ಕರ್ನಾಟಕದಲ್ಲಿ ಹೊಸದಾಗಿ ಕೋವಿಡ್ ಪ್ರಕರಣಗಳು ದೃಢ; ಒಂದು ಸಾವು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ (ಜನವರಿ 1) 296 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಹಾಗೂ ಒಬ್ಬರು ಸಾವು ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇಲಾಖೆ ಹೊರಡಿಸಿದ ಕೋವಿಡ್ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಒಟ್ಟು 1,245 ಸಕ್ರಿಯ ಕೋವಿಡ್ ಸೋಂಕಿತರಿದ್ದು, ಇದೇವೇಳೆ 50 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ರೋಗಿಗಳಲ್ಲಿ, 1,179 ಮಂದಿ ಮನೆ ಪ್ರತ್ಯೇಕತೆಯಲ್ಲಿದ್ದು, 66 … Continued

ನನ್ನನ್ನು ರಾಜಕೀಯವಾಗಿ ಮುಗಿಸಲು ದೊಡ್ಡ ಪಿತೂರಿ ನಡೆಯುತ್ತಿದೆ : ಡಿ.ಕೆ.ಶಿವಕುಮಾರ

ಬೆಂಗಳೂರು : ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದು ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ದೊಡ್ಡ ಪಿತೂರಿ ನಡೆಯುತ್ತಿದೆ. ಸರ್ಕಾರ ಈಗಾಗಲೇ ಕೇಸ್ ವಿತ್‍ಡ್ರಾ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನೋಟಿಸ್ ನೀಡಿದೆ. ಪ್ರಕರಣದ ತನಿಖೆಗೆ ನೀಡಿದ ಅನುಮತಿಯನ್ನು … Continued

ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್ ನನ್ನು ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ನನ್ನು ಭಯೋತ್ಪಾದಕ ಎಂದು ಕೇಂದ್ರ ಸರ್ಕಾರ ಸೋಮವಾರ ಘೋಷಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಆತನನ್ನು ಭಯೋತ್ಪಾದಕ ಎಂದು ಘೋಷಿಸಿದೆ. ನಿಷೇಧಿತ ಖಲಿಸ್ತಾನಿ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್‌ನೊಂದಿಗೆ ಗೋಲ್ಡಿ ಬ್ರಾರ್ ಸಂಬಂಧ ಹೊಂದಿದ್ದಾನೆ ಎಂದು ಗೃಹ ಸಚಿವಾಲಯ ಹೊರಡಿಸಿದ ನೋಟಿಸ್ ತಿಳಿಸಿದೆ. ಗೋಲ್ಡಿ ಬ್ರಾರ್ ಅನೇಕ ಹತ್ಯೆಗಳಲ್ಲಿ ತೊಡಗಿಸಿಕೊಂಡಿದ್ದಾನೆ ಮತ್ತು … Continued

ಬೆಳಗಾವಿ: ಹೊಸ ವರ್ಷದಂದೇ ಕನ್ನಡ ಧ್ವಜ ಸುಟ್ಟ ಕಿಡಿಗೇಡಿಗಳು

ಬೆಳಗಾವಿ: ಬೆಳಗಾವಿಯಲ್ಲಿ ಹೊಸ ವರ್ಷದ ಸಂದರ್ಭದಲ್ಲೇ ಕಿಡಿಗೇಡಿಗಳು ರಾತ್ರೋರಾತ್ರಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ಕಟ್ಟಿದ್ದ ನಾಡಧ್ವಜಕ್ಕೆ ಮಧ್ಯರಾತ್ರಿ ಸುಮಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಪುಂಡರ ಈ ಕೃತ್ಯಕ್ಕೆ ಕನ್ನಡ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃತ್ಯ ಎಸಗಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸುವಂತೆ … Continued

ನಾವು ರಾಮ ಮಂದಿರದ ಪರವಾಗಿದ್ದೇವೆ, ನಾನೂ ರಾಮ ಭಜನೆಗೆ ಹೋಗ್ತಿದ್ದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಯೋಧ್ಯೆ ರಾಮ ಮಂದಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ವಿಚಾರವನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಕೆಲ ವಿಪಕ್ಷದ ನಾಯಕರು ಆರೋಪಿಸಿರುವ ಬೆನ್ನಲ್ಲೇ ಅಯೋಧ್ಯೆ ರಾಮ ಮಂದಿರದ ನಿರ್ಮಾಣ ಹಾಗೂ ಉದ್ಘಾಟನೆಗೆ ನಮ್ಮ ಯಾವುದೇ ವಿರೋಧವಿಲ್ಲ, ನಾವು ರಾಮಮಂದಿರದ ಪರವಾಗಿದ್ದೇವೆ ಎಂದು ಹೇಳಿದ್ದಾರೆ. … Continued

ವೀಡಿಯೊಗಳು…| ಸರಣಿ ಭೂಕಂಪಗಳಿಂದ ತತ್ತರಿಸಿದ ಜಪಾನ್, 5 ಅಡಿ ಎತ್ತರದ ಸುನಾಮಿ ಅಲೆಗಳು, ರಷ್ಯಾ, ಕೊರಿಯಾದಲ್ಲೂ ಎಚ್ಚರಿಕೆ

