಘಾಟನೆ: 55 ದೇಶಗಳಿಂದ 100ಕ್ಕೂ ಹೆಚ್ಚು ಗಣ್ಯರ ಆಗಮನ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಇದೇ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ 55 ದೇಶಗಳಿಂದ 100ಕ್ಕೂ ಹೆಚ್ಚು ಗಣ್ಯರು ಆಗಮಿಸಲಿದ್ದಾರೆ ಎಂದು ವಿಶ್ವ ಹಿಂದೂ ಫೌಂಡೇಶನ್‌ ಸಂಸ್ಥಾಪಕ ಮತ್ತು ಮುಖ್ಯಸ್ಥ ಸ್ವಾಮಿ ವಿಜ್ಞಾನಂದ ಹೇಳಿದ್ದಾರೆ. 55 ದೇಶಗಳಿಂದ ರಾಯಭಾರಿಗಳು, ಸಚಿವರು, ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಸಾಕ್ಷಿಯಾಗಲಿದ್ದಾರೆ. ಪ್ರಭು ಶ್ರೀ ರಾಮನ … Continued

ಪಾಕಿಸ್ತಾನದ ಲಾಹೋರಿನಲ್ಲಿ ಡಜನ್‌ ಮೊಟ್ಟೆಗಳ ಬೆಲೆ 400 ರೂಪಾಯಿ…! ಒಂದು ಕಿಲೋ ಈರುಳ್ಳಿ ಬೆಲೆ 250 ರೂಪಾಯಿ…!!

ಲಾಹೋರ್: ಪಾಕಿಸ್ತಾನದಲ್ಲಿ ಮೊಟ್ಟೆಗಳ ಬೆಲೆ ಗಗನಕ್ಕೇರಿದೆ. ಪಾಕಿಸ್ತಾನದ ಪಂಜಾಬ್‌ನ ಪ್ರಾಂತೀಯ ರಾಜಧಾನಿಯಾದ ಲಾಹೋರ್‌ನಲ್ಲಿ ಪ್ರತಿ ಡಜನ್‌ ಮೊಟ್ಟೆಗೆ 400 ಪಾಕಿಸ್ತಾನಿ ರೂಪಾಯಿ (ಪಿಕೆಆರ್) ಆಗಿದೆ ಎಂದು ಮಾರುಕಟ್ಟೆ ಮೂಲಗಳನ್ನು ಭಾನುವಾರ ಉಲ್ಲೇಖಿಸಿ ಆರಿ ನ್ಯೂಸ್ ವರದಿ ಮಾಡಿದೆ. ಹೆಚ್ಚಿನ ಸರಕುಗಳ ಬೆಲೆಗಳು ಗಗನಕ್ಕೇರುತ್ತಿದ್ದು, ಸ್ಥಳೀಯ ಆಡಳಿತವು ಸರ್ಕಾರದ ದರ ಪಟ್ಟಿಯನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಪ್ರತಿ ಕೆಜಿ … Continued

ಮಂಗಳೂರು : ಬಂಟ್ವಾಳ ಶಾಸಕರಿಗೆ ಕಾರು ಡಿಕ್ಕಿ

ಮಂಗಳೂರು : ಬಂಟ್ವಾಳ ಶಾಸಕ ರಾಜೇಶ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರು ಡಿಕ್ಕಿಯಾದ ಘಟನೆ ನಡೆದ ಘಟನೆ ಭಾನುವಾರ ಮಧ್ಯಾಹ್ನದ ಸುಮಾರಿಗೆ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಶಾಸಕರು ಅಪಾಯದಿಂದ ಪಾರಾಗಿದ್ದಾರೆ. ಶಾಸಕ ರಾಜೇಶ ನಾಯ್ಕ್ ಅವರು ಸಂಕ್ರಮಣದ ಅಂಗವಾಗಿ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ವಾಪಸ್‌ ತನ್ನ … Continued

ಬೆಂಗಳೂರು : ಚಾಕೊಲೇಟ್‌ ಪ್ಯಾಕ್‌ ನಲ್ಲಿ ಅಡಗಿಸಿಟ್ಟು ವಿಮಾನದಲ್ಲಿ ಒಯ್ಯುತ್ತಿದ್ದ 7.76 ಕೋಟಿ ರೂ. ಮೌಲ್ಯದ ವಜ್ರ ವಶಕ್ಕೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಅಕ್ರಮವಾಗಿ ಒಯ್ಯುತ್ತಿದ್ದ ಸುಮಾರು 7.76 ಕೋಟಿ ರೂ. ಮೌಲ್ಯದ 8,053 ಕ್ಯಾರೆಟ್‌ ತೂಕದ ವಜ್ರಗಳು, 4.62 ಲಕ್ಷ ರೂ. ಮೊತ್ತದ ಅಮೆರಿಕ ಡಾಲರ್‌ ಮತ್ತು ದಿರ್‌ಹಂ ಕರೆನ್ಸಿ ವಶಪಡಿಸಿಕೊಳ್ಳಲಾಗಿದೆ. ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದಲ್ಲಿ ಇಬ್ಬರು ಪ್ರಯಾಣಿಕರನ್ನು ವೈಮಾನಿಕ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದು, ಅವರಿಬ್ಬರು … Continued

ರಾಜತಾಂತ್ರಿಕ ಗದ್ದಲದ ನಡುವೆ ಮಾರ್ಚ್ 15ರೊಳಗೆ ತನ್ನ ಸೈನ್ಯ ಹಿಂತೆಗೆದುಕೊಳ್ಳುವಂತೆ ಭಾರತಕ್ಕೆ ಹೇಳಿದ ಮಾಲ್ಡೀವ್ಸ್

ನವದೆಹಲಿ: ಭಾರತ ಸರ್ಕಾರವು ಮಾರ್ಚ್ 15ಕ್ಕಿಂತ ಮೊದಲು ದ್ವೀಪಸಮೂಹ ರಾಷ್ಟ್ರವಾದ ಮಾಲ್ಡೀವ್ಸ್‌ನಿಂದ ತನ್ನ ಮಿಲಿಟರಿ ಉಪಸ್ಥಿತಿಯನ್ನು ಹಿಂತೆಗೆದುಕೊಳ್ಳುವಂತೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಪ್ರಸ್ತಾಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮಾಲ್ಡೀವ್ಸ್‌ನ ಮೂವರು ಸಚಿವರು ಇತ್ತೀಚಿನ ಅವಹೇಳನಕಾರಿ ಹೇಳಿಕೆಗಳಿಂದ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟಿರುವ ಮಧ್ಯೆ ಭಾರತವು ತನ್ನ ದೇಶದಲ್ಲಿರುವ ಮಿಲಿಟರಿಯನ್ನು … Continued