ಸಾಲದ ವಿಚಾರದಲ್ಲಿ ಮದುವೆಗೆಂದು ಕರೆದೊಯ್ದು ದೆಹಲಿ ಉನ್ನತ ಪೋಲೀಸ್ ಅಧಿಕಾರಿ ಮಗನ ಕೊಲೆ

ನವದೆಹಲಿ : ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹರ್ಯಾಣಾಕ್ಕೆ ತೆರಳಿದ್ದ ದೆಹಲಿ ಪೊಲೀಸ್‌ ಸಹಾಯಕ ಆಯುಕ್ತ ಯಶಪಾಲ ಸಿಂಗ್‌ ಅವರ ಪುತ್ರ 24ರ ಹರೆಯದ ಲಕ್ಷ್ಯ ಚೌಹಾಣ ಅವರ ಕೊಲೆಯಾಗಿದೆ. ಆತನ ದೇಹವು ಕಾಲುವೆಯಲ್ಲಿ ಕಂಡುಬಂದಿದೆ. ತೀಸ್ ಹಜಾರಿ ನ್ಯಾಯಾಲಯದ ವಕೀಲರಾದ ಸಾಕ್ಷ್ಯ ಚೌಹಾಣ ಅವರನ್ನು ಅವರ ಇಬ್ಬರು ಸ್ನೇಹಿತರಾದ ವಿಕಾಸ ಭಾರದ್ವಾಜ ಮತ್ತು ಆತನ ಸಹಚರ … Continued

ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ

ಶಿವಮೊಗ್ಗ: ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಬೆಕ್ಕಿನಕಲ್ಮಠದಲ್ಲಿ ಜಗದ್ಗುರು ಶ್ರೀ ಗುರುಬಸವ ಸ್ವಾಮೀಜಿಗಳ 112ನೇ ಪುಣ್ಯ ಸ್ಮರಣೋತ್ಸವ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ಭಾವೈಕ್ಯ ಸಮ್ಮೇಳನ ಹಾಗೂ ಗುರು ಬಸವಶ್ರೀ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಘವೇಂದ್ರ … Continued

5,8,9ನೇ ತರಗತಿಗೆ SA-2 ಪರೀಕ್ಷೆ; ಮಾದರಿ ಪ್ರಶ್ನೋತರ ಪತ್ರಿಕೆ ಪ್ರಕಟ

ಬೆಂಗಳೂರು : 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಸಂಕಲನಾತ್ಮಕ ಮೌಲ್ಯಾಂಕನ-2 (SA-2) ಕ್ಕೆ ಸಂಬಂಧಿಸಿದಂತೆ ಮಾದರಿ ಪ್ರಶೋತ್ತರ ಪತ್ರಿಕೆಗಳನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ … Continued

ಉತ್ತರಾಖಂಡ ಮದರಸಾಗಳಲ್ಲಿ ಶ್ರೀರಾಮನ ಕುರಿತು ಅಧ್ಯಯನಕ್ಕೆ ಅವಕಾಶ : ವಕ್ಫ್ ಬೋರ್ಡ್ ಅಧ್ಯಕ್ಷ

ಡೆಹ್ರಾಡೂನ್: ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ ದೇಶಾದ್ಯಂತ ರಾಮನ ಕುರಿತ ವಿಚಾರಗಳು ವ್ಯಾಪಕ ಸುದ್ದಿಯಾಗುತ್ತಿದೆ. ಈ ಮಧ್ಯೆ ಉತ್ತರಾಖಂಡದಲ್ಲಿ ಮದರಸಾಗಳಲ್ಲಿ ಭಗವಾನ್‌ ರಾಮನ ಕುರಿತು ಅಧ್ಯಯನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಉತ್ತರಾಖಂಡದ ಮದರಸಾಗಳಲ್ಲಿ (Uttarakhand Madrasa) ಶ್ರೀರಾಮನ ಕುರಿತು ಅಧ್ಯಯನ ನಡೆಯಬೇಕು ಎಂದು ಹೊಸ ಪಠ್ಯ ಅಳವಡಿಸಿಕೊಳ್ಳಲಾಗುತ್ತಿದೆ. ಈ ಕುರಿತು ಉತ್ತರಾಖಂಡ ವಕ್ಫ್‌ ಬೋರ್ಡ್‌ ಚೇರ್ಮನ್‌ ಆಗಿರುವ ಶಾದಾಬ್‌ … Continued

252 ವರ್ಷಗಳ ಕ್ರಿಕೆಟ್‌ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪ್ರಥಮ ದರ್ಜೆ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ ಭಾರತದ ಆಟಗಾರ…!

ಶುಕ್ರವಾರ ಅರುಣಾಚಲ ಪ್ರದೇಶ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಹೈದರಾಬಾದ್ ಬ್ಯಾಟರ್ ತನ್ಮಯ ಅಗರ್ವಾಲ್ ಕೇವಲ 147 ಎಸೆತಗಳಲ್ಲಿ ತ್ರಿಶತಕ ಸಿಡಿಸುವ ಮೂಲಕ 252 ವರ್ಷಗಳ ಕ್ರಿಕೆಟ್‌ ಇತಿಹಾಸದಲ್ಲಿ ಹೊಸ ದಾಖಲೆ ಮಾಡಿದ್ದಾರೆ. ತನ್ಮಯ ಅಗರ್ವಾಲ್ ಅವರ ಆಕರ್ಷಕ ಬ್ಯಾಟಿಂಗ್‌ನಿಂದಾಗಿ ಹೈದರಾಬಾದ್ ತಂಡವು ಕೇವಲ 48 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 529 ರನ್ ಗಳಿಸಿತು. … Continued