ಸೋಮವಾರ ಜಪಾನಿನಲ್ಲಿ ಪ್ರಬಲ ಸರಣಿ ಭೂಕಂಪಗಳು ಸಂಭವಿಸಿದ್ದು, ಅಧಿಕಾರಿಗಳು ಸುನಾಮಿ ಮುನ್ನೆಚ್ಚರಿಕೆಗಳನ್ನು ನೀಡಿದ್ದಾರೆ.ಹಾಗೂ ಜಪಾನಿನ ವಾಯುವ್ಯ ಕರಾವಳಿಯಲ್ಲಿರುವ ಜನರಿಗೆ ಸ್ಥಳಾಂತರಿಸಲು ಸಲಹೆಗಳನ್ನು ನೀಡಲು ಅಧಿಕಾರಿಗಳನ್ನು ಪ್ರೇರೇಪಿಸಿತು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.ಜಪಾನ್ ಹವಾಮಾನ ಸಂಸ್ಥೆ (ಜೆಎಂಎ) ಪ್ರಕಾರ, ಭೂಕಂಪವು ಇಶಿಕಾವಾ ಮತ್ತು ಹತ್ತಿರದ ಪ್ರಾಂತ್ಯಗಳಲ್ಲಿ ಸಂಭವಿಸಿದೆ, ಅವುಗಳಲ್ಲಿ ಒಂದರ ಪ್ರಾಥಮಿಕ ತೀವ್ರತೆ 7.6 ರಷ್ಟಿದೆ … Continued

ಏಕದಿನ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ಬ್ಯಾಟರ್‌ ಡೇವಿಡ್ ವಾರ್ನರ್

ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಆರಂಭಿಕ ಬ್ಯಾಟರ್‌ ಡೇವಿಡ್ ವಾರ್ನರ್ ಸೋಮವಾರ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಿಗೂ ವಿದಾಯ ಹೇಳಿದ್ದಾರೆ. ಆದರೆ ಅಗತ್ಯವಿದ್ದರೆ 2025 ರ ಚಾಂಪಿಯನ್ಸ್ ಟ್ರೋಫಿಗೆ ಲಭ್ಯವಿರುವುದಾಗಿ ತಿಳಿಸಿದ್ದಾರೆ. 37 ವರ್ಷ ವಯಸ್ಸಿನ ವಾರ್ನರ್‌ ಅವರಿಗೆ ಜ.3ರಿಂದ ಪಾಕಿಸ್ತಾನ ವಿರುದ್ಧ ಸಿಡ್ನಿಯಲ್ಲಿ ನಡೆಯುವ ಪಂದ್ಯವು ವೃತ್ತಿ ಜೀವನದ ಕೊನೆಯ ಟೆಸ್ಟ್ … Continued

ರೈಲಿನ ಮುಂದೆ ಹಾರಿ ತಂದೆ- ಮೂವರು ಮಕ್ಕಳು ಆತ್ಮಹತ್ಯೆ

ಗುಜರಾತಿನ ಬೊಟಾಡ್ ಜಿಲ್ಲೆಯಲ್ಲಿ 42 ವರ್ಷದ ವ್ಯಕ್ತಿಯೊಬ್ಬ ತನ್ನ ಮೂವರು ಮಕ್ಕಳೊಂದಿಗೆ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆ ಯತ್ನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಈತ ಜಾಮೀನಿನ ಮೇಲೆ ಹೊರ ಬಂದಿದ್ದ ಎಂದು ಹೇಳಲಾಗಿದೆ. ಮೃತರನ್ನು ಮಂಗಾಭಾಯಿ ವಿಜುದಾ ಹಾಗೂ ಅವರ ಪುತ್ರಿಯರಾದ ಸೋನಂ (17), ರೇಖಾ (21) ಮತ್ತು ಮಗ ಜಿಗ್ನೇಶ (19) ಎಂದು … Continued

ಹೊಸ ವರ್ಷದ ಆರಂಭದ ದಿನವೇ ಇಸ್ರೋದಿಂದ ಮತ್ತೊಂದು ಮೈಲಿಗಲ್ಲು : ಕಪ್ಪು ಕುಳಿಗಳ ಅಧ್ಯಯನಕ್ಕೆ ಎಕ್ಸ್‌ಪೋಸ್ಯಾಟ್‌ ಉಪಗ್ರಹದ ಯಶಸ್ವಿ ಉಡಾವಣೆ

ನವದೆಹಲಿ: 2023 ರಲ್ಲಿ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದ ವಿಶ್ವದ ಮೊದಲ ದೇಶವೆಂಬ ಹೆಗ್ಗಳಿಕೆ ಪಡೆದ ನಂತರ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹೊಸ ವರ್ಷದ ಮೊದಲ ದಿನವೇ ಮತ್ತೊಂದು ಐತಿಹಾಸಿಕ ಉಡಾವಣೆ ಮಾಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 2024ರ ಆರಂಭದ ದಿನವೇ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) … Continued

ಡಿಸಿಎಂ ಡಿಕೆ ಶಿವಕುಮಾರ ಹೂಡಿಕೆ ವಿವರ ನೀಡಿ : ಕೇರಳದ ಜೈಹಿಂದ್ ಚಾನೆಲ್ ​ಗೆ ಸಿಬಿಐ ನೋಟಿಸ್

ನವದೆಹಲಿ : ಕಾಂಗ್ರೆಸ್ ನಾಯಕ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಸಿಬಿಐ ನೋಟಿಸ್ ಜಾರಿಮಾಡಿದೆ. ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಶಿಜು ಅವರಿಗೆ ಜನವರಿ 11 ರಂದು ತನಿಖಾಧಿಕಾರಿಗಳು ಕೋರಿದ ಅಗತ್ಯ ದಾಖಲೆಗಳೊಂದಿಗೆ … Continued