‘ಎಂದಿಗೂ ಸಹಿಸುವುದಿಲ್ಲ…’: ಸ್ವಪಕ್ಷದ ಸಂಸದ ಡಿ.ಕೆ.ಸುರೇಶ ‘ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ’ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

ನವದೆಹಲಿ: ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ ಅವರ, ‘ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಬೇಡಿಕೆ’ ಎಂಬ ಹೇಳಿಕೆ ಇಂದು, ಶುಕ್ರವಾರ ರಾಜ್ಯಸಭೆಯಲ್ಲಿ ಚರ್ಚೆಗೆ ಕಾರಣವಾಯಿತು.
ದೇಶ ಒಡೆಯುವ ಬಗ್ಗೆ ಮಾತನಾಡುವವರು ಅವರು ಯಾವ ಪಕ್ಷದವರೇ ಆಗಲಿ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ತಮ್ಮ ಪಕ್ಷದ ಸಂಸದ ಡಿ.ಕೆ.ಸುರೇಶ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ದೇಶ ಒಡೆಯುವ ಬಗ್ಗೆ ಮಾತನಾಡಿದರೆ ಅದನ್ನು ನಾವು ಎಂದಿಗೂ ಸಹಿಸುವುದಿಲ್ಲ, ಆ ವ್ಯಕ್ತಿ ಯಾವ ಪಕ್ಷಕ್ಕೆ ಸೇರಿರಲಿ, ಅದು ನನ್ನ ಪಕ್ಷವಾಗಲಿ ಅಥವಾ ಬೇರೆ ಪಕ್ಷದವರಾಗಲಿ, ನಾನು ಮಲ್ಲಿಕಾರ್ಜುನ ಖರ್ಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಂದೇ ಎಂದು ಹೇಳುತ್ತೇನೆ. ಮುಂದೆಯೂ ಒಂದೇ ದೇಶವಾಗಿ ಇರಲಿದ್ದೇವೆ ಎಂದು ಹೇಳುತ್ತೇನೆ ಎಂದು ಕಾಂಗ್ರೆಸ್ ಅಧ್ಯಕ್ಷರು ಶುಕ್ರವಾರ ಸದನದಲ್ಲಿ ಹೇಳಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಸಂಸತ್ತಿನಲ್ಲಿ ಮಂಡಿಸಿದ ಕೇಂದ್ರ ಮಧ್ಯಂತರ ಬಜೆಟ್ 2024-25 ಕುರಿತು ಪ್ರತಿಕ್ರಿಯಿಸುವಾಗ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು‘ಬಜೆಟ್ ಹಂಚಿಕೆಯಲ್ಲಿ ಅನ್ಯಾಯವಾದರೆ ದಕ್ಷಿಣ ರಾಜ್ಯಗಳು ಶೀಘ್ರದಲ್ಲೇ ಪ್ರತ್ಯೇಕ ರಾಷ್ಟ್ರಕ್ಕಾಗಿ ಬೇಡಿಕೆ ಇಡಬಹುದು’ ಎಂದು ಡಿಕೆ ಸುರೇಶ್ ಹೇಳಿಕೆ ನೀಡಿದ್ದರು.
‘ದಕ್ಷಿಣ ರಾಜ್ಯಗಳಿಂದ ಸಂಗ್ರಹಿಸಿದ ಹಣವನ್ನು ಉತ್ತರದ ರಾಜ್ಯಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಇದರಿಂದ ನಮಗೆ ಆರ್ಥಿಕವಾಗಿ ತೊಂದರೆಯಾಗುತ್ತಿದೆ. ನಾವು ನ್ಯಾಯಯುತವಾದ ಪಾಲನ್ನು ಕೇಳುತ್ತಿದ್ದೇವೆ. ಹೀಗೆ ಅನ್ಯಾಯ ಮುಂದುವರಿದರೆ. ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಬೇಡಿಕೆ ಅನಿವಾರ್ಯವಾಗುತ್ತದೆ ಎಂದು ಹೇಳಿದ್ದರು.