ಅಣು ಬಾಂಬ್ ಸ್ಫೋಟಗೊಳ್ಳಬಹುದು…ವಿಶ್ವದ ಇಬ್ಬರು ಪ್ರಧಾನಿಗಳ ಸಾವು ಸಂಭವಿಸಬಹುದು: ಕೋಡಿಮಠ ಸ್ವಾಮೀಜಿ ಭವಿಷ್ಯ

ಗದಗ: 2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ. ಅಕಾಲಿಕ ಮಳೆ, ಬಾಂಬ್ ಸಿಡಿಯುವ ಸಂಭವ. ಯುದ್ಧ ಭೀತಿ, ಜನರಲ್ಲಿ ಉಂಟಾಗುತ್ತದೆ ಎಂದು ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದ್ದಾರೆ. ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, 2024ರಲ್ಲಿ ಅಕಾಲಿಕ ಮಳೆ, ಭೂಕಂಪ, ಜಲಕಂಟಕ, ಅಣುಬಾಂಬ್ ಸ್ಪೋಟದಂತಹ ಸನ್ನಿವೇಶಗಳು ಮತ್ತು ಯುದ್ಧದ ಭೀತಿಯಿಂದ ಜಗತ್ತು … Continued

ಭಾರತದ ಟಾಟಾ ಸಮೂಹ-ಫ್ರಾನ್ಸ್‌ನ ಏರ್‌ಬಸ್ ಕಂಪನಿಯಿಂದ ಒಟ್ಟಾಗಿ ಹೆಲಿಕಾಪ್ಟರ್‌ಗಳ ತಯಾರಿಕೆ

ನವದೆಹಲಿ : ಭಾರತದ ಟಾಟಾ ಗ್ರುಪ್ಸ್‌ ಮತ್ತು ಫ್ರಾನ್ಸ್‌ನ ಏರ್‌ಬಸ್ ಒಟ್ಟಾಗಿ ಪ್ರಯಾಣಿಕರ ಹೆಲಿಕಾಪ್ಟರ್‌ಗಳನ್ನು ತಯಾರಿಸುವ ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಶುಕ್ರವಾರ ತಿಳಿಸಿದ್ದಾರೆ. ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ಭಾರತ ಪ್ರವಾಸದ ಸಂದರ್ಭದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಅವರು ಹೇಳಿದರು. ಟಾಟಾ ಗ್ರುಪ್ಸ್‌ … Continued

ಭಾರತ ಜೋಡೋ ನ್ಯಾಯ ಯಾತ್ರೆ : ಪಶ್ಚಿಮ ಬಂಗಾಳದಲ್ಲಿ ರ್ಯಾಲಿಗಳಿಗೆ ಅನುಮತಿ ನಿರಾಕರಣೆ-ಕಾಂಗ್ರೆಸ್ ಆರೋಪ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಭಾರತ ಜೋಡೊ ನ್ಯಾಯಯಾತ್ರೆಯ ಭಾಗವಾಗಿ ಕೆಲವು ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಅನುಮತಿ ಕೋರಿದ್ದ ಕಾಂಗ್ರೆಸ್‌ಗೆ ಈಗ ಾನುಮತಿ ಪಡೆಯಲು ಸಮಸ್ಯೆಗಳು ಎದುರಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್‌ ಚೌಧರಿ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಕ್ಷವು ಕೆಲವು ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳನ್ನು ಆಯೋಜಿಸಲು ಬಯಸಿದೆ, … Continued

ಬಿಹಾರದಲ್ಲಿ ಮತ್ತೆ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ: ಜನವರಿ 28ಕ್ಕೆ ಸಿಎಂ ಆಗಿ ನಿತೀಶ ಪ್ರಮಾಣ ವಚನ..?!

ನವದೆಹಲಿ: ನಿತೀಶಕುಮಾರ ಅವರು ಬಿಜೆಪಿಯ ಬೆಂಬಲದೊಂದಿಗೆ ಭಾನುವಾರ ಒಂಬತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ವರದಿ ಪ್ರಕಾರ, ಬಿಜೆಪಿಗೆ ಅವರು ಎರಡು ಉಪಮುಖ್ಯಮಂತ್ರಿ ಸ್ಥಾನಗಳನ್ನು ನೀಡಲಿದ್ದಾರೆ ಎಂದು ವರದಿಗಳು ತಿಳಿಸಿವೆ. ನಿತೀಶಕುಮಾರ ಅವರು ನಾಳೆ ಶನಿವಾರ ಬೆಳಗ್ಗೆ 10 ಗಂಟೆಗೆ ಶಾಸಕಾಂಗ ಪಕ್ಷದ ಸಭೆ … Continued

ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ : ಮೊದಲ ಪಟ್ಟಿಯಲ್ಲಿ 34 ಶಾಸಕರಿಗೆ ಮಣೆ ; ಯಾರಿಗೆ ಯಾವ ನಿಗಮ-ಮಂಡಳಿ-ಪಟ್ಟಿ ಇಲ್ಲಿದೆ…

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ವಿವಿಧ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ ಕುಲಕರ್ಣಿ ಸೇರಿದಂತೆ ಒಟ್ಟು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಿ. ಪುಟ್ಟರಂಗಶೆಟ್ಟಿ ಹಾಗೂ ಎಸ್.ಎನ್. ಸುಬ್ಬಾರೆಡ್ಡಿ, ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, … Continued