ಚಂಡೀಗಢ ಮೇಯರ್ ಚುನಾವಣೆ : ಇಂಡಿಯಾ ಮೈತ್ರಿಕೂಟದ ವಿರುದ್ಧ ಬಿಜೆಪಿಗೆ ಜಯ, 8 ಮತಗಳು ಅಸಿಂಧು, ಎಎಪಿ-ಕಾಂಗ್ರೆಸ್ ಕೋರ್ಟ್‌ ಮೊರೆ

ಚಂಡೀಗಢ : ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಹಾಗೂ ಬಿಜೆಪಿಯ ಮೊದಲ ನೇರ ಹಣಾಹಣಿಯಲ್ಲಿ ಮಂಗಳವಾರ ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮನೋಜಕುಮಾರ ಸೋಂಕರ್ ಅವರು ಗೆಲುವು ಸಾಧಿಸಿದ್ದಾರೆ. 8 ಮತಗಳು ಅಸಿಂಧುವಾದ ನಂತರ ಅವರು ಎಎಪಿ-ಕಾಂಗ್ರೆಸ್ ಜಂಟಿ ಅಭ್ಯರ್ಥಿ ಕುಲದೀಪ್ ಸಿಂಗ್ ಅವರನ್ನು ಸೋಲಿಸಿದ್ದಾರೆ. ಪದನಿಮಿತ್ತ ಸದಸ್ಯ ಹಾಗೂ ಸಂಸದೆ ಕಿರಣ್ ಖೇರ್ … Continued

ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ: ಕೇರಳದ 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ

 ಕೊಚ್ಚಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ಹಾಗೂ ಬಿಜೆಪಿ ನಾಯಕ ರಂಜಿತ್‌ ಶ್ರೀನಿವಾಸನ್‌ ಅವರ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಗೆ ಸಂಬಂಧಿಸಿದ 15 ಮಂದಿಗೆ ಕೇರಳದ ಮಾವೇಲಿಕರ ಅಡಿಷನಲ್ ಸೆಷನ್ಸ್ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ಮಂಗಳವಾರ (ಜನವರಿ 30) ತೀರ್ಪು ಪ್ರಕಟಿಸಿದೆ. ಕಳೆದ ವಾರ 15 ಮಂದಿ ತಪ್ಪಿತಸ್ಥರೆಂದು … Continued

ಬಾವಿಗೆ ಹಾರಿದ ತಂಗಿ ರಕ್ಷಿಸಲು ತಾನೂ ಬಾವಿಗೆ ಹಾರಿದ ಅಣ್ಣ; ಇಬ್ಬರೂ ನೀರುಪಾಲು

ಕಲಬುರಗಿ : ಅಣ್ಣ ಹಾಗೂ ತಂಗಿ ಭಾನುವಾರ ರಾತ್ರಿ ಬಾವಿಯಲ್ಲಿ ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಪಟಪಳ್ಳಿಯ ಸಂದೀಪ (23) ಹಾಗೂ ಆತನ ತಂಗಿ ನಂದಿನಿ‌ (19) ಎಂದು ಗುರುತಿಸಲಾಗಿದೆ. ಪಿಯುಸಿ ನಂತರ ಓದನ್ನು ಮಧ್ಯದಲ್ಲೇ ನಿಲ್ಲಿಸಿದ್ದ ನಂದಿಗೆ ಕಾಲೇಜಿಗೆ ಹೋಗು ಎಂದರೂ ಆಕೆ … Continued

ಇದೇ ಮೊದಲ ಬಾರಿಗೆ ಮಾನವ ರೋಗಿಗೆ ʼಮೆದುಳಿನ ಚಿಪ್ʼ ಅಳವಡಿಸಿದ ಎಲೋನ್ ಮಸ್ಕ್ ಕಂಪನಿ: ಇದರ ಕಾರ್ಯನಿರ್ವಹಣೆ ಹೇಗೆ..?

ಎಲೋನ್ ಮಸ್ಕ್ ತಮ್ಮ ನ್ಯೂರಾಲಿಂಕ್ ಕಂಪನಿಯು ಮಾನವ ರೋಗಿಗೆ ʼಮೊದಲ ಮೆದುಳಿನ ಚಿಪ್ʼ ಅನ್ನು ಅಳವಡಿಸಿದೆ ಎಂದು ಪ್ರಕಟಿಸಿದ್ದಾರೆ. ಆರಂಭಿಕ ಫಲಿತಾಂಶಗಳು “ಭರವಸೆದಾಯಕ” ಎಂದು ಅವರು ಹೇಳಿದ್ದಾರೆ. “ಆರಂಭಿಕ ಫಲಿತಾಂಶಗಳು ನ್ಯೂರಾನ್ ಸ್ಪೈಕ್ ಪತ್ತೆಯನ್ನು ತೋರಿಸಿದ್ದು, ಭರವಸೆ ಮೂಡಿಸಿವೆ” ಎಂದು X ನಲ್ಲಿನ ಪೋಸ್ಟ್‌ನಲ್ಲಿ ಮಸ್ಕ್ ಹೇಳಿದ್ದಾರೆ. ದೇಹಕ್ಕೆ ಸಂಕೇತಗಳನ್ನು ಕಳುಹಿಸುವ ಮೆದುಳಿನ ಸಾಮರ್ಥ್ಯವನ್ನು ಅವರು … Continued

