ಬಿಹಾರದಲ್ಲಿ ರಾಜಕೀಯ ಬೆಳವಣಿಗೆ :ಸಿಎಂ ಸ್ಥಾನಕ್ಕೆ ನಿತೀಶಕುಮಾರ ರಾಜೀನಾಮೆ, ಇಂದು ಸಂಜೆ ಮತ್ತೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ..!

ಪಾಟ್ನಾ : ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶಕುಮಾರ ಭಾನುವಾರ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಳೆದ ಎರಡ್ಮೂರು ದಿನಗಳಿಂದ ಬಿಹಾರ ರಾಜಕಾರಣದಲ್ಲಿನ ಎಲ್ಲಾ ವದಂತಿಗಳಿಗೆ ತೆರೆಬಿದ್ದಿದೆ. ಅವರು ಇಂದು, ಭಾನುವಾರ ಸಂಜೆ ಅಥವಾ ನಾಳೆ ಎನ್ ಡಿಎ ಜೊತೆಗೆ ಹೊಸ ಸರ್ಕಾರ ರಚಿಸುವ ಸಾಧ್ಯತೆಯಿದೆ. ಇಂದು, ಭಾನುವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಜೆಡಿಯು ಶಾಸಕರ ಸಭೆ … Continued

ಆಸ್ಟ್ರೇಲಿಯಾ ಓಪನ್ ಟೆನಿಸ್‌ ಗ್ರ್ಯಾಂಡ್‌ ಸ್ಲ್ಯಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂದು ದಾಖಲೆ ಬರೆದ ಕರ್ನಾಟಕದ ರೋಹನ್ ಬೋಪಣ್ಣ

ಮೆಲ್ಬೋರ್ನ್: ಭಾರತದ ಹಿರಿಯ ಟೆನಿಸ್ ಆಟಗಾರ ಕನ್ನಡಿಗ ರೋಹನ್​ ಬೋಪಣ್ಣ(Rohan Bopanna) ಆಸ್ಟ್ರೇಲಿಯಾ ಓಪನ್​ ಟೆನಿಸ್​ ಟೂರ್ನಿಯಲ್ಲಿ( ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಶನಿವಾರ ನಡೆದ ಜಿದ್ದಾಜಿದ್ದಿನ ಪುರುಷರ ಡಬಲ್ಸ್​ ಫೈನಲ್ ಪಂದ್ಯದಲ್ಲಿ ರೋಹನ್ ಬೋಪಣ್ಣ ಮತ್ತು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್‌ ಜೋಡಿ ಇಟಲಿಯ ಸಿಮೋನ್​ ಬೊಲೆಲ್ಲಿ-ಆ್ಯಂಡ್ರಿಯಾ ವಸಸ್ಸೊರಿ … Continued

ಮುಂಬರುವ ಲೋಕಸಭೆ ಚುನಾವಣೆಗೆ 96 ಕೋಟಿ ಮತದಾರರು

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ 47 ಕೋಟಿ ಮಹಿಳೆಯರು ಸೇರಿದಂತೆ ಮುಂದಿನ ಲೋಕಸಭಾ ಚುನಾವಣೆಗೆ 1.73 ಕೋಟಿ (18-19 ವಯೋಮಾನ) ಯುವ ಮತದಾರರು ಸೇರಿದಂತೆ 96 ಕೋಟಿ ಮತದಾರರು ಮತದಾನಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಜನರು ಮತ ಚಲಾಯಿಸಲು ಅರ್ಹರಾಗಿದ್ದು, ಇದಕ್ಕಾಗಿ ಭಾರತದಾದ್ಯಂತ 12 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳನ್ನು … Continued

ಲೋಕಸಭಾ ಚುನಾವಣೆ: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ: ಉಸ್ತುವಾರಿಗಳ ಪಟ್ಟಿ ಇಲ್ಲಿದೆ….

ಬೆಂಗಳೂರು: ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ವರಿಷ್ಠ ಮಂಡಳಿಯು ರಾಜ್ಯ ಚುನಾವಣಾ ಉಸ್ತುವಾರಿಯನ್ನು ರಾಧಮೋಹನದಾಸ ಅಗರವಾಲ್ ಹಾಗೂ ಹಾಗೂ ಸಹ ಉಸ್ತುವಾರಿಯನ್ನಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಿಸಿದ ಬೆನ್ನಲ್ಲೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಉಸ್ತುವಾರಿಗಳನ್ನು ಆಯ್ಕೆ ಮಾಡಲಾಗಿದ್ದು, … Continued

ಪ್ರಧಾನಿ ಮೋದಿ, ಕೇಂದ್ರ ಸರ್ಕಾರ ಅಪಹಾಸ್ಯ ಮಾಡಿದ ನಾಟಕ ಪ್ರದರ್ಶಿಸಿದ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರದ ವಿರುದ್ಧ ಅವಹೇಳನಕಾರಿ ವಿಷಯ ಇದ್ದ ನಾಟಕವನ್ನು ಪ್ರದರ್ಶಿಸಿದ್ದಕ್ಕಾಗಿ ಕೇರಳ ಹೈಕೋರ್ಟ್‌ನ ಇಬ್ಬರು ಅಧಿಕಾರಿಗಳನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ಗಣರಾಜ್ಯೋತ್ಸವದಂದು ಹೈಕೋರ್ಟ್‌ನಲ್ಲಿ ಪ್ರದರ್ಶಿಸಲಾದ ಈ ನಾಟಕವು ಭಾರತ ಸರ್ಕಾರ ಮತ್ತು ದೇಶಕ್ಕೆ ಅವಮಾನವಾಗಿದೆ ಎಂದು ಆರೋಪಿಸಿ ದೂರಿಗೆ ಕಾರಣವಾಯಿತು. ಸಹಾಯಕ ರಿಜಿಸ್ಟ್ರಾರ್ ಸುಧೀಶ ಟಿ.ಎ. ಮತ್ತು ಕೋರ್ಟ್ ಕೀಪರ್ … Continued

ಲೋಕಸಭೆ ಚುನಾವಣೆ: ಕರ್ನಾಟಕ ಸೇರಿ 23 ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳ ನೇಮಿಸಿದ ಬಿಜೆಪಿ

ನವದೆಹಲಿ: ಈ ವರ್ಷದ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಶನಿವಾರ ಕರ್ನಾಟಕ ಸೇರಿದಂತೆ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳನ್ನು ನೇಮಿಸಿದೆ. ಕರ್ನಾಟಕದ ಚುನಾವಣಾ ಉಸ್ತುವಾರಿಯಾಗಿ ರಾಧಾಮೋಹನದಾಸ ಅಗರ್ವಾಲ್‌ ಹಾಗೂ ಸಹ ಪ್ರಭಾರಿಯಾಗಿ ಸುಧಾಕರ ರೆಡ್ಡಿ ಅವರನ್ನು ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ ತಾವ್ಡೆ ಅವರನ್ನು ಬಿಹಾರ … Continued

ರಾಮಮಂದಿರ ಪ್ರತಿಷ್ಠಾಪನೆ ಪ್ರಾದೇಶಿಕ ಶಾಂತಿಗೆ ದೊಡ್ಡ ಬೆದರಿಕೆ : ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಕ್ಯಾತೆ

ವಿಶ್ವಸಂಸ್ಥೆ : ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಯು ‘ಪ್ರದೇಶದ ಶಾಂತಿ’ಗೆ ‘ದೊಡ್ಡ ಬೆದರಿಕೆಯಾಗಿದೆ’ ಎಂದು ವಿಶ್ವಸಂಸ್ಥೆಯ ಅಧಿಕಾರಿಯೊಬ್ಬರಿಗೆ ಪತ್ರ ಬರೆದು ಎಚ್ಚರಿಸುವ ಮೂಲಕ ಪಾಕಿಸ್ತಾನವು ರಾಮ ಮೀದರದ ಉದ್ಘಾಟನೆಗೆ ಕ್ಯಾತೆ ತೆಗೆದಿದೆ. ಅಯೋಧ್ಯೆಯಲ್ಲಿ ಧ್ವಂಸಗೊಂಡ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ಮತ್ತು ಪವಿತ್ರೀಕರಣವನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸುತ್ತದೆ ಎಂದು ಪಾಕಿಸ್ತಾನದ ವಿಶ್ವ ಸಂಸ್ಥೆಯ ಕಾಯಂ … Continued

ನ್ಯಾಯಮೂರ್ತಿಗಳಿಬ್ಬರ ಸಂಘರ್ಷದ ಪ್ರಕರಣ : ಕಲ್ಕತ್ತಾ ಹೈಕೋರ್ಟ್‌ ವಿಚಾರಣೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ಸೀಟು ಪಡೆಯಲು ನಕಲಿ ಪ್ರಮಾಣಪತ್ರ ಸಲ್ಲಿಕೆ ಮಾಡುತ್ತಿದ್ದ ಹಗರಣಕ್ಕೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿಗಳ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಇಂದು (ಶನಿವಾರ) ವಿಶೇಷ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠ ಹಗರಣಕ್ಕೆ ಸಂಬಂಧಪಟ್ಟಂತೆ ಕಲ್ಕತ್ತಾ ಹೈಕೋರ್ಟ್‌ ನಡೆಸುತ್ತಿದ್ದ ಎಲ್ಲಾ ವಿಚಾರಣೆಗಳಿಗೆ ತಡೆ ನೀಡಿದೆ. … Continued

ನಿಯಮ ಉಲ್ಲಂಘನೆ ಆರೋಪ: ಬಸನಗೌಡ ಪಾಟೀಲ ಯತ್ನಾಳ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ನೋಟಿಸ್‌

ಬೆಂಗಳೂರು: ಪರಿಸರ ನಿಯಮಾವಳಿ ಉಲ್ಲಂಘನೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒಡೆತನದ ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೋಟಿಸ್ ಜಾರಿಗೊಳಿಸಿದೆ. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಯತ್ನಾಳ ಒಡೆತನದ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಎಥೆನಾಲ್‌ ಉತ್ಪಾದಿಸುವ ಘಟಕವೂ ಇದೆ. … Continued

ಹಂಪಿ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ

ಹೊಸಪೇಟೆ : ಮುಜರಾಯಿ ಇಲಾಖೆ ಅಡಿಯಲ್ಲಿ ಬರುವ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. ದೇವಸ್ಥಾನಕ್ಕೆ ಭೇಟಿ ನೀಡುವವರು ಬರ್ಮುಡ, ಜೀನ್ಸ್ ಚಡ್ಡಿ ಧರಿಸುವಂತಿಲ್ಲ. ವಿರೂಪಾಕ್ಷನ ದರ್ಶನ‌ ಪಡೆಯಲು ಸಾಂಪ್ರದಾಯಿಕ ಉಡುಗೆ ಕಡ್ಡಾಯ. ಬರ್ಮುಡ, ಜೀನ್ಸ್‌ ಚಡ್ಡಿ ಧರಿಸಿ ಬಂದರೆ ದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ. ಪಂಚೆ ತೊಟ್ಟು ಸಾಂಪ್ರದಾಯಿಕ ಉಡುಗೆಯಲ್ಲಿ ಬಂದರೆ ಮಾತ್ರ ದೇವರ ದರ್ಶನಕ್ಕೆ … Continued