ಪ್ರಮುಖ ಸುದ್ದಿ :-   ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

ಡಿ.ಕೆ.ಸುರೇಶ ಹೆಸರು ಹೇಳದೇ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿ ಮಾತನಾಡಿದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರು, ಕಾಂಗ್ರೆಸ್‌ನಲ್ಲಿ ವಿಭಜಕ ಶಕ್ತಿಗಳು ಇನ್ನೂ ಜೀವಂತವಾಗಿವೆ ಎನ್ನುವುದಕ್ಕೆ ಈ ಹೇಳಿಕೆ ನಿದರ್ಶನ ಎಂದರು. ದೇಶದ ಸಂವಿಧಾನದ ಅಡಿ ಚುನಾಯಿತನಾದ ಒಬ್ಬ ಸಂಸದ ದೇಶದ ಸಾರ್ವಭೌಮತೆಯನ್ನು ರಕ್ಷಿಸುತ್ತೇನೆ ಎಂದು ಪ್ರಮಾಣವಚನ ಸ್ವೀಕರಿಸಿರುತ್ತಾರೆ. ಇಂತಹ ಹೇಳಿಕೆಗಳನ್ನು ನಿರ್ಲಕ್ಷಿಸಲು ಸಾಧ್ಯವೇ ಇಲ್ಲ. ಇದು ಸಂವಿಧಾನದ ಮೇಲಿನ ನೇರ ದಾಳಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಳಿಕ ಮಧ್ಯಪ್ರವೇಶಿಸಿದ ಸಭಾಪತಿ ಜಗದೀಪ ಧನಕರ್ ಅವರು, ಇದು ಲೋಕಸಭೆ ಸದಸ್ಯ ಮಾತನಾಡಿರುವ ವಿಷಯ ಆಗಿರುವುದರಿಂದ ಇಲ್ಲಿ ಚರ್ಚೆ ಬೇಡ ಎಂದು ಎಂದರು.
ನಂತರ ಸಭಾಪತಿ ಮಾತಿಗೆ ಸಹಮತ ವ್ಯಕ್ತಪಡಿಸಿ ಮಾತನಾಡಿದ ರಾಜ್ಯಸಭೆ ವಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ‘ಡಿ.ಕೆ. ಸುರೇಶ ಹೇಳಿಕೆ ಬಗೆಗಿನ ಚರ್ಚೆ ಇಲ್ಲಿ ಅಪ್ರಸ್ತುತ. ಾದಾಗ್ಯೂ ನಮ್ಮ ಕಾಂಗ್ರೆಸ್ ಪಕ್ಷ ದೇಶ ವಿಭಜನೆಯ ಮಾತುಗಳನ್ನು ಸಹಿಸಿಕೊಳ್ಳುವುದಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಭಾರತ ಒಂದು. ಈ ವಿಚಾರವನ್ನು ಲೋಕಸಭೆಯ ಹಕ್ಕುಬಾಧ್ಯತಾ ಸಮಿತಿ ಪರಾಮರ್ಶಿಸುವುದು ಸೂಕ್ತ’ ಎಂದು ಚರ್ಚೆಗೆ ತೆರೆ ಎಳೆದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

ಈ ಬಗ್ಗೆ ಗುರುವಾರ ರಾತ್ರಿ ಸ್ಪಷ್ಟನೆ ನೀಡಿದ್ದ ಸುರೇಶ, ‘ವಿವಾದ ಸೃಷ್ಟಿಸಲು ಬಿಜೆಪಿಯವರು ತಮ್ಮ ಹೇಳಿಕೆಯನ್ನು ತಿರುಚಿದ್ದಾರೆ’ ಎಂದು ಆರೋಪಿಸಿದ್ದಾರೆ. ‘ಕರ್ನಾಟಕವು ಭಾರತದ ಭಾಗವಾಗಿಯೇ ಇರುತ್ತದೆ. ನಮ್ಮದು ಒಕ್ಕೂಟ ವ್ಯವಸ್ಥೆ. ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಹೇಳಿದ್ದೇನೆ’ ಎಂದು ಸ್ಪಷ್ಟನೆ ನೀಡಿದ್ದರು.
ಬಿಜೆಪಿ ನೇತೃತ್ವದ ಕೇಂದ್ರದಿಂದ “ಹಣಕಾಸು ಹಂಚಿಕೆಯಲ್ಲಿನ ಅನ್ಯಾಯ” ವನ್ನು ಗಮನಕ್ಕೆ ತರಲು ಪ್ರಯತ್ನಿಸಿದ್ದೇನೆ. ನಾನು ಹೆಮ್ಮೆಯ ಭಾರತೀಯ ಮತ್ತು ಹೆಮ್ಮೆಯ ಕನ್ನಡಿಗ” ಎಂದು ಹೇಳಿದ್ದಾರೆ.

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement