ಕೇಂದ್ರ ಬಜೆಟ್ 2024 : ಗರ್ಭಕಂಠ ಕ್ಯಾನ್ಸರ್​ ತಡೆಗೆ 9-14 ವರ್ಷದ ಬಾಲಕಿಯರಿಗೆ ಉಚಿತ (HPV) ಲಸಿಕೆ ಘೋಷಣೆ

ನವದೆಹಲಿ : ಭವಿಷ್ಯದಲ್ಲಿ ಕಾಣಿಸಿಕೊಳ್ಳಬಹುದಾದ ಗರ್ಭಕಂಠದ ಕ್ಯಾನ್ಸರ್‌ ತಡೆಗಟ್ಟುವ ನಿಟ್ಟಿನಲ್ಲಿ 9ರಿಂದ 14 ವರ್ಷ ವಯಸ್ಸಿನ ಹದಿಹರೆಯದ ಹುಡುಗಿಯರಿಗೆ ಕೇಂದ್ರ ಸರ್ಕಾರವು ಉಚಿವಾಗಿ HPV ಲಸಿಕೆ ನೀಡುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಿದೆ.
ಗುರುವಾರ ಬಜೆಟ್‌ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಈ ಮಹತ್ವದ ಘೋಷಣೆ ಮಾಡಿದ್ದಾರೆ.
ಪ್ರಪಂಚದಮೂರನೇ ಅತಿ ಸಾಮಾನ್ಯ ಎನಿಸಿರುವ ಗರ್ಭಕಂಠ ಕ್ಯಾನ್ಸರ್ ತಡೆಯಲು ಹ್ಯೂಮನ್ ಪಪಿಲೋಮಾ ವೈರಸ್‌ (HPV) ಲಸಿಕೆ ಪರಿಣಾಮಕಾರಿಯಾಗಿದೆ. ಭಾರತ ಸರ್ಕಾರದ ವತಿಯಿಂದ ಇನ್ಮುಂದೆ 9-14 ವರ್ಷದ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಈಗ ಗರ್ಭಕಂಠ ಕ್ಯಾನ್ಸರ್‌ ನಿರೋಧಕ ವ್ಯಾಕ್ಸಿನ್‌ಗೆ 3 ಸಾವಿರ ರೂ. ಇದೆ. ಇನ್ನುಮುಂದೆ ಶಾಲೆಗಳ ಮೂಲಕವೇ ಬಾಲಕಿಯರಿಗೆ ಉಚಿತವಾಗಿ ಕ್ಯಾನ್ಸರ್‌ ನಿರೋಧಕ ಲಸಿಕೆ ನೀಡಲಾಗುತ್ತದೆ ಎಂದು ಈಗ ಸರ್ಕಾರ ಘೋಷಿಸಿದೆ. ಕೇಂದ್ರ ಸರ್ಕಾರ ನೀಡುವ ಲಸಿಕೆಯು ಶೇ.70ರಷ್ಟು ಪರಿಣಾಮಕಾರಿಯಾಗಿದ್ದು, ಹೆಣ್ಣುಮಕ್ಕಳು ಗರ್ಭಕಂಠ ಕ್ಯಾನ್ಸರ್‌ಗೆ ತುತ್ತಾಗುವುದರಿಂದ ತಡೆಗಟ್ಟುತ್ತದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement