ಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ನಿಯಂತ್ರಕ ಸೆಬಿ ತನಿಖೆಗೆ ಸುಪ್ರೀಂಕೋರ್ಟ್ ಬೆಂಬಲ, ಎಸ್‌ಐಟಿ ತನಿಖೆಗೆ ನಕಾರ

ನವದೆಹಲಿ: ಹಿಂಡೆನ್‌ಬರ್ಗ್‌ ಸಂಶೋಧನಾ ವರದಿಯಲ್ಲಿ ಅದಾನಿ ಕಂಪನಿ ಸಮೂಹದ ವಿರುದ್ಧದ ವಂಚನೆ ಆರೋಪಗಳ ಬಗ್ಗೆ ವಿಶೇಷ ತನಿಖಾ ತಂಡ ಅಥವಾ ಪರ್ಯಾಯ ಸಂಸ್ಥೆಗಳಿಂದ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಯಾವುದೇ ನಿರ್ದೇಶನ ನೀಡಲು ಅಥವಾ ಭಾರತೀಯ ಷೇರು ನಿಯಂತ್ರಣ ಮಂಡಳಿಯ (ಸೆಬಿ) ಅಧಿಕಾರ ವ್ಯಾಪ್ತಿಯಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ಬುಧವಾರ … Continued

ಜನವರಿ 22 ರಂದು ಗೋಧ್ರಾ ರೀತಿ ಅಪಾಯ ಸಂಭವಿಸುವ ಮಾಹಿತಿ ಇದೆ, ಅಯೋಧ್ಯೆ ಯಾತ್ರಿಗಳಿಗೆ ರಕ್ಷಣೆ ನೀಡಬೇಕು : ಬಿ.ಕೆ. ಹರಿಪ್ರಸಾದ

ಬೆಂಗಳೂರು : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದ್ದು, ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾಯುತ್ತಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಜನವರಿ 22ರಂದು ಅಯೋಧ್ಯೆ(Ayodhya)ಗೆ ತೆರಳುವವರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು. ಗೋಧ್ರಾ (Godhra) … Continued

ಲಕ್ಷಾಂತರ ದಕ್ಷಿಣ ಕೊರಿಯನ್ನರಿಗೆ ಅಯೋಧ್ಯೆ ʼಮಾತೃಭೂಮಿʼ : ಪ್ರತಿವರ್ಷ ಸಾವಿರಾರು ಜನ ಅಯೋಧ್ಯೆಗೆ ಭೇಟಿ ನೀಡ್ತಾರೆ, ಯಾಕೆಂದರೆ….

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜನವರಿ 22ರಂದು ಪ್ರಧಾನಿ ಮೋದಿ ಅವರು ರಾಮ ಮಂದಿರವನ್ನು ಉದ್ಘಾಟಿಸಲಿದ್ದು, ನಂತರದಲ್ಲಿ ಸಾರ್ವಜನಿಕರಿಗೆ ರಾಮ ದರ್ಶನಕ್ಕೆ ದೇಗುಲ ತೆರೆಯಲಿದೆ. ಭಗವಾನ್ ಶ್ರೀರಾಮನ ನಗರವಾದ ಅಯೋಧ್ಯೆಗೆ ಸಂಬಂಧಿಸಿದ ಅನೇಕ ಕಥೆಗಳಿವೆ. ಅಯೋಧ್ಯೆ ಹಾಗೂ ವಿದೇಶಗಳ ನಡುವಿನ ಸಂಬಂಧದ ಬಗ್ಗೆ ಬಗ್ಗೆ ಅನೇಕ ಆಸಕ್ತಿದಾಯಕ ಕಥೆಗಳಿವೆ. … Continued

ಬೆಳಗಾವಿ : ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ಮನೆ ಮಾಲೀಕ…!

ಬೆಳಗಾವಿ : ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಹೂವು ಕಿತ್ತಿದ್ದಾರೆ ಎಂಬ ಕಾರಣಕ್ಕೆ ಸಹಾಯಕಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಅವರ ಮೂಗನ್ನು ಕತ್ತರಿಸಿದ ಘಟನೆ ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ (50) ಎಂಬವರ ಮೇಲೆ ಹಲ್ಲೆ ನಡೆಸಿ ಮೂಗು ಕತ್ತರಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ … Continued

ಬಸ್ -ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ: 12 ಮಂದಿ ಸಾವು, 27 ಮಂದಿಗೆ ಗಾಯ

ಗೋಲಾಘಾಟ್: ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಪ್ರಯಾಣಿಕರ ಬಸ್ ಮತ್ತು ಟ್ರಕ್ ಡಿಕ್ಕಿ ಹೊಡೆದುಕೊಂಡ ನಂತರ ಐವರು ಮಹಿಳೆಯರು ಮತ್ತು ಅಪ್ರಾಪ್ತ ಬಾಲಕ ಸೇರಿದಂತೆ ಕನಿಷ್ಠ 12 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 37ರ ದೇರ್ಗಾಂವ್‌ನಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸುಮಾರು 45 … Continued

ಅಯೋಧ್ಯೆ ರಾಮಲಲ್ಲಾ ಮೂರ್ತಿಯ ಆಯ್ಕೆ ಕುರಿತು ಇನ್ನೂ ಅಂತಿಮ ನಿರ್ಧಾರವಾಗಿಲ್ಲ: ದೇವಾಲಯದ ಟ್ರಸ್ಟ್

ಅಯೋಧ್ಯೆ : ಜನವರಿ 22ರಂದು ಅಯೋಧ್ಯೆ ರಾಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ರಾಮಲಲ್ಲಾ ಮೂರ್ತಿಯ ಆಯ್ಕೆ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ರಾಮಮಂದಿರ ಟ್ರಸ್ಟ್‌ ಪದಾಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಸೋಮವಾರ, ಬಿಜೆಪಿ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ. ಸಂಸದ ಪ್ರತಾಪ ಸಿಂಹ ಸೇರಿದಂತೆ ಅನೇಕರು ಮೈಸೂರು ಶಿಲ್ಪಿ ಅರುಣ ಯೋಗಿರಾಜ ಅವರು ಕೆತ್ತಿದ … Continued

ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರು, ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಪಡೆಯಬಹುದು

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಜೆನ್-1 ಉಪ ತಳಿ ಪ್ರಕರಣಗಳಲ್ಲಿ ಹೆಚ್ಚಳವಾದ ಹಿನ್ನೆಲೆಯಲ್ಲಿ ಜನವರಿ 3 ರಿಂದ 60 ವರ್ಷ ಮೇಲ್ಪಟ್ಟವರು ಹಾಗೂ ದೀರ್ಘವ್ಯಾಧಿ (ಕೊಮೊರ್ಬಿಡಿಟಿ) ಬಳಲುತ್ತಿರುವವರು ಜಿಲ್ಲಾ ಆಸ್ವತ್ರೆಗಳಲ್ಲಿ ಲಸಿಕೆ ಪಡೆದುಕೊಳ್ಳಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದ್ದಾರೆ. ಆದರೆ, ಜೆನ್-1 ಉಪ ತಳಿ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ, ಆದರೆ ವೈರಸ್ … Continued

ಮಾತುಕತೆಗಳ ನಂತರವೇ ಹಿಟ್-ಅಂಡ್-ರನ್ ಕಾನೂನು ಜಾರಿಗೆ ನಿರ್ಧಾರ : ದೇಶಾದ್ಯಂತ ಮುಷ್ಕರ ಹಿಂಪಡೆದ ಟ್ರಕ್‌ ಚಾಲಕರು

ನವದೆಹಲಿ : ಹಿಟ್‌ ಅಂಡ್‌ ರನ್‌ ವಿರುದ್ಧ ಕಾನೂನನ್ನು ಜಾರಿಗೊಳಿಸುವ ಮೊದಲು ಮಧ್ಯಸ್ಥಗಾರರ ಜತೆ ಸಮಾಲೋಚನೆ ನಡೆಸುವುದಾಗಿ ಸರ್ಕಾರ ಭರವಸೆ ನೀಡಿದ ನಂತರ ದೇಶಾದ್ಯಂತ ಟ್ರಕ್‌ ಚಾಲಕರ ಮುಷ್ಕರವನ್ನು ಹಿಂಪಡೆಯಲಾಗಿದೆ. ಸರ್ಕಾರದ ಜೊತೆ ಸುದೀರ್ಘ ಮಾತುಕತೆಯ ನಂತರ, ಅಖಿಲ ಭಾರತ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ಮುಷ್ಕರವನ್ನು ಹಿಂಪಡೆಯಿತು. “ನಾವು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ … Continued

ಶಾಲಾ ವ್ಯಾನ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಡ್ಡಾಯಗೊಳಿಸಿದ ಉತ್ತರ ಪ್ರದೇಶ ಸರ್ಕಾರ

ಲಕ್ನೋ: ಉತ್ತರ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಾಲಾ ವ್ಯಾನ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ರಾಜ್ಯ ಸಾರಿಗೆ ಪ್ರಧಾನ ಕಾರ್ಯದರ್ಶಿ ಎಲ್.ವೆಂಕಟೇಶ್ವರಲು ಅಧಿಸೂಚನೆ ಹೊರಡಿಸಿದ್ದಾರೆ. ಅಧಿಸೂಚನೆಯ ಪ್ರಕಾರ, ಗೆಜೆಟ್‌ನಲ್ಲಿ ಪ್ರಕಟವಾದ ಮೂರು ತಿಂಗಳ ನಂತರ ನಿಯಮವು ಜಾರಿಗೆ ಬರಲಿದೆ. ಹಿರಿಯ ಸಾರಿಗೆ … Continued

ಹಾಸನ: ಇಬ್ಬರು ಮಕ್ಕಳೊಂದಿಗೆ ತಾಯಿ ನಿಗೂಢ ಸಾವು

ಹಾಸನ: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ನಿಗೂಢವಾಗಿ ಮೃತಪಟ್ಟ ಘಟನೆ ಹಾಸನ ನಗರದ ದಾಸರಕೊಪ್ಪಲಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಶಿವಮ್ಮ (36) ಹಾಗೂ ಮಕ್ಕಳಾದ ಸಿಂಚು (7) ಹಾಗೂ ಪವನ (10) ಎಂದು ಗುರುತಿಸಲಾಗಿದೆ. ಶಿವಮ್ಮ ಅವರ ಪತಿ ತೀರ್ಥ ಅವರು ಬೇರೆ ತುಮಕೂರಿನ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಕುಟುಂಬ ಒಂದು … Continued