ಇ.ಡಿ.ಯಿಂದ ಬಂಧನದ ಭೀತಿ: ಅಜ್ಞಾತ ಸ್ಥಳಕ್ಕೆ ತೆರಳಿದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್

ನವದೆಹಲಿ : ಭೂ ಅಕ್ರಮ ಹಗರಣ ಸಂಬಂಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತಂಡವು ನವದೆಹಲಿಯಲ್ಲಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಮಧ್ಯರಾತ್ರಿ ಅಜ್ಞಾತ ಸ್ಥಳಕ್ಕೆ ತೆರಳಿರುವ ಮುಖ್ಯಮಂತ್ರಿ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ. ಹಲವು ಬಾರಿ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಗೈರಾಗಿದ್ದ ಸೊರೇನ್‌ ಅವರಿಗೆ … Continued

ಮೈಸೂರು: ನಾಮಫಲಕ ಅಳವಡಿಕೆ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಜಗಳ ; ಹಲವು ಮಂದಿಗೆ ಗಾಯ

ಮೈಸೂರು: ಅಂಬೇಡ್ಕರ ನಾಮಫಲಕ (Ambedkar Nameplate) ವಿಚಾರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದ ಘಟನೆ ನಂಜನಗೂಡು (Nanjangud) ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮನೆಗಳ ಮೇಲೆಯೂ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದ್ದು, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಜಖಂ ಆಗಿದೆ. ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು … Continued

ರಾಮಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಭಾಗವಹಿಸಿದ್ದ ಮುಖ್ಯ ಇಮಾಮ್ ವಿರುದ್ಧ ಫತ್ವಾ, ಬೆದರಿಕೆ ಕರೆ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಭಾಗವಹಿಸಿದ ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ ಮುಖ್ಯಸ್ಥ ಡಾ.ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ವಿರುದ್ಧ ಫತ್ವಾ ಹೊರಡಿಸಲಾಗಿದೆ ಎಂದು ವರದಿಯಾಗಿದೆ. ಫತ್ವಾವನ್ನು ಭಾನುವಾರ ಹೊರಡಿಸಲಾಗಿದೆ. ಆದರೆ ರಾಮ ಮಂದಿರದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ದಿನದಿಂದಲೂ ತನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು … Continued

ಕೆರೆಗೋಡು ಹನುಮ ಧ್ವಜ ಪ್ರಕರಣ: ಪಿಡಿಒ ತಲೆದಂಡ

ಮಂಡ್ಯ : ಮಂಡ್ಯದ ಕೆರಗೋಡು (Keragodu) ಗ್ರಾಮದ ಧ್ವಜ ವಿವಾದ ಪ್ರಕರಣದಲ್ಲಿ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯತ ಪಿಡಿಒ ಜೀವನ್‌.ಬಿ.ಎಂ ಅವರನ್ನು ಸರ್ಕಾರ ಅಮಾನತು ಮಾಗಿದೆ. ಐದು ಕಾರಣಗಳನ್ನು ನೀಡಿ ಪಿಡಿಒ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ತನ್ವೀರ್ ಆಸೀಫ್ ಸೇಠ್ ಆದೇಶ … Continued

ಕೆರೆಗೋಡು ಹನುಮ ಧ್ವಜ ಪ್ರಕರಣ: ಪಿಡಿಒ ತಲೆದಂಡ

ಮಂಡ್ಯ : ಮಂಡ್ಯದ ಕೆರಗೋಡು (Keragodu) ಗ್ರಾಮದ ಧ್ವಜ ವಿವಾದ ಪ್ರಕರಣದಲ್ಲಿ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯತ ಪಿಡಿಒ ಜೀವನ್‌.ಬಿ.ಎಂ ಅವರನ್ನು ಸರ್ಕಾರ ಅಮಾನತು ಮಾಗಿದೆ. ಐದು ಕಾರಣಗಳನ್ನು ನೀಡಿ ಪಿಡಿಒ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ತನ್ವೀರ್ ಆಸೀಫ್ ಸೇಠ್ ಆದೇಶ … Continued

ಕೆರಗೋಡು ಹನುಮ ಧ್ವಜ ತೆರವಿಗೆ ಬೃಹತ್‌ ಪ್ರತಿಭಟನೆ : ಮಂಡ್ಯದಲ್ಲಿ ಕಲ್ಲು ತೂರಾಟ, ಲಾಠಿ ಪ್ರಹಾರ

ಮಂಡ್ಯ: ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ವಿವಾದ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟದ ತೀವ್ರತೆ ಜೋರಾಗಿತ್ತು. ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರು, ಹಿಂದೂ ಪರ ಸಂಘಟನೆಗಳ ಸಾವಿರಾರು ಸದಸ್ಯರು ಗ್ರಾಮದಿಂದ ಮಂಡ್ಯದ ಜಿಲ್ಲಾಧಿಕಾರಿ ಕಚೇರಿವರೆಗೆ ಸೋಮವಾರ ಬೃಹತ್‌ ಪಾದಯಾತ್ರೆ … Continued